ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಶ್ರೀನಿವಾಸ ಪೂಜಾರಿ

Source: SO News | By Laxmi Tanaya | Published on 6th June 2021, 9:03 AM | Coastal News | Don't Miss |

ಮಂಗಳೂರು : ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

 ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ, ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಗಿಡ ನೇಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಗಾಂಧೀಜಿಯವರು ನುಡಿದಂತೆ, ಹಿಂದಿನವರು ನಮಗೆ ಬಿಟ್ಟುಕೊಟ್ಟು ಹೋದ ನೆಲ, ಜಲ, ಪರಿಸರವು ನಮ್ಮದಲ್ಲ. ಅದನ್ನು ಮುಂದಿನ ಜನಾಂಗಕ್ಕೆ ಕೊಡುಗೆಯಾಗಿ ನೀಡಬೇಕು, ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಅದು ಸಮಾಜದ ಆಸ್ತಿ ಎಂದರು.

ಸರ್ಕಾರ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ರಾಜ್ಯದಾದ್ಯಂತ 1.70 ಕೋಟಿಗೂ ಹೆಚ್ಚು ಗಿಡ-ಮರಗಳನ್ನು ಬೆಳೆಸಲು ಮುಂದಾಗಿದ್ದು, ಅರಣ್ಯ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಸೇರಿದಂತೆ ಇತರೆ ಇಲಾಖೆಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿವೆ ಎಂದರು.

ಪ್ರತಿಯೊಬ್ಬರಿಗೂ  ಉತ್ತಮ ಆಮ್ಲಜನಕವನ್ನು ಒದಗಿಸುವ ಉದ್ಧೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದ ಅವರು, ಪರಿಸರವನ್ನು ನಿರ್ಲಕ್ಷಿಸಿದ್ದರಿಂದ ಅನೇಕ ಅನಾಹುತಗಳು ಆಗಿರುವುದನ್ನು ನಾವು  ಕಣ್ಣ ಮುಂದೆ ಕಂಡಿದ್ದೇವೆ ಮುಂದೆ ಹೀಗೆ ಆಗದಂತೆ ಎಚ್ಚರ ವಹಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದರು.
ಈ ಬಾರಿಯ ಪರಿಸರ ದಿನಾಚರಣೆಯನ್ನು “ಪರಿಸರ ವ್ಯವಸ್ಥೆ ಪುನರ್ ಸ್ಥಾಪನೆ” ಎಂಬ ಘೋಷಣೆಯೊಂದಿಗೆ ಆಚರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್‍ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲೇ ಸ್ವಾಮಿ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...