ಕಾರವಾರ: ಪ. ಜಾತಿ ಪಂಗಡದವರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ; ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

Source: S O News | By I.G. Bhatkali | Published on 1st December 2023, 1:16 AM | Coastal News |

ಕಾರವಾರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಯಾವುದೇ ರೀತಿಯ ಸಮಸ್ಯೆಗಳಾದರೆ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಿವಿಧ ಇಲಾಖೆಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕುಂದುಕೊರತೆಗಳ ಮತ್ತು ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು.

ಪ.ಜಾತಿ ಮತ್ತು ಪಂಗಡದವರ ಸಮಸ್ಯೆಗಳನ್ನು ಆಲಿಸಿ, ಸೂಕ್ತ ಪರಿಹಾರ ಒದಗಿಸಲು ಪ್ರತಿ 4 ತಿಂಗಳಿಗೊಮ್ಮೆ ಸಭೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ವಿಭಾಗೀಯ ಮಟ್ಟದಲ್ಲಿ ಕುಂದುಕೊರತೆ ಸಭೆ ನಡೆಸಲಾಗುವುದು ಹಾಗೂ ಇಂದು ಸ್ವೀಕರಿಸಿದ ಅರ್ಜಿಗಳನ್ನು ಕೇವಲ ಅರ್ಜಿಯಾಗಿ ಪರಿಶೀಲಸದೇ ದೂರು ಎಂದು ಪರಿಗಣಿಸಿ iಠಿgಡಿs ಪೋರ್ಟಲ್ ನಲ್ಲಿ ಹಾಕಿ ನಿಮ್ಮ ಅರ್ಜಿಗಳ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಲು ಅವಕಾಶ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ಮುಖ್ಯವಾಗಿ 30-40 ವರ್ಷಗಳಿಂದ ಅರಣ್ಯ ಮತ್ತು ಕಂದಾಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಜಮೀನುಗಳಿಗೆ ಸಂಬAಧಿಸಿದAತೆ ಸಮಿತಿ ರಚನೆಯಾಗಿ ಪ್ರಸ್ತಾಪವನೆ ಸಲ್ಲಿಸಬೇಕಾಗುತ್ತದೆ. ಈಗ ಸಮಿತಿ ರಚನೆಯಾಗುವ ಪೂರ್ವದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸರ್ವೇ ಮಾಡಲು ತೀರ್ಮಾನಿಸಲಾಗಿದ್ದು, ಸರ್ವೇ ನಂತರದಲ್ಲಿ ಈ ಹಿಂದೆ ಸಲ್ಲಿಸಿದ ಅರ್ಜಿಗಳ ಸರ್ವೇ ಮತ್ತು ಜಿಪಿಎಸ್ ಆಗಿ ಅರಣ್ಯ ಇಲಾಖೆಯಿಂದ ಡಿ ನೋಟಿಪಿಕೇಶನ್ ಪ್ರಕ್ರಿಯೆಯ 1094 ಜಮೀನುಗಳಿಗೆ ತಕ್ಷಣದಲ್ಲಿ ಮಾಡಲಾಗುತ್ತದೆ. ನಂತರದಲ್ಲಿ ಸರ್ವೇ ಕಾರ್ಯ ಮಾಡಿ ಸಮಿತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದರು.

ಭೂ ಹಿಡುವಳಿಗೆ ಸಂಬAಧಿಸಿದAತೆ ಸರ್ಕಾರದಿಂದ ಸಮಿತಿಗೆ ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲಾಗುತ್ತಿದ್ದು, ಸದಸ್ಯರ ಆಯ್ಕೆ ನಂತರ ಸಮಿತಿ ಮುಂದೆ ಜಿಲ್ಲೆಯಲ್ಲಿ 57 ರಡಿಯಲ್ಲಿ ಸಲ್ಲಿಸಲಾದ ಅರ್ಜಿಗಳನ್ನು ಪರಶೀಲಿಸಿ 6 ತಿಂಗಳ ಅವಧಿಯಲ್ಲಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದರು.
ಕAದಾಯ ಇಲಾಖೆ ಸಂಬAಧಿಸಿದAತೆ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಸರ್ಕಾರಿ ಜಮೀನು ಅತೀಕ್ರಮಣ ಮಾಡಿದ ನಿವೇಶನ ಮತ್ತು ವಸತಿರಹಿತರಿಗೆ 94 ಸಿ ಮತ್ತು ಸಿಸಿಯಡಿಯಲ್ಲಿ ಈಗಾಗಲೇ ಅರ್ಜಿ ಹಾಕಿದವರಿಗೆ ತಹಶೀಲ್ದಾರ ಪರಿಶೀಲಿಸಿ ಅಂತವರಿಗೆ ಹಕ್ಕುಪತ್ರ ನೀಡಲು ಕ್ರಮವಹಿಸಲಾಗುವುದು ಎಂದರು.
ವಸತಿ ಸಮಸ್ಯೆಗೆ ಸಂಬAಧಿಸಿದAತೆ ಅಗತ್ಯ ನಿವೇಶನ ಸಿಗದ ಕಾರಣ ನಗರ ಪ್ರದೇಶದಲ್ಲಿ ಗೃಹ ನಿರ್ಮಾಣ ಮಂಡಳಿ ವತಿಯಿಂದ ಬಹು ಮಹಡಿ ಕಟ್ಟಡ ನಿರ್ಮಿಸಿ ನೀಡಲಾಗುತ್ತದೆ ಪೌರಕಾರ್ಮಿಕರಿಗೆ ಕೂಡ ಗೃಹಭಾಗ್ಯ ಯೋಜನೆಯಡಿಯಲ್ಲಿ ಮನೆ ನಿರ್ಮಾಣ ಮಾಡಿ ನೀಡಲಾಗುತ್ತಿದೆ ಎಂದರು.

ಜಾತಿ ಪ್ರಮಾಣಪತ್ರ, ಸಿಂಧುತ್ವ, ಅಂಬೇಡ್ಕರ್ ಭವನಕ್ಕೆ ಸಂಬAಧಿಸಿದ ಅರ್ಜಿಗಳನ್ನು ಹಂತ ಹಂತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗಿವುದು ಎಂದರು.

ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಬುಡ್ನಾ ಸಿದ್ದಿ ಮಾತನಾಡಿ ಜಿಲ್ಲಾಧಿಕಾರಿ ಅವರ ಮುತುವರ್ಜಿಯಿಂದ ಸಮುದಾಯಗಳ ಸಮಸ್ಯೆಗಳನ್ನು ಆಲಿಸಿರುವುದು ಶ್ಲಾಘನೀಯ. ಇಂತಹ ಸಭೆಗಳಿಂದ ಸಮುದಾಯಗಳ ಜಲ್ವಂತ ಸಮಸಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ದೀಪಕ ಕುಡಾಳಕರ ಮಾತನಾಡಿ ಜಿಲ್ಲೆಯಲ್ಲಿ ಆಶ್ರಯ ಯೋಜನೆಯಡಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಮನೆ ನಿರ್ಮಾಣ ಮಾಡುವ ಯೋಜನೆ ಪುನಃ ಸರ್ಕಾರಕ್ಕೆ ಹಿಂದಕ್ಕೆ ಹೋಗುತ್ತಿದ್ದು, ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನಿವೇಶನ ನೀಡಿದ್ದಲ್ಲಿ ವಸತಿ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ. ಹಾಗೂ ಜಿಲ್ಲೆಯ ಮೆಟ್ರಿಕ್ ಪೂರ್ವ ವಸತಿ ನಿಲಯಗಳು ದುರಸ್ತಿ ಹಂತದಲ್ಲಿದ್ದು, ಹಾಗೂ ಕೆಲವು ಕಡೆ ಬಾಡಿಗೆ ಆಧಾರದಲ್ಲಿ ವಸತಿ ನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ಸುರ್ಜಿತ ಸೌಲಭ್ಯಗಳಿಲ್ಲದೆ ವಿಧ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಹಾಗೂ ಜಿಲ್ಲೆಯಲ್ಲಿ ಕೆಲವು ಜನ ಪರಿಶಿಷ್ಟ ಜಾತಿ ಮತ್ತು ಪಂಗಡ ಎಂದು ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಂಡಿದ್ದು, ಇದರಿಂದ ನೈಜ ಅರ್ಹರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಈ ಬಗ್ಗೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿಯಲ್ಲಿ ಮನವಿ ಮಾಡಿದರು.

ಹಳಿಯಾಳದ ಹನುಮಂತಪ್ಪ ಹರಿಜನ , ಹಳಿಯಾಳ ಮತ್ತು ದಾಂಡೇಲಿಯಲ್ಲಿ ಅಕ್ರಮ ಕಳ್ಳಬಟ್ಟಿ ಸರಾಯಿ ಮಾರಾಟದಿಂದ ಬಡ ಮತ್ತು ಮಧ್ಯಮ ವರ್ಗದ ಯುವಕರು ಬಲಿಯಾಗುತ್ತಿದ್ದು, ಈ ಸಂಬAಧ ಸಂಬAಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ ಹಾಗೂ ಈ ಭಾಗದಲ್ಲಿ ಮಟ್ಕಾ ಮತ್ತು ಇಸ್ಪೀಟ್ ಜೂಜಾಟ ಹೆಚ್ಚಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ಮನವಿ ಮಾಡಿದರು.

ಅರಣ್ಯಹಕ್ಕು ಸಮಿತಿಯಲ್ಲಿ ಅರ್ಜಿ ಸಲ್ಲಿಸಿದರೂ ಸಹ ಹಕ್ಕುಪತ್ರ, ಜಿಪಿಎಸ್ ಆಗಿರುವುದಿಲ್ಲ ಹಾಗೂ ಜಿಪಿಎಸ್ ಆದ ಜಮೀನುಗಳಿಗೆ ಪಟ್ಟ ಸಿಕ್ಕಿರುವುದಿಲ್ಲ ಹಾಗೂ ಪೌಷ್ಟಿಕ ಆಹಾರ ಸರಿಯಾದ ಸಮಯಕ್ಕೆ ಸಿಗದೆ ತೊಂದರೆಯಾಗುತ್ತಿದೆ ಎಂದು ಸಿದ್ದಿ ಸಮುದಾಯದ ವ್ಯಕ್ತಿಯೊಬ್ಬರು ತಿಳಿಸಿದರು.

ಕಳೆದ 30 ವರ್ಷದಿಂದ ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದು, ನಮ್ಮ ಮೂಲಭೂತ ಹಕ್ಕುಗಳನ್ನು ನೀಡಲು ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಯಲ್ಲಾಪುರದ ಭೀಮ ಆರ್ಮಿಯ ಮಹಿಳಾ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಾತಿ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರ ಸರಿಯಾದ ಸಮಯಕ್ಕೆ ನೀಡದಿರುವುದರದ ಸರ್ಕಾರಿ ಹುದ್ದೆ ಮತ್ತು ಸರ್ಕಾರಿ ಸೌಲಭ್ಯದಿಂದ ವಂಚಿತರಾಗುತ್ತಿದ್ದೇವೆ ಎಂದು ಭಟ್ಕಳದ ರೇಣುಕಾ ಎಂಬ ಯುವತಿಯೊರ್ವರು ತಮ್ಮ ಅಳಲನ್ನು ಜಿಲ್ಲಾಧಿಕಾರಿ ಮುಂದೆ ತೊಡಿಕೊಂಡರು.

ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಉಮೇಶ ವೈ.ಕೆ, ತಹಶೀಲ್ದಾರರು ಇತರರು ಇದ್ದರು.

Read These Next