ಮಾರಕ ಕಾಯ್ದೆಗೆ ವಿರೋಧ - ಸಪ್ಟೆಂಬರ್ 25 ರಂದು ಬಂದ್ , ಪ್ರತಿಭಟನೆಗೆ ಕರೆ.

Source: SO News | By Laxmi Tanaya | Published on 23rd September 2020, 7:38 AM | National News |

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ಮಸೂದೆಗೆ ಇಡೀ ದೇಶದಾದ್ಯಂತ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಸಪ್ಟೆಂಬರ್ 25ಕ್ಕೆ ಬಾರೀ ಪ್ರತಿಭಟನೆಗಳು ಬಂದ್ ನಡೆಸಲು ವಿವಿಧ ಸಂಘಟನೆಗಳು ನಿರ್ಧಾರ ಮಾಡಿವೆ.

ರೈತ ಸಂಘಟನೆಳು, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಕರವೇ ಸೇರಿದಂತೆ 32 ಕ್ಕೂ ಹೆಚ್ಚು ಸಂಘ ಸಂಸ್ಥೆಗಳು ಬಂದ್ ಗೆ ಬೆಂಬಲ ಸೂಚಿಸಿವೆ. ಹೀಗಾಗಿ ಬಂದ್ ನಿಂದ ಜನತೆಗೆ ತೊಂದರೆಎಯಾಗುವ ಸಂಭವವಿದೆ.

ಮಸೂದೆ ವಿರೋಧಿಸಿ ಈಗಾಗಲೆ ಪ್ರತಿಭಟನೆಗಳು ನಡೆಯುತ್ತಿದೆ. ಆದರೆ ಸರ್ಕಾರದ ಯಾವ ಪ್ರತಿನಿಧಿಗಳು ಸ್ಥಳಕ್ಕೆ ಬಂದು ರೈತರ ಅಹವಾಲು ಆಲಿಸಿಲ್ಲ. ಹೀಗಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 

ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಪ್ರವಾಹದಿಂದ ಬೆಳೆ ನಷ್ಟವಾಗಿದ್ದು ಸಮರ್ಪಕ ಪರಿಹಾರ ಸಿಕ್ಕಿಲ್ಲ. ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಈ ನಡುವೆ ಮಾರಕ ಕಾಯ್ದೆಗಳನ್ನ ಜಾರಿಗೊಳಿಸಲಾಗುತ್ತಿದೆ ಎಂದು ರೈತ ಸಂಘಟನೆಗಳು ಆಪಾದಿಸಿವೆ.

ಹೀಗಾಗಿ ಇಡೀ ದೇಶದಾದ್ಯಂತ ಸಪ್ಟೆಂಬರ್ 25ರಂದು ಹೆದ್ದಾರಿ ಬಂದ್ ಪ್ರತಿಭಟನೆಗಳು ನಡೆಸಲು ಸಂಘಟನೆಗಳು ನಿರ್ಧರಿಸಿವೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...