ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

Source: so news | By MV Bhatkal | Published on 16th June 2019, 7:28 PM | Coastal News | Don't Miss |

ಕಾರವಾರ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಸಾಮಾನ್ಯ ಹಾಗೂ ಮಾದರಿ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2019-20 ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ1, 2ಎ, 2ಬಿ, 3ಎ, 3ಬಿ ಪ.ಜಾ/ಪ.ಪಂ ಹಾಗೂ ಇತರೇ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. 
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ,  ಪ್ರವರ್ಗ-1, ಎಸ್.ಸಿ & ಎಸ್.ಟಿ ದವರಿಗೆ ರೂ. 2.5 ಲಕ್ಷ ಮತ್ತು  2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರರಿಗೆ ರೂ. 1. ಲಕ್ಷದೊಳಗಿರಬೇಕು. 
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್www.backwardclassess.kar.nic.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಗೆ [email protected]  ಹಾಗೂ [email protected]   ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. 
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ  ದೂರವಾಣಿ ಸಂಖ್ಯೆ :08382-226588 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ, 

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...