ಸ್ಕೂಟರಿಗೆ  ಟ್ಯಾಂಕರ್ ಡಿಕ್ಕಿ ಸ್ಕೂಟರ್ ಸವಾರ ದಾರುಣ ಅಂತ್ಯ

Source: sonews | By sub editor | Published on 15th September 2018, 9:40 PM | Coastal News | Incidents | Don't Miss |

ಪಡುಬಿದ್ರಿ: ವೇಗವಾಗಿ ಚಲಿಸುತ್ತಿದ್ದ ಟ್ಯಾಂಕರ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ  ಉಡುಪಿ ಜಿಲ್ಲೆಯ ಹೆಜಮಾಡಿ ಸರಹದ್ದಿನ ರಾ.ಹೆ.ಯಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಮೃತ ವ್ಯಕ್ತಿಯನ್ನು ನೇಜಾರು ನಿವಾಸಿ ಜಯರಾಜ್(೫೫) ಎಂದು ಗುರುತಿಸಲಾಗಿದೆ.

ಟ್ಯಾಂಕರ್ ಪಣಂಬೂರಿನಿಂದ ಮೈಸೂರಿಗೆ  ಸನ್ ಪ್ಲವರ್ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಡಿವೈಡರ್ ಏರಿ ಮತ್ತೋಂದು ಪಾಶ್ವಕ್ಕೆ ಬಂದು ಡಿಕ್ಕಿ ಹೊಡದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಡಿಕ್ಕಿಯ ರಭಸಕ್ಕೆ ಬೈಕಸವಾರನ ಶರೀರ ಟ್ಯಾಂಕರ್ ನಡಿ ಸಿಲುಕಿಕೊಂಡಿದ್ದು ಟ್ಯಾಂಕರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...

ದಮನಿತ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ವಸತಿ ಸೌಲಭ್ಯ: ಫಲಾನುಭವಿಗಳನ್ನು ಶೀಘ್ರ ಆಯ್ಕೆ: ಜಿಲ್ಲಾಧಿಕಾರಿ ದೀಪಾ ಚೋಳನ್

ದಮನಿತ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ವಸತಿ ಸೌಲಭ್ಯ: ಫಲಾನುಭವಿಗಳನ್ನು ಶೀಘ್ರ ಆಯ್ಕೆ: ಜಿಲ್ಲಾಧಿಕಾರಿ ದೀಪಾ ಚೋಳನ್