ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಬೇಕು : ಡಾ.ಕೆ.ಎನ್. ವಿಜಯ್ ಪ್ರಕಾಶ್

Source: so news | By MV Bhatkal | Published on 10th April 2019, 1:06 AM | State News | Don't Miss |


ಹಾಸನ: ಮಕ್ಕಳು ಚಿಕ್ಕವಯಸ್ಸಿನಿಂದಲೇ ಪ್ರಬುದ್ದರಾಗಲು ಆಟ-ಪಾಠದ ಜೊತೆ ಉತ್ತಮ ಧ್ಯಾನ, ವ್ಯಾಯಾಮಗಳು ನಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಡಾ.ಕೆ.ಎನ್.ವಿಜಯ್ ಪ್ರಕಾಶ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ಮಾತನಾಡಿದ ಅವರು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಕೊಡುವ ಆಹಾರದಲ್ಲಿ ಯಾವುದೇ ತೊಂದರೆಗಳಿರಬಾರದು. ಅಪೌಷ್ಠಿಕತೆಯ ಆಹಾರವನ್ನು ನೀಡಬಾರದು ಮಕ್ಕಳಿಗೆ ಪೌಷ್ಠಿಕ ಆಹಾರವನ್ನೇ ನೀಡಬೇಕು ಅಲ್ಲದೇ ಶುಚಿತ್ವದಿಂದ ಕೂಡಿರಬೇಕು ಎಂದರಲ್ಲದೇ ಮಕ್ಕಳ ಶೌಚಾಲಯದ ಬಗ್ಗೆ ನಿಗಾವಹಿಸಬೇಕು ಹಾಗೂ ನೂತನ ಮಾದರಿಯ ಅಂಗನವಾಡಿ ಕೇಂದ್ರಗಳು, ಯಶೋಗಾಥೆಗಳು, ಉದ್ಯಾನವನಗಳು ನಿರ್ಮಾಣವಾಗಬೇಕು ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳು ಸಾಕಷ್ಟು ಅಭಿವೃದ್ದಿ ಕಾಣಬೇಕಿದ್ದು, ನಮ್ಮ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ನೆರೆ ಜಿಲ್ಲೆಗಳಿಗೆ ಮಾದರಿಯಾಗುವಂತೆ ಶ್ರಮಿಸಬೇಕು. ಇದಕ್ಕೆ ಕಾರ್ಯಕರ್ತೆಯರು ಸಹಕರಿಸಬೇಕು. ಹಾಗೆಯೇ ಕೇಂದ್ರದ ಅಭಿವೃದ್ದಿಗೆ ಯಾವುದೇ ಲೋಪವಿರದಂತೆ ಕಾರ್ಯನಿರ್ವಹಿಸಬೇಕು. ಈ ಸಂಬಂಧ ಅಸಂಬದ್ದವಾಗಿ ಕೆಲಸ ಮಾಡುತ್ತಿದ್ದರೆ ಅಂತಹವರ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಂಗನವಾಡಿ ಮೇಲ್ವಿಚಾರಕರಿಗೆ ಸೂಚಿಸಿದರು.
ಮಾತೃಪೂರ್ಣ, ಮಾತೃಶ್ರೀ ಯೋಜನೆಯಡಿ ಬಾಣಂತಿಯರು ಹಾಗೂ ಗರ್ಭಿಣಿಯರಿಗೆ ನೀಡುವ ಎಲ್ಲಾ ಕಿಟ್‍ಗಳನ್ನು ವ್ಯವಸ್ಥಿತವಾಗಿ ನೀಡಬೇಕು. ಅಲ್ಲದೇ ಮಕ್ಕಳಿಗೆ ನೀಡುವ ಆಹಾರ ಪೂರೈಕೆಯ ಬಗ್ಗೆ ತೀವ್ರವಾದ ಅಸಮಾಧಾನವಿದ್ದು, ಇನ್ನು ಮುಂದೆ ಈ ರೀತಿ ನಡೆಯಬಾರದು ಎಂದು ಅವರು ತಿಳಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಭಾಷೆಗೆ ಹೆಚ್ಚಿನ ಗಮನಹರಿಸಿ ಅವುಗಳನ್ನು ತಿದ್ದಬೇಕು. ಗ್ರಾಮೀಣ ಪ್ರದೇಶದ ಮಕ್ಕಳೇ ಹೆಚ್ಚಿದ್ದು ಮಕ್ಕಳಲ್ಲಿನ ನ್ಯೂನತೆಯನ್ನು ಕಂಡು ಸರಿಪಡಿಸುವುದು ಮೇಲ್ವಿಚಾರಕರ ಆದ್ಯ ಕರ್ತವ್ಯ ಎಂದು ಡಾ.ಕೆ.ಎನ್.ವಿಜಯ್ ಪ್ರಕಾಶ್ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಡಾ.ಸತೀಶ್, ಆರ್.ಸಿ.ಹೆಚ್.ಅಧಿಕಾರಿ ಡಾ|| ಜನಾರ್ಧನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪಾಪಬೋವಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಅಂಗನವಾಡಿ ಮೇಲ್ವಿಚಾರಕರು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...