ಕೃಷಿ ಮತ್ತು ಗೋ ಸಂಪತ್ತು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ: ಸಂಸದ ಬಿ.ವೈ.ರಾಘವೇಂದ್ರ

Source: so news | Published on 12th September 2019, 12:16 AM | State News | Don't Miss |

ಶಿವಮೊಗ್ಗ,: ಪ್ರಕೃತಿಯ ಮೇಲೆ ನಾವು ಎಷ್ಟೇ ಅತಿಕ್ರಮಣ ಮಾಡಿದರೂ, ನಮ್ಮ ಭವಿಷ್ಯದ ದೃಷ್ಟಿಯಿಂದ ಕೃಷಿ ಮತ್ತು ಗೋ ಸಂಪತ್ತನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.

ಅವರು ಬುಧವಾರ ಕೃಷಿ ಮತ್ತು ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಕೃತಕ ಗರ್ಭಧಾರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗೋವು ದೇಶದ ಆರ್ಥಿಕ ಚಟುವಟಿಕೆಗಳ ಬೆನ್ನೆಲುಬಾಗಿದೆ. ಆದರೆ ವಯಸ್ಸಾದ ತಂದೆ ತಾಯಂದಿರನ್ನು ವೃದ್ಧಾಶ್ರಮಕ್ಕೆ ಸೇರಿಸುವ ರೀತಿಯಲ್ಲಿ ಅಶಕ್ತ ಮತ್ತು ವಯಸ್ಸಾದ ಗೋವುಗಳನ್ನು ಕಟುಕರಿಗೆ ಮಾರುತ್ತಿರುವುದು ದುರದೃಷ್ಟಕರ. ಕುಟುಂಬದ ಸದಸ್ಯರಿಗೆ ರೋಗ ಬಂದರೆ ಯಾವ ರೀತಿಯಲ್ಲಿ ಅವರಿಗೆ ಆರೈಕೆ ಮಾಡುತ್ತೇವೆಯೋ ಅದೇ ರೀತಿ ಗೋವುಗಳಿಗೆ ಅನಾರೋಗ್ಯ ಬಂದರೆ ಔಷಧ ಉಪಚಾರ ಮಾಡಬೇಕು. ನಾವು ಪ್ರತಿನಿತ್ಯ ಬಳಸಿ ಬಿಸಾಡುವ ಪ್ಲಾಸ್ಟಿಕ್‍ಗಳನ್ನು ಸೇವಿಸಿ ಸಾವಿರಾರು ದನಕರುಗಳು ಗಂಭೀರ ಖಾಯಿಲೆಗಳಿಗೆ ತುತ್ತಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಿಂದ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಸಂಕಲ್ಪಕ್ಕೆ ನಾವೆಲ್ಲರೂ ಕೈಜೋಡಿಸಬೇಕಿದೆ ಎಂದು ಹೇಳಿದರು.

ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಟಿ.ಎಂ.ಸದಾಶಿವ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲುಬಾಯಿ ರೋಗವನ್ನು ತಡೆಯಲು ಜಿಲ್ಲೆಯಲ್ಲಿ 6.45ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಸೆಪ್ಟಂಬರ್ 30ರಿಂದ ಅಕ್ಟೋಬರ್ 19ರವರೆಗೆ ನಡೆಯಲಿದೆ. ಗರ್ಭ ಧರಿಸುವ ಹಸುಗಳಲ್ಲಿ ಕಂಡು ಬರುವ ಕಂದು ರೋಗವನ್ನು ತಡೆಯಲು 4ರಿಂದ 8 ತಿಂಗಳ ಹೆಣ್ಣು ಕರುಗಳಿಗೆ ಲಸಿಕೆ ಹಾಕಲಾಗುವುದು. ಕೃತಕ ಗರ್ಭಧಾರಣಾ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ 100 ಹಳ್ಳಿಗಳನ್ನು ಆಯ್ಕೆ ಮಾಡಲಾಗಿದ್ದು, ತಲಾ ಒಂದು ಹಳ್ಳಿಗೆ 200 ರಾಸುಗಳಂತೆ ಒಟ್ಟು 2ಲಕ್ಷ ರಾಸುಗಳಿಗೆ ಕೃತಕ ಗರ್ಭಧಾರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆ.15ರಿಂದ 6ತಿಂಗಳ ಕಾಲ ಉಚಿತ ಗರ್ಭಧಾರಣಾ ಕಾರ್ಯವನ್ನು ಮಾಡಲಾಗುವುದು ಎಂದರು.

ಮಹಾವಿದ್ಯಾಲದಯ ಕುಲಪತಿ ಡಾ.ಎಂ.ಕೆ.ನಾಯ್ಕ್ ಅವರು ಮಾತನಾಡಿ, 2030ರ ಒಳಗಾಗಿ ರಾಷ್ಟ್ರವನ್ನು ಜಾನುವಾರುಗಳ ಕಾಲುಬಾಯಿ ಬೇನೆ ಮುಕ್ತ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ಯೋಜನೆಗೆ ಪೂರಕವಾಗಿ ಈ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಎಸ್.ಪಿ.ನಟರಾಜ್ ಸೇರಿದಂತೆ ರೈತರು, ವಿಜ್ಞಾನಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...