ದುರ್ಬಲ ವರ್ಗದವರಿಗೆ ಆದಾಯ ಖಾತರಿಪಡಿಸಿ, ಪೂರ್ಣ ಲಾಕ್‌ಡೌನ್‌ ಘೋಷಿಸಿ: ರಾಹುಲ್

Source: ಪಿಟಿಐ | Published on 4th May 2021, 2:09 PM | National News |

ನವದೆಹಲಿ: ದುರ್ಬಲವರ್ಗದವರಿಗೆ ಕನಿಷ್ಠ ಆದಾಯ ಖಾತರಿ ನೀಡಿ, ದೇಶವನ್ನು ಸಂಪೂರ್ಣ ಲೌಕ್‌ಡೌನ್‌ ಮಾಡುವುದೊಂದೇ ಕೊರೊನಾ ಸೋಂಕು ಹರಡದಂತೆ ತಡೆಯಲು ಇರುವ ಏಕೈಕ ದಾರಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಟ್ವೀಟ್‌ ಮಾಡಿದ್ದಾರೆ. 

‘ಕೇಂದ್ರ ಸರ್ಕಾರಕ್ಕೆ ಇದನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ದುರ್ಬಲ ವರ್ಗದವರಿಗೆ ಕನಿಷ್ಠ ಆದಾಯದ ಖಾತರಿ ನೀಡುವ ‘ಎನ್‌ವೈಎವೈ–ನ್ಯಾಯ್‌’ ಯೋಜನೆಯ ರಕ್ಷಣೆ ನೀಡಿ, ದೇಶವನ್ನು ಪೂರ್ಣ ಲಾಕ್‌ಡೌನ್ ಮಾಡಿದರೆ, ಕೊರೊನಾ ಸೋಂಕು ಹರಡುವುದನ್ನು ತಡೆಯಬಹುದಾಗಿದೆ‘ ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ಕೇಂದ್ರ ಸರ್ಕಾರ ಹಲವು ಅಮಾಯಕ ಜನರನ್ನು ಕೊಲ್ಲುತ್ತಿದೆ’ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

‌ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಭಾಗಶಃ ಕರ್ಫ್ಯೂ, ಪ್ರಯಾಣ ನಿರ್ಬಂಧಗಳು, ಅಂಗಡಿಗಳನ್ನು ಮುಚ್ಚಿಸುವುದು ಮತ್ತು ಲಾಕ್‌ಡೌನ್‌ನಂತಹ ಕ್ರಮಗಳ ಮೊರೆ ಹೋಗುತ್ತಿವೆ. ಇದರಿಂದ ಬಡವರ ಆರ್ಥಿಕ ಚಟುವಟಿಕೆ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಆದ್ದರಿಂದ ಲಾಕ್‌ಡೌನ್ ಘೋಷಿಸಿ, ದುರ್ಬಲ ವರ್ಗದವರು, ಬಡವರಿಗೆ ಮಾಸಿಕ ಆದಾಯ ಒದಗಿಸಬೇಕಿದೆ‘ ಎಂದು ಅವರು ಪ್ರತಿಪಾದಿಸಿದ್ದಾರೆ.

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...