ಗುಡಿಸಲು ಮುಕ್ತ ರಾಜ್ಯವಾಗಿಸುವುದು ನಮ್ಮ ಗುರಿ - ಕೆ . ರವೀಂದ್ರ ಶೆಟ್ಟಿ.

Source: Shabbir Ahmed | By I.G. Bhatkali | Published on 5th March 2021, 8:28 PM | State News | Don't Miss |

ಕೋಲಾರ : ಕರ್ನಾಟಕ ರಾಜ್ಯದಲ್ಲಿ ಅರೆ ಅಲೆಮಾರಿ ಮತ್ತು ಅಲೆಮಾರಿ ಜನಾಂಗಗಳು ಹಿಂದುಳಿದಿದ್ದು , ಇವರು ಹೆಚ್ಚಾಗಿ ಗುಡಿಸಲುಗಳಲ್ಲಿ ವಾಸಿಸುತ್ತಿದ್ದು , ಇವರೆಲ್ಲರಿಗೂ ವಿವಿಧ ಯೋಜನೆಗಳಡಿ ವಸತಿ ಸೌಲಭ್ಯಗಳನ್ನು ಕಲ್ಪಿಸಿ ರಾಜ್ಯವನ್ನು ಗುಡಿಸಲು ಮುಕ್ತಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಕರ್ನಾಟಕ ಅಲೆಮಾರಿ ಅಥವಾ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಅವರು ತಿಳಿಸಿದರು .

ಇಂದು ಪ್ರವಾಸಿ ಮಂದಿರ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರು ಸುಮಾರು ಒಂದು ಲಕ್ಷದಷ್ಟಿದ್ದು, ನಿಗಮದಡಿಯಲ್ಲಿ 46 ಜಾತಿಗಳಿವೆ . ಅತೀ ಹೆಚ್ಚಾಗಿ ಗೊಲ್ಲ ಅಥವಾ ಯಾದವ ಜನಾಂಗದವರಿದ್ದು ಇವರಿಗೆ ಶೇ 50 ರಷ್ಟು ನಿಗಮದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ . ಉಳಿದ 45 ಜಾತಿಗಳಿಗೆ ಶೇ 50 ರಷ್ಟು ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ .

ಜಿಲ್ಲೆಯಲ್ಲಿ ಲಭ್ಯವಿರುವ ಜಾತಿಗಳು ಪಿಚಗುಂಟ್ಲ , ಹೆಳವ , ಗೋಂಧಳಿ , ಬೈರಾಗಿ , ಗಾರುಡಿ ಜನಾಂಗದವರಿರುತ್ತಾರೆ . ಇನ್ನುಳಿದ ಜನಾಂಗದವರು ಈ ಜಿಲ್ಲೆಯಲ್ಲಿ ಲಭ್ಯವಿರುವುದಿಲ್ಲ ಎಂದು ಮಾಹಿತಿ ನೀಡಿದರು . ಜಿಲ್ಲೆಯಲ್ಲಿ 2013-14 ನೇ ಸಾಲಿನಿಂದ ಈವರೆಗೆ ವಿವಿಧ ಯೋಜನೆಯಡಿ ಒಟ್ಟು 811 ಫಲಾನುಭವಿಗಳಿಗೆ 447.95 ಲಕ್ಷ ರೂ . ಆರ್ಥಿಕ ಸೌಲಭ್ಯಗಳನ್ನು ಒದಗಿಸಲಾಗಿದೆ . ಒಟ್ಟಾರೆ ಈ ಸಮುದಾಯಕ್ಕೆ ಜಿಲ್ಲೆಯಲ್ಲಿ ಸುಮಾರು 150 ಎಕರೆ ಜಮೀನುಗಳಗೆ ಗಂಗಾ ಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯವನ್ನು ಒದಗಿಸಲಾಗಿದೆ . ನಿಗಮದಿಂದ ಒಂದು ಕುಟುಂಬಕ್ಕೆ ಒಂದು ಬಾರಿ ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದರು .

ಈ ಜನಾಂಗಗಳ ಹೆಚ್ಚಿನ ಅಭಿವೃದ್ಧಿಗಾಗಿ 2020-21ನೇ ಸಾಲಿನಲ್ಲಿ ಪ್ರತ್ಯೇಕ ನಿಗಮವನ್ನು ಸರ್ಕಾರ ಪ್ರಾರಂಭಿಸಲಾಗಿದೆ . ಜಿಲ್ಲೆಗೆ ಈ ಸಾಲಿಗೆ ನೀಡಿದ ಅನುದಾನದಲ್ಲಿ ಒಟ್ಟು 110 ಪಾಲನುಭಾವಿಗಳಿಗೆ 66.68 ಲಕ್ಷ ರೂ . ಆರ್ಥಿಕ ಸೌಲಭ್ಯವನ್ನು ಒದಗಿಸಲಾಗಿದೆ ಎಂದರು . ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳು ಒಗ್ಗಟ್ಟಾಗಿ ಸಂಘಟಿತಗೊಳ್ಳಬೇಕು . ಅವರಿಗೆ ದೊರೆಯಬೇಕಾದ ಮೂಲಭೂತ ಸೌಕರ್ಯಗಳು ಮತ್ತು ಸದುಪಯೋಗ ಮಾಡಿಕೊಳ್ಳಬೇಕು . 46 ಸಂರ್ವಾಗಿಣ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು . 2021-22ನೆ ಬಜೆಟ್‌ನಲ್ಲಿ 250 ಕೋಟಿ ಅನುದಾನವನ್ನು ನಿಗಮಕ್ಕೆ ನೀಡಲು ಮನವಿ ಮಾಡಲಾಗಿದೆ ಎಂದರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ರಾಜಣ್ಣ ಅವರು ಮಾತನಾಡಿ ಕಳೆದ ವರ್ಷ ಹಿಂದುಳಿದ ವರ್ಗಗಳಿಂದ ವಸತಿ ಸೌಲಭ್ಯಕ್ಕಾಗಿ 146 ಅರ್ಜಿಗಳು ಬಂದಿದ್ದು , ಇದರಲ್ಲಿ 122 ಪಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಅದರ ಹಿಂದಿನ ವರ್ಷ 258 ಅರ್ಜಿಗಳು ಬಂದಿದ್ದು ಎಲ್ಲಾ ಪಲಾನುಭವಿಗಳಿಗೂ ವಸತಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು . ಸಮುದಾಯಗಳ ಪೂರ್ತಿ ಸಾಲಿನ ಈ ಸಂದರ್ಭದಲ್ಲಿ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಕಾದ ಗಣೇಶ್, ಮುಖಂಡರಾದ ಡಾ || ವೇಣುಗೋಪಾಲ್, ಹಾಗೂ ಮುಖಂಡರು ಉಪಸ್ಥಿತರಿದ್ದರು .

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...