ಉಡುಪಿಯಲ್ಲಿ ಲಾಕ್ ಡೌನ್ ಆಗಿರುವ ಗ್ರಾಪಂ ವ್ಯಾಪ್ತಿಯಲ್ಲಿ ಜೂನ್ 7 ಮತ್ತು 8ರಂದು ಬೆ. 6ರಿಂದ 10 ರ ವರೆಗೆ ಅಗತ್ಯ ಸಾಮಾಗ್ರಿ ಖರೀದಿಸಲು ಅವಕಾಶ

Source: SO News | By Laxmi Tanaya | Published on 6th June 2021, 9:40 AM | Coastal News |

ಉಡುಪಿ: 50 ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳಿರುವ ಲಾಕ್ ಡೌನ್ ಮಾಡಲಾಗಿರುವ ಗ್ರಾಮ ಪಂಚಾಯತ್ ವ್ಯಾಫ್ತಿಯಲ್ಲಿ ಸಾರ್ವಜನಿಕರು ಅಗತ್ಯ ಸಾಮಾಗ್ರಿಗಳನ್ನು ಖರೀದಿಸಲು ಜೂನ್ 7 ಮತ್ತು 8 ರಂದು ಬೆಳಿಗ್ಗೆ 6 ರಿಂದ 10 ರ ವರೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ 50 ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳಿರುವ ಗ್ರಾಮ ಹಾಗೂ ಅಂತಹ ಪಂಚಾಯತ್‌ಗಳ ಲಗತ್ತಾಗಿರುವ ಸುಮಾರು 40 ಗ್ರಾಮ ಪಂಚಾಯತ್‌ಗಳನ್ನು ಈಗಾಗಲೇ ಸಂಪೂರ್ಣವಾಗಿ ಲಾಕ್‌ಡೌನ್ ಆದೇಶ ಮಾಡಲಾಗಿದೆ.ಇಂತಹ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ಜೂನ್ 7 ಮತ್ತು 8 ರಂದು ಪೂರ್ವಾಹ್ನ 6.00 ರಿಂದ ಪೂರ್ವಾಹ್ನ 10.00ರ ವರೆಗೆ ತಮಗೆ ಅಗತ್ಯವಾಗಿ ಬೇಕಾಗಿರುವ ಆಹಾರ ಸಾಮಾಗ್ರಿಗಳನ್ನು ಖರೀದಿ ಮಾಡಲು ಅನುಕೂಲವಾಗುವಂತೆ ವಿನಾಯಿತಿ ನೀಡಲಾಗಿರುತ್ತದೆ. ಸದ್ರಿ ಗ್ರಾಮ ಪಂಚಾಯತ್‌ಗಳಲ್ಲಿ ಲಾಕ್‌ಡೌನ್‌ನ್ನು ಮುಂದುವರೆಸುವುದೇ ಅಥವಾ ಬೇಡವೇ ಎಂಬ ಬಗ್ಗೆ ಜೂನ್ 8 ರಂದು ನಿರ್ಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...