ಮಂಗಳೂರು ಪೊಲೀಸರ ಕಾರ್ಯಾಚರಣೆ. ಡಾನ್ಸರ್ ಸಹಿತ ಇಬ್ಬರ ಬಂಧನ.

Source: SO News | By Laxmi Tanaya | Published on 19th September 2020, 4:05 PM | Coastal News | Don't Miss |

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಡ್ಯಾನ್ಸರ್ ಸಹಿತ ಇಬ್ಬರನ್ನ ಮಂಗಳೂರಿನಲ್ಲಿ ಬಂಧಿಸಿದ್ದಾರೆ.  ನಗರದ ಕದ್ರಿ ಪದವು ಪರಿಸರದಲ್ಲಿ ಆರೋಪಿಗಳ ಬಂಧಿಸಲಾಗಿದೆ.

ಮಂಗಳೂರು ಸುರತ್ಕಲ್ ಕಾನ ನಿವಾಸಿ ಅಕೀಲ್ ನೌಶೀಲ್ (28), ಕುಳಾಯಿ ನಿವಾಸಿ ಕಿಶೋರ್ ಅಮನ್ ಶೆಟ್ಟಿ(30) ಬಂಧಿತ ಆರೋಪಿಗಳಾಗಿದ್ದಾರೆ.

ಶನಿವಾರ ಬೆಳಗಿನ ಜಾವ  ಮಂಗಳೂರು ಸಿಸಿಬಿ ಪೋಲಿಸರು, ಇಕಾನಾಮಿಕ್  ಮತ್ತು ನಾರ್ಕೋಟಿಕ್ ಠಾಣೆಯ ಪೊಲೀಸರ ಕಾರ್ಯಾಚರಣೆ ನಡೆಸಿದ್ದರು. 

ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್   ಪತ್ರಿಕಾಗೋಷ್ಠಿ 

ನಿಷೇಧಿತ ಮಾದಕ ವಸ್ತು MDMA ಸಹಿತ ಆರೋಪಿಗಳ ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಶಕುಮಾರ್ ಹೇಳಿದ್ದಾರೆ. ಮಾದ್ಯಮದವರೊಂದಿಗೆ ಮಾತನಾಡಿದ ಅವರು, MDMA ಪೌಡರ್,ಬೈಕ್,2 ಮೊಬೈಲ್ ಫೋನ್ ಸೇರಿದಂತೆ 1 ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇನ್ನು ಕೆಲ ಆರೋಪಿಗಳಿದ್ದಾರೆ. ಈ ಅಕ್ರಮ ವ್ಯವಹಾರದಲ್ಲಿ ಚೈನ್ ಲಿಂಕ್ ಇರುವ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ.
ಆರೋಪಿಗಳು‌ ಮುಂಬೈಯಿಂದ ವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು.‌ ಇಬ್ಬರ ಮೇಲೆ ಸೇವನೆ ಮತ್ತು ಮಾರಾಟ ಎರಡು ಪ್ರಕರಣ ದಾಖಲಿಸಿದ್ದೇವೆ ಎಂದರು. 

ಆರೋಪಿ ಅಕೀಲ್ ನೌಶೀಲ್ ಈ ಹಿಂದೆ ವಿದೇಶದಲ್ಲಿ ಸೇಫ್ಟಿ ಆಫೀಸರ್ ಆಗಿದ್ದ. ಒಂದು ವರ್ಷದ ಊರಿಗೆ ಬಂದಿದ್ದನು. ಕಿಶೋರ್ ಅಮನ್ ಶೆಟ್ಟಿ ಡ್ಯಾನ್ಸರ್,ಕೋರಿಯೋಗ್ರಾಫರ್ ಆಗಿದ್ದಾನೆ. ಅಕೀಲ್ ನೌಶೀಲ್ ಜೊತೆ ಸೇರಿ ಮಾದಕ ವಸ್ತು ಖರೀದಿಸಿ ಮಾರಾಟ ಮಾಡುತ್ತಿದ್ದ.  ಆರೋಪಿಗಳು ಬೆಂಗಳೂರು, ಮುಂಬೈಯಿಂದ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದರು ಎಂದು  ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...