ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹ ಜಾಥಾ ಉದ್ಘಾಟನೆ

Source: S.O. News Service | Published on 27th June 2019, 9:02 PM | Coastal News | Don't Miss |

ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ, ಎಂ.ಜಿ.ಎಂ. ಕಾಲೇಜು ಉಡುಪಿ, ಮಹಾತ್ಮ ಗಾಂಧೀ ಸ್ಮಾರಕ ನಿಧಿ ಎಂ.ಜಿ.ಎಂ, ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹದ ಅಂಗವಾಗಿ, ಉಡುಪಿಯ ಬೋರ್ಡ್ ಹೈಸ್ಕೂಲ್ನಿಂದ ಎಂಜಿಎಂ ಕಾಲೇಜುವರೆಗೆ ನಡೆದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಷಾ ಜೇಮ್ಸ್ ಬುಧವಾರ ಚಾಲನೆ ನೀಡಿದರು.
ಜಾಥಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇದರ ಕಾರ್ಯದರ್ಶಿ ರೋಹಿಣಿ ಕೆ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಎಂ.ಜಿ.ವಿಜಯ್, ಎಂಜಿಎಂ ಕಾಲೇಜಿನ ಗಾಂಧೀ ಅಧ್ಯಯನ ಸಂಸ್ಥೆಯ ಸಂಶೋಧಕ ವಿನೀತ್ ರಾವ್, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅವಿನಾಶ್ ಮತ್ತಿತರರು ಉಪಸ್ಥಿತರಿದ್ದರು.
ಎಂಜಿಎಂ ಕಾಲೇಜು, ಪಿಪಿಸಿ ಕಾಲೇಜು, ಸರಕಾರಿ ಪದವಿ ಪೂರ್ವ ಕಾಲೇಜು ಕಾಲೇಜು ಹಾಗೂ ವಿವಿಧ ಕಾಲೇಜುಗಳ ಎನ್.ಎಸ್.ಎಸ್ ವಿದ್ಯಾರ್ಥಿಗಳು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...