ಕಾರವಾರ: ಅಬಕಾರಿ ಸನ್ನದು ನವೀಕರಣಕ್ಕೆ ಆನ್‍ಲೈನ್ ಅರ್ಜಿ: ಡಿಸಿ

Source: S O News Service | By I.G. Bhatkali | Published on 31st May 2019, 6:27 PM | Coastal News | Don't Miss |

ಕಾರವಾರ: 2019-20ನೇ ಸಾಲಿನ ಭಾರತೀಯ ತಯಾರಿಕಾ ಮದ್ಯ ಮಾರಾಟದ ಸನ್ನದುಗಳ ನವೀಕರಣವನ್ನು ಆನ್‍ಲೈನ್ ಮೂಲಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಹರೀಶ್‍ಕುಮಾರ್ ಕೆ. ತಿಳಿಸಿದ್ದಾರೆ.

2018-19ನೇ ಸಾಲಿಗೆ ನೀಡಲಾದ ಅಬಕಾರಿ ಸನ್ನದುಗಳ ಚಾಲ್ತಿ ಅವಧಿ ಜೂನ್ 30ಕ್ಕೆ ಮುಕ್ತಾಯವಾಗಲಿದ್ದು 2019-20ನೇ ಸಾಲಿನ ಸನ್ನದುಗಳನ್ನು ಜೂನ್ 30ರೊಳಗೆ ನವೀಕರಿಸಬೇಕಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದಂತೆ ಪಾರದರ್ಶಕವಾಗಿ ಮಾಡುವ ಉದ್ದೇಶದಿಂದ ಆನ್‍ಲೈನ್ ಆರ್ಜಿ ಆಹ್ವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸನ್ನದುದಾರರು ನಿಯಮಾನುಸಾರ ಸಮರ್ಪಕ ಮಾಹಿತಿ ದಾಖಲೆಗಳೊಂದಿಗೆ ಅರ್ಜಿಯನ್ನು ಆನ್‍ಲೈನ್(ಇಒಎಲ್‍ಆರ್‍ಎಸ್)ಮೂಲಕ ಸಲ್ಲಿಸಬೇಕು. ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಕಾನೂನು ಬದ್ಧವಾಗಿ ನಿಗದಿತ ಅವಧಿಯೊಳಗೆ ನಿಯಮಾನುಸಾರ ನವೀಕರಣ ಪ್ರಕ್ರಿಯೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...