ಎರಡನೇ ಹಂತದ ಗ್ರಾ.ಪಂ ಚುನಾವಣೆಗೆ ಅಗತ್ಯ ಸಿದ್ದತೆಗೆ ಸೂಚನೆ : ಜಿಲ್ಲಾಧಿಕಾರಿ

Source: SO News | By Laxmi Tanaya | Published on 25th December 2020, 7:26 AM | State News |

ಹಾಸನ : ಎರಡನೆ  ಹಂತದ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿರುವ ನಾಲ್ಕು ತಾಲ್ಲೂಕುಗಳಲ್ಲಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಆರ್ ಗಿರೀಶ್ ಸೂಚನೆ ನೀಡಿದರು.

 2ನೇ ಹಂತದ ಚುನಾವಣೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ತಹಶೀಲ್ದಾರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು  ಮತ ಪತ್ರಗಳ ಮುದ್ರಣಗಳ ಬಗ್ಗೆ ಮಾಹಿತಿ ಪಡೆದರು.

  ಡಿ. 26 ರಂದು ನಡೆಯುವ ಮಸ್ಟರಿಂಗ್ ಕಾರ್ಯ ವ್ಯವಸ್ಥಿತವಾಗಿ ಮಾಡಿ ಯಾವುದೇ ಗೊಂದಲಗಳಿಲ್ಲದಂತೆ ನಿರ್ವಹಿಸಿ ಎಂದು ಅವರು ಹೇಳಿದರು.

           ಬ್ಯಾಲೇಟ್ ಪೇಪರ್‍ಗಳನ್ನು ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಪರಿಶೀಲಿಸಬೇಕು, ನಂಬರಿಂಗ್ ಆಗುವುದನ್ನು ಖಾತರಿ ಪಡಿಸಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಾಗೂ ಮಾಸ್ಕ್ ಧರಿಸುವ ಬಗ್ಗೆ ಗಮನಿಸಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.

     ಪೊಲಿಂಗ್ ಸ್ಟೆಷನ್‍ಗಳಲ್ಲಿ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರಿಗೆ ಊಟದ ವ್ಯವಸ್ಥೆ ಮಾಡಬೇಕು ಗ್ರಾಮ ಲೆಕ್ಕಿಗರು, ಪಿ.ಡಿ.ಒ ಗಳ ಜೊತೆ ಸಮನ್ವಯ ಸಾಧಿಸಿ ಕರ್ತವ್ಯ ನಿರ್ವಹಿಸಿ ಎಂದರು.

    ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ವಿಡೀಯೋ ಚಿತ್ರಿಕರಣಕ್ಕೆ ವ್ಯವಸ್ಥೆ ಮಾಡಿ ಎಲ್ಲಾ ಮತಗಟ್ಟೆಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯಗೊಳಿಸಬೇಕು ಮತಗಟ್ಟೆಗಳನ್ನು ಸ್ಯಾನಿಟೈಜ್ಸ್ ಮಾಡಿರಬೇಕು ವಿಕಲಚೇತನರಿಗೆ ವಾಹನ ಮತ್ತು ಗಾಲಿ ಕುರ್ಚಿ ವ್ಯವಸ್ಥೆ ಮಾಡಬೇಕು ಎಂದು ಅವರು ಹೇಳಿದರು.

    ಸೇವಾ ಮತದಾರರಿಗೆ ಅಂಚೆ ಮತ ಪತ್ರ ನೀಡಿ ಅದು ನಿಗಧಿತ ಅವಧಿಯೊಳಗೆ ಸಂಬಂಧಿಸಿದ ತಾಲ್ಲೂಕುಗಳಿಗೆ ತಲುಪುವಂತೆ ನೋಡಿಕೊಳ್ಳಿ ಹಾಗೂ ಪೊಲಿಂಗ್  ಸಿಬ್ಬಂದಿ ಮಸ್ಟರಿಂಗ್ ದಿನವೆ ಮತದಾನ ಮಾಡುವಂತೆ ನೋಡಿಕೊಳ್ಳಿ ಕೋವಿಡ್-19 ಸೋಕಿಂತರು ಮತದಾನ ಮಾಡಲು ಅವರಿಗೆ ವಾಹನ, ಪಿ.ಪಿ.ಇ ಕಿಟ್ ವ್ಯವಸ್ಥೆ ಮಾಡಿ ಎಂದರು.

         ಮತದಾನದ  ಅಧಿಕಾರಿ ಸಂಬಂಧಿಸಿದಂತೆ ರ್ಯಾಂಡಮೈಜೆಷನ್ ನಾಳೆ ನಡೆಯಲಿದೆ ಇದೇ ರೀತಿ ಮತ ಎಣಿಕೆ ಸಿಬ್ಬಂದಿ ನಿಯೋಜನೆ ಮಾಡಿ ತರಬೇತಿ ನೀಡಿ ಎಲ್ಲಾ ತಾಲ್ಲೂಕುಗಳಲ್ಲಿ 28 ರಂದು ಇದು ಮುಕ್ತಾಯವಾಗಬೇಕು. ಮತ ಎಣಿಕೆ ಕೇಂದ್ರದಲ್ಲಿ ಕೊಠಡಿಗಳು ಹಾಗೂ ಸಿಬ್ಬಂದಿಗಳು ಹೆಚ್ಚಿದ್ದರೆ ಮತ ಎಣಿಕೆ ಸುಲಭವಾಗಲಿದೆ ಈ ಬಗ್ಗೆ ಯೋಜಿತವಾಗಿ ವ್ಯವಸ್ಥೆ ಮಾಡಿ ಎಂದು ಆರ್ ಗಿರೀಶ್ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ ಅವರು ಮಾತನಾಡಿ  ದೂರವಾಣಿ  ಮೂಲಕ ಸೇವಾ ಮತದಾರರನ್ನು ಸಂಪರ್ಕಿಸಿ ಅಂಚೆ ಮತ ಪತ್ರ ನೀಡಿ ಮಸ್ಟರಿಂಗ್ ದಿನ ಸೇವಾ ಮತದಾರರು ಅಂಚೆ ಮತದಾನ ಮಾಡಲು ವ್ಯವಸ್ಥೆ ಮಾಡಿದರೆ ಸೂಕ್ತ ಎಂದು ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ ಅವರು ತಿಳಿಸಿದರು.
 
ಈ ಸಭೆಯಲ್ಲಿ ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಮತ್ತು ಎಲ್ಲ ತಾಲ್ಲೂಕು ತಹಶೀಲ್ದಾರ್ ಹಾಜರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...