ಹೊಸದಿಲ್ಲಿ: ರೈತರ ಪ್ರತಿಭಟನೆಗೆ ನೂರು ದಿನ ಕರಾಳ ದಿನಾಚರಣೆ

Source: VB | By S O News | Published on 7th March 2021, 6:44 PM | National News |

ಹೊಸದಿಲ್ಲಿ: ಕೇಂದ್ರದ ಮೂರು ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ದಿಲ್ಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಶನಿವಾರ ನೂರನೇ ದಿನವನ್ನು ಪ್ರವೇಶಿಸಿದ್ದು, ಕರಾಳ ದಿನವನ್ನು ಆಚರಿಸಿದ ರೈತರು 136 ಕಿ.ಮೀ.ಉದ್ದದ ಕುಂಡ್ಲಿ-ಮನೇಸರ್-ಪಲ್ವಾಲ ಷಟ್ಟಥ ಹೆದ್ದಾರಿಯಲ್ಲಿ ಕೆಲವು ಕಡೆ ತಡೆಗಳನ್ನು ನಿರ್ಮಿಸಿದ್ದರು. ಇದರಿಂದಾಗಿ ಸಾವಿರಾರು ವಾಹನಗಳು, ಪ್ರಯಾಣಿಕರು ಹೆದ್ದಾರಿಯಲ್ಲಿ ಬಾಕಿಯಾಗಿದ್ದರು. ಬೆಳಗ್ಗೆ 11 ಗಂಟೆಗೆ ಆರಂಭವಾಗಿದ್ದ ರಸ್ತೆ ತಡೆಯು ಮಧ್ಯಾಹ್ನ ಮೂರು ಗಂಟೆಗೆ ಅಂತ್ಯಗೊಂಡಿತು. ಪ್ರತಿಭಟನಾಕಾರರು ತುರ್ತು ವಾಹನಗಳ ಸಂಚಾರಕ್ಕೆ ಯಾವುದೇ ಅಡ್ಡಿಯನ್ನುಂಟು ಮಾಡಿರಲಿಲ್ಲ.

ಪ್ರತಿಭಟನಾನಿರತ ರೈತ ಸಂಘಟನೆಗಳ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಶನಿವಾರದ 'ಚಕ್ಕಾ ಜಾಮ್'ಗೆ ಕರೆನೀಡಿತ್ತು. ಪ್ರತಿಭಟನೆ ಶಾಂತಿಯುತವಾಗಿತ್ತು ಎಂದು ಭಾರತೀಯ ಕಿಸಾನ್ ಯೂನಿಯನ್ (ದಕೊಂಡಾ)ನ ಪ್ರಧಾನ ಕಾರ್ಯದರ್ಶಿ ಜಗಮೋಹನ್ ಸಿಂಗ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಕರಾಳ ದಿನಾಚರಣೆ: ಕೃಷಿ ಕಾನೂನುಗಳನ್ನು ಹಿಂದೆಗೆದುಕೊಳ್ಳಬೇಕೆಂಬ ಬೇಡಿಕೆಯನ್ನು ಪುನರುಚ್ಚರಿಸಿದ ಮಾಜಿ ಯೂನಿಯನ್ ನಾಯಕ ಧೀರಜ್ ಸಿಂಗ್ ಅವರು, 'ನಮ್ಮ ಪ್ರತಿಭಟನೆಯು ಶಾಂತಿಯುತವಾಗಿರುತ್ತದೆ. ಯಾವುದೇ ವ್ಯಕ್ತಿ ಅಥವಾ ಆಸ್ತಿಗೆ ಹಾನಿಯನ್ನುಂಟು ಮಾಡುವುದಿಲ್ಲ' ಎಂದು ಹೇಳಿದರು. ಹೆದ್ದಾರಿಯಲ್ಲಿ ತಡೆಗಳನ್ನು ನಿರ್ಮಿಸಲು ತಮ್ಮ ಟ್ರ್ಯಾಕ್ಟರ್‌ ಗಳನ್ನು ತಂದಿದ್ದ ಹರ್ಯಾಣದ ಸೋನಿಪತ್‌ನ ರೈತರು ಅವುಗಳನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಿದ್ದರು ಮತ್ತು ಇದು ಸಂಚಾರ ದಟ್ಟಣೆಗೆ ಕಾರಣವಾಗಿತ್ತು. ಕಪ್ಪು ಧ್ವಜಗಳನ್ನು ಹಿಡಿದಿದ್ದ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...