ಕಾರವಾರ: ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಭತ್ತ ಮಾರಾಟ: ನ.30 ರಿಂದ ಡಿ. 30ರವರೆಗೆ ಆನ್‍ಲೈನ್ ಮೂಲಕ ನೋಂದಣಿ

Source: S.O. News Service | By INS India | Published on 26th November 2020, 5:58 PM | Coastal News |

ಕಾರವಾರ: ಕನಿಷ್ಠ ಬೆಂಬಲಬೆಲೆ ಯೋಜನೆಯಡಿಯಲ್ಲಿ ರೈತರಿಂದ ಭತ್ತವನ್ನು ಖರೀದಿಸಲು ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇವರನ್ನು ಏಜೆನ್ಸಿಯನ್ನಾಗಿ ನೇಮಕ ಮಾಡಲಾಗಿದ್ದು, ಕನಿಷ್ಠ ಬೆಂಬಲಬೆಲೆ ಯೋಜನೆಯಡಿಯಲ್ಲಿ ಭತ್ತವನ್ನು ಮಾರಾಟ ಮಾಡಲಿಚ್ಚಿಸುವ ರೈತರು ನವೆಂಬರ 30 ರಿಂದ ಡಿಸೆಂಬರ 30ರವರೆಗೆ ಆನ್‍ಲೈನ್ ಮೂಲಕ ನೋಂದಣಿ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾನ್ಯ ಭತ್ತಕ್ಕೆ 1,868 ರೂಪಾಯಿ ಹಾಗೂ ‘ಎ’ ಗ್ರೇಡ್ ಭತ್ತಕ್ಕೆ 1,888 ರೂಪಾಯಿ ಪ್ರತಿ ಕ್ವಿಂಟಲ್‍ಗೆ ದರ ನಿಗಧಿ ಪಡಿಸಲಾಗಿರುತ್ತದೆ. ಶಿರಸಿ ತಾಲೂಕಿನ ಬನವಾಸಿಯ ರೈತ ಸಂಪರ್ಕ ಕೇಂದ್ರ, ಮುಂಡಗೋಡ ಹಾಗೂ ಕುಮಟಾದ ಎಪಿಎಂಸಿ ಆವರಣದಲ್ಲಿರುವ ಕೆಎಫ್‍ಸಿಎಸ್‍ಸಿ ನಿಗಮದ ಅಕ್ಷರ ದಾಸೋಹ ಮಳಿಗೆ ಹಾಗೂ ಹಳಿಯಾಳದಲ್ಲಿರುವಂತಹ ಕೆಎಫ್‍ಸಿಎಸ್‍ಸಿ ನಿಗಮದ ಸಗಟು ಮಳಿಗೆಯನ್ನು ಖರೀದಿ ನೋಂದಣಿ ಕೇಂದ್ರಗಳನ್ನಾಗಿ ಮಾಡಲಾಗಿರುತ್ತದೆ.

ರೈತರು ನೋಂದಣಿ ಮಾಡಿಸಲು ಕೃಷಿ ಇಲಾಖೆಯು ರೈತ ಸಂಪರ್ಕ ಕೇಂದ್ರದಿಂದ ನೀಡಿರುª À(ಫ್ರೂಟ್ಸ್) farmer Registration & Unified Beneficiary System (FRUITS)  ಗುರುತಿನ ಸಂಖ್ಯೆಯೊಂದಿಗೆ ನೋಂದಣಿ ಕೇಂದ್ರಕ್ಕೆ ಬಂದು ನೋಂದಣಿ ಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Read These Next

ಮುಂಡಗೋಡ: ಜಾನಪದ ರಾಜ್ಯ ಪ್ರಶಸ್ತಿ ವಿಜೇತ ಸಹದೇವಪ್ಪ ನಡಿಗೇರ ಗೆ ಗಂಗಾಮತ ಸಮಾಜದಿಂದ ಸನ್ಮಾನ

ಮುಂಡಗೋಡ ನಗರ ಗಂಗಾಮತಸ್ಥ ಕುಲಬಾಂದವರು  ಭಾನುವಾರ ರಾಜ್ಯಮಟ್ಟದ ಜಾನಪದ ಅಕಾಡಮಿ ಪ್ರಶಸ್ತಿ ಗೆ ಭಾಜನರಾದ ಇಂದೂರ ಗ್ರಾಮದ  ಸಹದೇವಪ್ಪ ...

ದೇಶದ ರಕ್ಷಣೆ, ಭದ್ರತೆ ಕಾಪಾಡುವುದು ರಕ್ಷಣಾ ಸಚಿವರ ಕರ್ತವ್ಯ : ಕೆಪಿಸಿಸಿ ವಕ್ತಾರ ಪ್ರಕಾಶ ರಾಠೋಡ್

ಮಂಗಳೂರು : ದೇಶದ ರಕ್ಷಣೆ ಉದ್ದೇಶದಿಂದ ಭದ್ರತಾ ವಿಷಯ ಗೌಪ್ಯವಾಗಿರಬೇಕು. ದೇಶದ ಹೀನ ಕೃತ್ಯದಲ್ಲಿ ರಿಪಬ್ಲಿಕ್ ಟಿವಿ ಮುಖ್ಯಸ್ಥ ...

ಸಿಎಂ ತವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ : ಶಾಸಕ ಯು ಟಿ ಖಾದರ್ ಆರೋಪ.

ಮಂಗಳೂರು : ಸಿ.ಎಂ ತವರು ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಇಲ್ಲವಾ. ಜನ ಸಾಮಾನ್ಯರ ಮರಳು ಗಾಡಿಯನ್ನ ವಶ ಪಡಿಸಿಕೊಳ್ಳತ್ತಾರೆ. ಆದರೆ ...