ಒಡಿಶಾ ರೈಲು ದುರಂತ; ತನಿಖೆ ಸಿಬಿಐಗೆ ಹಸ್ತಾಂತರಿಸಲು ರೈಲ್ವೆ ಮಂಡಳಿ ಶಿಫಾರಸು; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

Source: Vb | By I.G. Bhatkali | Published on 5th June 2023, 6:27 PM | National News |

ಭುವನೇಶ್ವರ: ಒಡಿಶಾದ ಬಾಲಾಸೋರ್‌ನಲ್ಲಿ 275 ಮಂದಿಯನ್ನು ಬಲಿತೆಗೆದುಕೊಂಡ ತ್ರಿವಳಿ ರೈಲು ದುರಂತದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ರೈಲ್ವೆ ಮಂಡಳಿಯು ಶಿಫಾರಸು ಮಾಡಿದೆಯೆಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವಿವಾರ ತಿಳಿಸಿದ್ದಾರೆ.

“ಅವಘಡದ ಸನ್ನಿವೇಶ, ಆಡಳಿತಕ್ಕೆ ದೊರೆತ ಮಾಹಿತಿಗಳನ್ನು ಪರಿಗಣನೆಗೆ ತೆಗೆದುಕೊಂಡು ಬಾಲಾಸೋ‌ ತ್ರಿವಳಿ ರೈಲು ದುರಂತದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕೆಂದು ರೈಲ್ವೆ ಮಂಡಳಿಯು ಶಿಫಾರಸು ಮಾಡಿದೆ' ಎಂದವರು ಹೇಳಿದರು. ಈ ಭೀಕರ ರೈಲು ದುರಂತದ ಬಗ್ಗೆ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯವರ ನೇತೃತ್ವದ ತಜ್ಞರ ಸಮಿತಿಯಿಂದ ತನಿಖೆ ನಡೆಸಬೇಕೆಂಬ ಮನವಿಯನ್ನು ಕೂಡಾ ಸಲ್ಲಿಸಲಾಗಿದೆಯೆಂದು ಅವರು ತಿಳಿಸಿದರು.

ರೈಲ್ವೆಸಚಿವರು ಈ ಮೊದಲು ತಾಂತ್ರಿಕ ದೋಷದಿಂದಾಗಿ ಈ ರೈಲು ಅವಘಡ ಸಂಭವಿಸಿದೆ ಹಾಗೂ ಶೀಘ್ರದಲ್ಲೇ ಸಲ್ಲಿಕೆಯಾಗಲಿರುವ ವರದಿಯಲ್ಲಿ ಇವೆಲ್ಲವನ್ನೂ ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದರು. ರೈಲು ಹಳಿಯಲ್ಲಿನ ಇಲೆಕ್ಟ್ರಾನಿಕ್ ಇಂಟರ್‌ಾಕಿಂಗ್ ವ್ಯವಸ್ಥೆ ಹಾಗೂ ಪಾಯಿಂಟ್ ಮೆಶಿನ್‌ನಲ್ಲಿ ಬದಲಾವಣೆ ಮಾಡಿದ ಪರಿಣಾವಾಗಿ ಅವಘಡ ಉಂಟಾಗಿದೆ ಎಂದವರು ತಿಳಿಸಿದ್ದರು.

“ತ್ರಿವಳಿ ರೈಲು ಅವಘಡದ ಕುರಿತಾಗಿ ನಡೆಸಲಾದ ಪ್ರಾಥಮಿಕ ತನಿಖೆಯಲ್ಲಿ ರೈಲ್ವೆ ಚಾಲಕನ ಯಾವುದೇ ತಪ್ಪು ಕಂಡುಬಂದಿಲ್ಲ ಹಾಗೂ ಇಲೆಕ್ಟ್ರಾನಿಕ್ ಉಪಕರಣಗಳಲ್ಲಿಯೂ ಯಾವುದೇ ದೋಷಗಳು ಇಲ್ಲವೆಂದು ತಿಳಿದುಬಂದಿದೆ. ಇದೊಂದು ವಿಧ್ವಂಸಕ ಕೃತ್ಯವಾಗಿರುವ ಸಾಧ್ಯತೆಯಿದೆಯೇ ಎಂಬ ದೃಷ್ಟಿಕೋನದಲ್ಲಿಯೂ ತನಿಖೆ ನಡೆಸಲಾಗುತ್ತಿದೆ' ಎಂದವರು ತಿಳಿಸಿದ್ದರು.


'ಸಿಗ್ನಲಿಂಗ್ ವ್ಯವಸ್ಥೆಯಲ್ಲಾಗಿರುವ ಹಸ್ತಕ್ಷೇಪ'ದ ಕಾರಣದಿಂದಾಗಿ ಕೋರಮಂಡಲ ಎಕ್ಸ್‌ಪ್ರೆಸ್ ಅವಘಡಕ್ಕೆ ತುತ್ತಾಗಿದೆಯೆಂದು ಮೇಲ್ನೋಟಕ್ಕೆ ಕಂಡುಬಂದಿರುವುದಾಗಿ ರೈಲ್ವೆ ಇಲಾಖೆ ತಿಳಿಸಿದೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...