ಅನಧಿಕೃತವಾಗಿ ಅಳವಡಿಸಿರುವ ಪ್ಲೆಕ್ಸ್ ಬ್ಯಾನರು ತೆರವುಗೊಳಿಸಲು ಸೂಚನೆ

Source: S.O. News Service | Published on 6th August 2019, 7:36 PM | Coastal News | Don't Miss |

ಮಂಗಳೂರು:ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹೋರ್ಡಿಂಗ್ಸ್/ದಿಕ್ಸೂಚಿ ಫಲಕ, ಕಟೌಟ್, ಪ್ಲೆಕ್ಸ್ ಬ್ಯಾನರ್, ಬಂಟಿಂಗ್ಸ್‍ಗಳನ್ನು ಅಳವಡಿಸಿರುವುದು ಕಾನೂನು ಬಾಹಿರವಾಗಿದ್ದು ನಗರದ ಸ್ವಚ್ಚತೆ ಮತ್ತು ಸೌಂದರ್ಯಕ್ಕೆ ಅಡ್ಡಿಯಾಗುತ್ತಿರುವುದು ಕಂಡುಬರುತ್ತಿದೆ ಅಲ್ಲದೆ ಮುಂದಿನ ದಿನಗಳಲ್ಲಿ ಧಾರ್ಮಿಕ ಆಚರಣೆಗಳು, ಹಬ್ಬ ಹರಿದಿನಗಳು ಇರುವುದರಿಂದ ಅನೇಕ ಸಂಘಟಣೆಗಳು ಪ್ಲೆಕ್ಸ್ ಬ್ಯಾನರು/ ಕಟೌಟ್/ ಬಂಟಿಂಗ್ಸ್/ ಪೆÇೀಸ್ಟರ್ಸ್‍ಗಳನ್ನು ಅಳವಡಿಸುತ್ತಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ. ನಗರದ ಸ್ವಚ್ಛತೆಯನ್ನು ಮತ್ತು ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ಲೆಕ್ಸ್ ಬ್ಯಾನರು, ಕಟೌಟ್, ಪೋಸ್ಟರ್, ಬಂಟಿಂಗ್ಸ್‍ಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಅಳವಡಿಸದಂತೆ ಕೋರಲಾಗಿದೆ. ಆದರೆ ಕೆಲವು ಕಾರ್ಯಕ್ರಮ ಸಂಘಟಕರು, ಸಿನೆಮಾ ಪ್ರಚಾರಕರು ಸಾಮಾಜಿಕ, ಧಾರ್ಮಿಕ, ರಾಜಕೀಯ ಮತ್ತು ವ್ಯಾಪಾರಕ್ಕೆ ಸಂಬಂಧಿಸಿದ, ಇನ್ನಿತರ ಉದ್ದೇಶಕ್ಕಾಗಿ ಪ್ರಚುರಪಡಿಸಲು ಕಟೌಟ್ ಇತ್ಯಾದಿಗಳನ್ನು ಹಾಕುತ್ತಿರುವುದು ಕಂಡು ಬಂದಿರುತ್ತದೆ. ಈ ಅನಧಿಕೃತವಾಗಿ ಅಳವಡಿಸಿರುವ ಪ್ಲೆಕ್ಸ್ ಬ್ಯಾನರು ಇತ್ಯಾದಿಗಳು ನಗರ ಸೌಂದರ್ಯವನ್ನು ಹಾಳು ಮಾಡುತ್ತಿದ್ದು ಭಾರಿ ಪ್ರಮಾಣದ ಘನತ್ಯಾಜವು ಪರಿಸರಕ್ಕೆ ಹಾನಿಯುಂಟು ಮಾಡುತ್ತಿವೆ.
ನಗರವನ್ನು ಸ್ವಚ್ಚ ಸುಂದರ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ಅಳವಡಿಸಲಾದ ಈ ಎಲ್ಲಾ ಅನಧಿಕೃತಗಳನ್ನು ಸಂಬಂಧಪಟ್ಟ ಸಂಸ್ಥೆ/ವ್ಯಕ್ತಿಗಳು ತಕ್ಷಣ ತೆರವುಗೊಳಿಸುವಂತೆ ಸೂಚಿಸಲಾಗಿದೆ. ‘ಪ್ಲೆಕ್ಸ್ ಮುಕ್ತ ಹಬ್ಬಗಳ ಆಚರಣೆ, ಸ್ವಚ್ಛ ಪರಿಸರ ನಮ್ಮೆಲರ ರಕ್ಷಣೆ.ಇದಕ್ಕೆ ತಪ್ಪಿದಲ್ಲಿ ಪಾಲಿಕೆಯು ಮುಂದಿನ ದಿನಗಳಲ್ಲಿ ನಿರಂತರ ಕಾರ್ಯಚರಣೆಯನ್ನು ನಡೆಸಿ ಈ ಎಲಾ ಅನಧಿಕೃತಗಳನ್ನು ತೆರವುಗೊಳಿಸುವದರೊಂದಿಗೆ  ಕರ್ನಾಟಕ ತೆರೆದ ಜಾಗ ತಡೆಕಾಯ್ದೆ 1981 ಮತ್ತು ಸರಕಾರದ ಅಧಿಸೂಚನೆ ಸಂಖ್ಯೆ ಅಪಜೀ 17/ಇಪಿಸಿ 2012ಬೆಂಗಳೂರು, ದಿನಾಂಕ  11-03-2016 ರನ್ವಯ ಸಂಬಂಧಪಟ್ಟವರಿಗೆ ದಂಡನೆಯನ್ನು ವಿಧಿಸಿ ಅಂತಹವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಪ್ರಕಟಣೆ ತಿಳಿಸಿದೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...