ಕರ್ನಾಟಕ: ಸಂಪರ್ಕಿತರಲ್ಲಿ ಒಮೈಕ್ರಾನ್ ಪತ್ತೆಯಾಗಿಲ್ಲ; ಸುಧಾಕರ್‌

Source: VB | By I.G. Bhatkali | Published on 7th December 2021, 8:20 PM | State News |

ಬೆಂಗಳೂರು: ರಾಜ್ಯದಲ್ಲಿ ಪತ್ತೆಯಾದ ಒಮೈಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಯಾವುದೇ ಆರೋಗ್ಯ ಸಮಸ್ಯೆ ಅಥವಾ ರೋಗ ಲಕ್ಷಣ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಸೋಂಕಿತರ ಸಂಪರ್ಕ ಇದ್ದವರ ಜಿನೊಮಿಕ್ಸ್ ಸೀಕ್ವೆನ್ಸ್ ವರದಿ ಇನ್ನೂ ಬಂದಿಲ್ಲ. ಬೇರೆ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ ಎಂದರು. ನಮ್ಮ ರಾಜ್ಯದಲ್ಲಿ ಇಲ್ಲಿಯತನಕ ಎರಡು ಪ್ರಕರಣಗಳು ಮಾತ್ರ ಇವೆ. ಅವರ ಸಂಪರ್ಕಿತರಿಗೆ ಯಾವುದೇ ಸಮಸ್ಯೆಗಳು, ಲಕ್ಷಣಗಳು ಕಂಡುಬಂದಿಲ್ಲ. ಬೌರಿಂಗ್ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ನೀಡುತ್ತಿದ್ದು, ಆಸ್ಪತ್ರೆ ನಿರ್ದೇಶಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಒಮೈಕ್ರಾನ್ ಸೋಂಕಿತರ ಸಂಪರ್ಕ ಹೊಂದಿದ್ದವರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಅವರು ತಿಳಿಸಿದರು.

ಎರಡು ಡೋಸ್ ಲಲಸಿಕೆ ತೆಗೆದುಕೊಂಡ ವರಲ್ಲಿ ಒಮೈಕ್ರಾನ್ ಸೋಂಕು ತೀವ್ರತೆ ಇರುವುದಿಲ್ಲ. ಒಂದು ಡೋಸ್‌ನಿಂದ ಸಂಪೂರ್ಣ ರೋಗ ನಿರೋಧಕ ಶಕ್ತಿ ಬರುವುದಿಲ್ಲ. ಎರಡೂ ಡೋಸ್ ತೆಗೆದುಕೊಂಡಾಗ ಮಾತ್ರ ಸಂಪೂರ್ಣ ರೋಗ ನಿರೋಧಕ ಶಕ್ತಿ ಬರುತ್ತದೆ. ಆದ್ದರಿಂದ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ.

 ಡಾ.ಕೆ.ಸುಧಾಕರ್,
ಆರೋಗ್ಯ, ವೈದ್ಯಕೀಯ ಶಿಕ್ಷಣ ಸಚಿವ

ಒಮೈಕ್ರಾನ್ ವಿಚಾರದಲ್ಲಿ ದೊಡ್ಡ ವ್ಯಾಖ್ಯಾನ ಮತ್ತು ಆತಂಕ ಪಡುವಂತಹದ್ದು ಇಲ್ಲ. ಇದಕ್ಕಿಂತ ಹೆಚ್ಚು ಆತಂಕಕಾರಿಯಾಗಿದ್ದ ಡೆಲ್ಟಾ ರೂಪಾಂತರಿ ಯನ್ನೇ ನಾವು ಎದುರಿಸಿದ್ದೇವೆ. ಡೆಲ್ವಾಕ್ಕೆ ಹೋಲಿಕೆ ಮಾಡಿದರೆ, ಒಮೈಕ್ರಾನ್ ಹರಡು ವಿಕೆಯಲ್ಲಿ ಮಾತ್ರ ಆತಂಕ ಸೃಷ್ಟಿಸಿದೆ. ಇದರ ತೀವ್ರತೆ ವಿಶ್ವದಲ್ಲಿ ಎಲ್ಲೂ ನೋಡಿಲ್ಲ ಎಂದು ಅವರು ಹೇಳಿದರು.

ಬೋಟ್ಸ್ವಾನ, ಸೌತ್ ಆಫ್ರಿಕಾ ಸೇರಿದಂತೆ ಒಮೈಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಿರುವ ದೇಶಗಳಲ್ಲಿ ತೀವ್ರತೆ ಕಾಣುತ್ತಿಲ್ಲ. ಈ ವೈರಸ್ ಲಕ್ಷಣಗಳು ಮೃದುವಾಗಿವೆ. ಹೀಗಾಗಿ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ. ಇದು ಬಹಳ ಬೇಗ ಹರಡುವುದರಿಂದ ಮುನ್ನೆಚ್ಚರಿಕೆ ಅವಶ್ಯಕವಾಗಿದೆ. ಇದು ಹರಡಬಾರದು ಅಂದರೆ ಲಸಿಕಾ ಕಾರ್ಯಕ್ರಮ ವೇಗವಾಗಿ ನಡೆಯಬೇಕು ಎಂದು ಸುಧಾಕರ್ ತಿಳಿಸಿದರು.

ರಾಜ್ಯದಲ್ಲಿ ಮೊದಲ ಡೋಸ್ ಲಸಿಕೆ ಪಡೆದವರ ಪ್ರಮಾಣ ಶೇ.93ಕ್ಕೂ ಹೆಚ್ಚಾಗಿದೆ. 2ನೇ ಡೋಸ್ ಪಡೆದವರ ಪ್ರಮಾಣ ಶೇ.64ರಷ್ಟು ಇದೆ. ಲಸಿಕೆ ನೀಡಿದ ವಿಚಾರದಲ್ಲಿ ದೊಡ್ಡ ರಾಜ್ಯಗಳ ಪೈಕಿ ಕರ್ನಾಟಕ ದೇಶದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದೆ. ಡಿಸೆಂಬರ್ ಅಂತ್ಯದ ಒಳಗೆ ಲಸಿಕಾ ಕಾರ್ಯಕ್ರಮ ಮುಗಿಸುವ ಉದ್ದೇಶವಿದೆ. ಅದಕ್ಕಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನೂ ಕೂಡ ಸುಮಾರು 70 ಲಕ್ಷ ಲಸಿಕೆ ದಾಸ್ತಾನು ಇದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ ಎಂದು ಅವರು ಹೇಳಿದರು.

ಅಂತರ್‌ರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ನಿರ್ಣಯ ತೆಗೆದುಕೊಳ್ಳಲಿದೆ. ಕೇಂದ್ರ ಸರಕಾರ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂದು ಅಧ್ಯಯನ ಮಾಡುತ್ತಿದೆ. ಬೇರೆ ಬೇರೆ ದೇಶಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಕೂಡ ಅಧ್ಯಯನ ಮಾಡುತ್ತಿದೆ. ಸಮಗ್ರ ವರದಿ ಬಂದ ಮೇಲೆ ಏನು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ನಿರ್ಧರಿಸಲಿದೆ ಎಂದು ಸುಧಾಕರ್‌ ತಿಳಿಸಿದರು.

ಯಾವುದೇ ಸಾಂಕ್ರಾಮಿಕ ರೋಗದ ಇತಿಹಾಸ ನೋಡಿದಾಗ 2ನೇ ಅಲೆಯೇ ದೊಡ್ಡ ಪ್ರಮಾಣದ್ದಾಗಿದೆ. 3ನೇ ಅಲೆ ಕಡಿಮೆ ಪ್ರಭಾವ ಬೀರಿದೆ. ಇದಕ್ಕೆ ಐತಿಹಾಸಿಕ ಸಾಕ್ಷಿ ಕೂಡ ಇದೆ. ಹಿಂದೆ ಬಂದಿರುವ ಸಾಂಕ್ರಾಮಿಕ ರೋಗಗಳನ್ನು ನೋಡಿದಾಗ ಮೊದಲ ಅಲೆಗಿಂತ ಎರಡನೇ ಅಲೆ ತೀವ್ರವಾಗಿತ್ತು. 3 ಮತ್ತು 4ನೇ ಅಲೆ ಬಂದರೂ ಅದರ ತೀವ್ರತೆ ಕಡಿಮೆ ಇತ್ತು ಎಂದು ಅವರು ಹೇಳಿದರು.

ಮಕ್ಕಳ ಮೇಲೆ ಡೆಲ್ಟಾ ಪರಿಣಾಮ ಬೀರಿಲ್ಲ. ಡೆಲ್ಟಾಗೆ ಹೋಲಿಕೆ ಮಾಡಿದರೆ ಇದರ ತೀವ್ರತೆ ಕಡಿಮೆ. ಇದು ಮಕ್ಕಳಿಗೆ ಬಂದರೂ ಕೂಡ ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂದು ವಿಜ್ಞಾನಿಗಳು ಮತ್ತು ತಜ್ಞರು ಹೇಳಿದ್ದಾರೆ ಎಂದು ಅವರು ತಿಳಿಸಿದರು.

Read These Next

ಕೊಡಗಿನಲ್ಲಿ ಮುಂದುವರಿದ ಭಾರೀ ಮಳೆ; ಹಲವೆಡೆ ರಸ್ತೆ ಸಂಪರ್ಕ ಕಡಿತ: ಜನಜೀವನ ಅಸ್ತವ್ಯಸ್ತ

ಕೊಡಗು ಜಿಲ್ಲೆಯಲ್ಲಿ ಆಶ್ಲೇಷಾ ಮಳೆ ಆತಂಕವನ್ನು ಸೃಷ್ಟಿಸಿದೆ. ಕಳೆದ ಎರಡು ದಿನಗಳಿಂದ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ರೆಡ್ ...

ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣ; ಪ್ರಥಮ ರೆಂಕ ಅಭ್ಯರ್ಥಿ ಸಹಿತ ಎಂಟು ಮಂದಿ ಸೆರೆ

ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಲಿಖಿತ ಪರೀಕ್ಷೆಯಲ್ಲಿ ಮೊದಲನೇ ರೇಂಕ್ ಬಂದಿದ್ದ ಅಭ್ಯರ್ಥಿ ಸೇರಿ ಎಂಟು ಮಂದಿಯನ್ನು ಸಿಐಡಿ ...

ಎದೆಹಾಲು ಮಕ್ಕಳಿಗೆ ಅಮೃತ ಸಮಾನ : ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ - ಡಾ.ಟಿ.ಎ. ಶೇಪೂರ

ಧಾರವಾಡ : ಎದೆಹಾಲು ಮಕ್ಕಳಿಗೆ ಅಮೃತ ಸಮಾನ. ಪ್ರತಿ ತಾಯಿಯು ತನ್ನ ಮಗುವಿಗೆ ತಪ್ಪದೇ ಎದೆಹಾಲು ಉಣಿಸಬೇಕು. ಇದರಿಂದ ಮಗುವಿನಲ್ಲಿ ...

ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ. ಆಗಸ್ಟ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಲು ಸಚಿವ ಸಿ.ಸಿ.ಪಾಟೀಲ್ ಸೂಚನೆ

ಬಳ್ಳಾರಿ : ಶಾಸಕರ ಅನುದಾನದ ಕಾಮಗಾರಿಗಳು, ಎಚ್‍ಎಸ್‍ಡಿಪಿ, ಎಸ್‍ಸಿಪಿ-ಟಿಎಸ್‍ಪಿ ಸೇರಿದಂತೆ ಇಲಾಖೆಗೆ ನಿಗದಿಯಾಗಿರುವ ಎಲ್ಲಾ ಬಾಕಿ ...