ಪಾಕ್ ಪರ ಘೋಷಣೆ ಕೂಗಿದ ಪ್ರಕರಣ. ಬಂಧಿತರ ಬಿಡುಗಡೆಗೆ ಆಗ್ರಹಿಸಿ ಎಸ್ಡಿಪಿಐ ಪ್ರತಿಭಟನೆ.

Source: SO News | Published on 15th January 2021, 8:22 PM | Coastal News | Don't Miss |

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಪಂಚಾಯತ್ ಮತ ಎಣಿಕೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಆರೋಪದಲ್ಲಿ ಕಾರ್ಯಕರ್ತರನ್ನು ಬಂಧಿಸಿರುವ ಘಟನೆಯನ್ನು ಖಂಡಿಸಿ ಎಸ್‌ಡಿಪಿಐ ಕಾರ್ಯಕರ್ತರು ಎಸ್ಪಿ ಕಚೇರಿ ಚಲೋ ಪ್ರತಿಭಟನೆ ನಡೆಸಿದರು.

 ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟಿಸಿದ ಕಾರ್ಯಕರ್ತರು  ಅಮಾಯಕ ಯುವಕರ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿಸಿದರು. ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಹಾಗೂ ಕರ್ತವ್ಯ ಲೋಪ ಎಸಗಿದ ಬೆಳ್ತಂಗಡಿ ಪೊಲೀಸ್ ಸಬ್‌ಇನ್ ಸ್ಪೆಕ್ಟರ್ ರನ್ನು‌ ಅಮಾನತು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

  ಇದೇ ವೇಳೆ ಎಸ್ಪಿ ಕಚೇರಿಗೆ ತೆರಳಲು ಮುಂದಾಗಿದ್ದ ಪ್ರತಿಭಟನಾಕಾರರಿಗೆ ತಡೆಯೊಡ್ಡಲಾಯಿತು.  ಟೌನ್‌ಹಾಲ್‌ನಿಂದ ವೆನ್ಲಾಕ್ ಆಸ್ಪತ್ರೆವರೆಗೆ ಕಾರ್ಯಕರ್ತರು ಸಮಾವೇಶಗೊಂಡಿದ್ದರು.

Read These Next

ಜೆಡಿಎಸ್ ಮತ ಬುಟ್ಟಿಗೆ ’ಕೈ’ ಹಾಕಿದ ಅಂಜಲಿ ತಾಯಿ ; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡರ ಮನೆಗೆ ಭೇಟಿ

ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...