ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಭಟ್ಕಳದಲ್ಲಿ ಹೆಸ್ಕಾಂ ಸಿಬ್ಬಂದಿಗಳ ಪ್ರತಿಭಟನೆ.

Source: SO News | By Laxmi Tanaya | Published on 5th October 2020, 4:46 PM | Coastal News | Don't Miss |

ಭಟ್ಕಳ : ತಾಲೂಕಿನ ಕೆ.ಇ.ಬಿ ಕಛೇರಿ ಎದುರು ಭಟ್ಕಳ ಹೆಸ್ಕಾಂ ಸಿಬ್ಬಂದಿಗಳು ಕೈಗೆ ಕಪ್ಪುಪಟ್ಟಿ ಧರಿಸಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದರು.

ಕೇಂದ್ರ ಸರ್ಕಾರವು 2003ರ ವಿದ್ಯುತ್ ಕಾಯ್ದೆಗೆ ಪ್ರಸ್ತಾಪಿತ ತಿದ್ದುಪಡಿ ತರಲು ಹೊರಟಿರುವುದನ್ನು ವಿರೋಧಿಸಿ
ಎಐಟಿಯುಸಿ ಹಾಗೂ ಅಖಿಲ ಭಾರತ ವಿದ್ಯುತ್‌ ನೌಕರರ ಫೆಡರೇಶನ್‌ ಹಾಗೂ ಹೆಸ್ಕಾಂ ಗುತ್ತಿಗೆ ನೌಕರರ ಸಂಘದ ಸಹಯೋಗದಲ್ಲಿ ಹೆಸ್ಕಾಂ ಕಚೇರಿ ಎದುರು  ಪ್ರತಿಭಟಿಸಿದರು. 

ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ 
ಭಟ್ಕಳ ಶಾಖಾಧಿಕಾರಿ ಎ.ಈ.ಈ ಮಂಜುನಾಥ,  ಹಿಂದೆ ಸರಕಾರ ಜನಪರವಾಗಿ ಹಾಗೂ ರೈತರಿಗೆ, ಜನಸಾಮಾನ್ಯರಿಗೆ ಅನುಕೂಲವಾಗಲು ಹಲವು ಮಹತ್ವ ಕಾಂಕ್ಷೆಯ ಯೋಜನೆ ಜಾರಿಗೆ ತಂದಿತ್ತು. ಪ್ರಸ್ತುತ ಕೇಂದ್ರ ಸರಕಾರ ವಿದ್ಯುತ್ ಕಂಪೆನಿಗಳನ್ನು ಖಾಸಗಿಯವರಿಗೆ ನೀಡುವುದರಿಂದ ರೈತರಿಗೆ ಉಚಿತ ನೀರಾವರಿ ವಿದ್ಯುತ್ ಸೇರಿ ಹಲವು ಯೋಜನೆ ಕೈಬಿಡಲಿದೆ. ಹೀಗಾಗಿ ಕೇಂದ್ರ ಸರಕಾರ ಈ ನಿರ್ಧಾರ ಹಿಂಪಡೆಯಬೇಕು.
ಒಂದೊಮ್ಮೆ ಸಮಗ್ರ ಚಿಂತನೆ ಮಾಡದಿದ್ದರೆ ಮುಂದೆ ಹೋರಾಟ ಮಾಡುವುದು ಅನಿವಾರ್ಯ ಎಂದರು.

ಸರಕಾರಿ ಸ್ವಾಮ್ಯದಲ್ಲಿದ್ದ ವಿದ್ಯುತ್‌ ಉತ್ಪಾದನೆ ಹಾಗೂ ಪ್ರಸರಣ ಕಾರ್ಯಗಳನ್ನು ಖಾಸಗಿಯವರಿಗೆ ಒಪ್ಪಿಸುತ್ತಿರುವುದನ್ನು ಖಂಡಿಸಲಾಯಿತು.
ಸರ್ಕಾರದ ಸ್ವಾಮ್ಯದಲ್ಲಿದ್ದಂತಹ ಉತ್ಪಾದನೆ, ಪ್ರಸರಣೆ ಹಾಗೂ ಸರಬರಾಜು ಕಾರ್ಯಗಳನ್ನು ಖಾಸಗಿಯವರಿಗೆ ಒಪ್ಪಿಸಲಾಗುತ್ತಿದೆ. ಈಗಾಗಲೇ ಕೆಲ ರಾಜ್ಯಗಳಲ್ಲಿ ವಿದ್ಯುತ್‌ ಪ್ರಸರಣವನ್ನು ಖಾಸಗಿ ಕಂಪನಿಗಳಿಗೆ ವಹಿಸಿದ್ದರಿಂದ ವಿದ್ಯುತ್‌ ಶುಲ್ಕ ಹೆಚ್ಚಾಗಿದೆ. ಜನಸಾಮಾನ್ಯರ ಮೇಲೆ ವಿಪರೀತ ಹೊರೆ ಬಿದ್ದಿದೆ. ಭಾಗ್ಯಜ್ಯೋತಿ ಹಾಗೂ ಕುಟೀರ ಜ್ಯೋತಿ ಯೋಜನೆಗಳು ಕಡಿತಗೊಳ್ಳುವ ಸಾಧ್ಯತೆ ಇರುತ್ತದೆ. ಅನೇಕ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಜನವಿರೋಧಿ, ನೌಕರ ವಿರೋಧಿ ವಿದ್ಯುತ್‌ ಬಿಲ್‌ ತಿದ್ದುಪಡಿ ಕೈಬಿಡಬೇಕು ಎಂದು ಆಗ್ರಹಿಸಿದರು.

ವಿದ್ಯುತ್‌ ವಲಯದ ಖಾಸಗೀಕರಣ ಕೈಬಿಡಬೇಕು.
 ಏಪ್ರಿಲ್‌ ತಿಂಗಳಿನಿಂದ ಪರಿಷ್ಕೃತ ವೇತನ ಜಾರಿ ಮಾಡಬೇಕು. ಈ ಸಂದರ್ಭದಲ್ಲಿ 
ಎ.ಈ.ಟಿ ಶಿವಾನಂದ ನಾಯ್ಕ  ಎಸ್.ಒ ಸಂಪತ್ ಕುಮಾರ್  ಎಸ್.ಒ ಶ್ರೀಕಾಂತ್ ಹಾಗೂ ಯುನಿಯನ್ ಲೀಡರ್ ರಾಮ ಪೂಜಾರಿ ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...