ದೇಶದ 10 ಲಕ್ಷ ಸರಕಾರಿ ಶಾಲೆಗಳಲ್ಲಿ ಕೇವಲ ಶೇ.20ರಲ್ಲಿ ಮಾತ್ರ ಇಂಟರ್‌ನೆಟ್ ಸೌಲಭ್ಯ! ಲೋಕಸಭೆಗೆ ತಿಳಿಸಿದ ಕೇಂದ್ರ ಸರಕಾರ

Source: Vb | By I.G. Bhatkali | Published on 16th February 2023, 11:59 AM | National News |

ಹೊಸದಿಲ್ಲಿ: ದೇಶದಲ್ಲಿ 10 ಲಕ್ಷಕ್ಕೂ ಅಧಿಕ ಸರಕಾರಿ ಶಾಲೆಗಳಿವೆ. ಆದರೆ, ಕೇವಲ 2 ಲಕ್ಷ ಸರ ಕಾರಿ ಶಾಲೆಗಳಲ್ಲಿ ಮಾತ್ರ ಇಂಟರ್‌ನೆಟ್ ಸೌಲಭ್ಯ ವಿದೆ ಎಂದು ಕೇಂದ್ರ ಶಿಕ್ಷಣ ಖಾತೆಯ ಸಹಾಯಕ ಸಚಿವ ಸುಭಾಷ್ ಸರ್ಕಾರ್ ಅವರು ಲೋಕಸಭೆ ಯಲ್ಲಿ ಸೋಮವಾರ ಮಾಹಿತಿ ನೀಡಿದ್ದಾರೆ.

ಎಲ್ಲ 2,762 ಸರಕಾರಿ ಶಾಲೆಗಳಲ್ಲಿ ಇಂಟರ್ ನೆಟ್ ಸೌಲಭ್ಯವಿರುವ ಏಕೈಕ ರಾಜ್ಯ ದಿಲ್ಲಿ. ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ (422) ಹಾಗೂ ಚಂಡಿಗಡ (123)ದ ಎಲ್ಲ ಶಾಲೆಗಳಲ್ಲಿ ಇಂಟರ್‌ನೆಟ್ ಸೌಲಭ್ಯವಿದೆ ಎಂದು ಸರ್ಕಾರ್ ಅವರು ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆನಂತರ ಲಕ್ಷದ್ವೀಪದಲ್ಲಿ 38 ಸರಕಾರಿ ಶಾಲೆಗಳಲ್ಲಿ 37ರಲ್ಲಿ ಇಂಟರ್‌ನೆಟ್ ಸೌಲಭ್ಯ ಇದೆ ಎಂದು ಶಿಕ್ಷಣ ಸಚಿವಾಲಯ ಅಭಿವೃದ್ಧಿಪಡಿಸಿದ ಡೇಟಾ ಬೇಸ್ 'ಶಿಕ್ಷಣಕ್ಕಾಗಿ ಏಕೀಕೃತ ಜಿಲ್ಲಾ ಮಾಹಿತಿ ವ್ಯವಸ್ಥೆ ತಿಳಿಸಿದೆ. ರಾಜ್ಯಗಳಲ್ಲಿ ಕೇರಳದಲ್ಲಿ 5,010 ಸರಕಾರಿ ಶಾಲೆಗಳಲ್ಲಿ 4,738ರಲ್ಲಿ ಇಂಟರ್‌ನೆಟ್ ಸೌಲಭ್ಯವಿದೆ. ಆದರೆ, ಇತರ ದಕ್ಷಿಣದ ರಾಜ್ಯಗಳ ಅತಿ ಕಡಿಮೆ ಸಂಖ್ಯೆಯ ಸರಕಾರಿ ಶಾಲೆಗಳಲ್ಲಿ ಇಂಟರ್‌ನೆಟ್ ಸೌಲಭ್ಯವಿದೆ.

ಕರ್ನಾಟಕದ 49,679 ಸರಕಾರಿ ಶಾಲೆಗಳಲ್ಲಿ 5,308ರಲ್ಲಿ ಇಂಟರ್‌ನೆಟ್ ಸೌಲಭ್ಯ ಇದೆ. ತಮಿಳುನಾಡಿನ 37,636 ಸರಕಾರಿ ಶಾಲೆಗಳಲ್ಲಿ 9,292ರಲ್ಲಿ ಇಂಟರ್‌ನೆಟ್ ಸೌಲಭ್ಯ ಇದೆ. ಆಂಧ್ರಪ್ರದೇಶದ 45,137 ಸರಕಾರಿ ಶಾಲೆಗಳಲ್ಲಿ 20,313ರಲ್ಲಿ ಇಂಟರ್‌ನೆಟ್ ಸೌಲಭ್ಯ ಇದೆ ಎಂದು ಅವರು ತಿಳಿಸಿದ್ದಾರೆ.

ಅತಿ ಕಡಿಮೆ ಸಂಖ್ಯೆಯಲ್ಲಿ ಇಂಟರ್‌ನೆಟ್‌ ಸೌಲಭ್ಯ ಹೊಂದಿರುವ ಸರಕಾರಿ ಶಾಲೆಗಳಿರುವ ರಾಜ್ಯಗಳೆಂದರೆ ಉತ್ತರಪ್ರದೇಶ (1,37,024 ಶಾಲೆಗಳಲ್ಲಿ 12,074), ಮಧ್ಯಪ್ರದೇಶ (92,695 ಶಾಲೆಗಳಲ್ಲಿ 16,469) ಹಾಗೂ ಬಿಹಾರ (75,558 ಶಾಲೆಗಳಲ್ಲಿ 4,421).

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...