ಸೆ. 25 ರಂದು “ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

Source: sonews | By Staff Correspondent | Published on 23rd September 2019, 7:12 PM | Coastal News |

ಕಾರವಾರ: “ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಸೆಪ್ಟಂಬರ 25 ರಂದು ಆಚರಿಸಲಾಗುತ್ತಿದ್ದು, ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ 1-19 ವರ್ಷದೊಳಗಿನ   ಎಲ್ಲಾ ಮಕ್ಕಳಿಗೂ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಅಲ್ಬೆಂಡೊಜಾಲ್ ಮಾತ್ರೆ ಮಧ್ಯಾಹ್ನ ಊಟದ ತರುವಾಯೆ ಸೇವನೆಯ ಬಗ್ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.  

ಎಲ್ಲಾ ಪಾಲಕರು ತಮ್ಮ ಮಕ್ಕಳು ಮಾತ್ರೆಗಳನ್ನು ಸೇವಿಸಿರುವ ಬಗ್ಗೆ ಖಚಿತಪಡಿಸಿಕೊಂಡು ಮಕ್ಕಳಲ್ಲಿ ಕಂಡು ಬರುವ ಜಂತುಹುಳು ಬಾಧೆ ನಿವಾರಣೆಯಲ್ಲಿ ಸಹಕಾರ ನೀಡಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ  ಡಾ| ಜಿ.ಎನ್. ಅಶೋಕ ಕುಮಾರ ವಿನಂತಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...