ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಬಳಕೆಯ ಬಗ್ಗೆ ನೌಕಾದಳದ ಅಧಿಕಾರಿಗಳಿಂದ ಮಾಹಿತಿ

Source: S O News servicebh | By I.G. Bhatkali | Published on 15th May 2021, 12:33 AM | Coastal News | Don't Miss |

ಭಟ್ಕಳ: ಪ್ರಸಕ್ತವಾಗಿ ಕೋವಿಡ್ ಕೇಂದ್ರಗಳಿಗೆ ಆಮ್ಲಜನಕ ಬೇಡಿಕೆ ಹೆಚ್ಚುತ್ತಿದ್ದು, ಆಮ್ಲಜನಕ ಬಳಕೆಯ ಸಂದರ್ಭದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ನೌಕಾದಳದ ಅಧಿಕಾರಿಗಳು ಭಟ್ಕಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೆಫ್ಟಿನಂಟ್ ಕಮಾಂಡರ್ ಚೇತನ್, ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಆಮ್ಲಜನಕ ಸಿಲೆಂಡರ್, ಪ್ಲಾಂಟ್ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ನಿರ್ವಹಣೆಯು ಅತಿ ಮುಖ್ಯವಾಗಿದೆ. ಆಮ್ಲಜನಕ ಸಿಲೆಂಡರ್, ಕೊಳವೆ, ವಾಲ್ವ್ ಸೇರಿದಂತೆ ಒಟ್ಟೂ ನಿರ್ವಹಣೆಯ ಬಗ್ಗೆ ಇಲ್ಲಿನ ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನದ ಅಗತ್ಯ ಇದೆ. ಆದ್ದರಿಂದ ಇಲ್ಲಿನ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದಿದ್ದೇವೆ ಎಂದು ತಿಳಿಸಿದರು. ನೌಕಾದಳದ ಸಿಬ್ಬಂದಿಗಳಾದ ಚಂದನ್, ಜಗಜೀತ್ ಸಿಂಗ್ ಉಪಸ್ಥಿತರಿದ್ದರು.

Read These Next

ಕಾರವಾರ: ಟ್ಯಾಬ್ ನೊಂದಿಗೆ ಭವಿಷ್ಯ ಕೂಡ ವಿದ್ಯಾರ್ಥಿ ಕೈಯಲ್ಲೇ ಇದೆ : ಶಾಸಕಿ ರೂಪಾಲಿ ನಾಯ್ಕ

“ಇಂದು ವಿತರಿಸಲಾಗುತ್ತಿರುವ ಟ್ಯಾಬ್‍ನೊಂದಿಗೆ ಭವಿಷ್ಯ ಕೂಡ ನಿಮ್ಮ ಕೈಯಲ್ಲೇ ಇದೆ, ವಿದ್ಯಾರ್ಥಿಗಳು ಸರಕಾರ ನೀಡಿರುವ ಟ್ಯಾಬ್ ಪಿಸಿ ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಡೀ ದಿನ ಲಾಕ್ ಡೌನ್ ಸಡಿಲಿಸಬೇಕು. ಮಾಜಿ ಶಾಸಕ ಐವಾನ್ ಡಿಸೋಜಾ ಆಗ್ರಹ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಇಡೀ ದಿನ ಸಡಿಲಿಕೆ ಮಾಡಬೇಕು. ತಕ್ಷಣ ಬಸ್ ಸಂಚಾರ ಆರಂಭಿಸಬೇಕು. ಎಲ್ಲರಿಗೆ ಲಸಿಕೆ ...

ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ಲು, ನೀರಿನ ಬಿಲ್ಲು ಮನ್ನಾ ಮಾಡಬೇಕು- ಮುನೀರ್ ಕಾಟಿಪಳ್ಳ

ಮಂಗಳೂರು: ಕೊರೋನಾ ಕಾಲದ ಈ ಎರಡನೇ ಅಲೆಯಲ್ಲಿ ಸರಕಾರ ಘೋಷಿಸಿದ ಲಾಕ್ಡೌನ್ ನ ಈ ಸಂಕಷ್ಟದ ಕಾಲದಲ್ಲಿ ಜನರಿಗೆ ಉದ್ಯೋಗ ಇಲ್ಲದೆ ಅನ್ನ , ...