ಬೆಂಗಳೂರು: '2ಎ' ಮೀಸಲಾತಿಗಾಗಿ ಪಂಚಮಸಾಲಿ ಮಹಾಸಮಾವೇಶ, ಮೀಸಲಾತಿ ದೊರೆಯುವವರೆಗೂ ಪೀಠಕ್ಕೆ ಮರಳುವುದಿಲ್ಲ; ಸ್ವಾಮೀಜಿಗಳ ಎಚ್ಚರಿಕೆ

Source: VB News | By JD Bhatkali | Published on 22nd February 2021, 1:16 PM | State News | National News |

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ '2ಎ' ಅಡಿಯಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಪಂಚಮಸಾಲಿ ಸಮುದಾಯ ಇಲ್ಲಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಿತು. 'ಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಭರವಸೆ ದೊರೆಯುವವರೆಗೆ ಹಿಂದಿರುಗುವುದಿಲ್ಲ' ಎಂದು ಪಟ್ಟು ಮುಂದುವರಿಸಿರುವ ಸಮುದಾಯದ ಸ್ವಾಮೀಜಿಗಳು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರವಿವಾರಇಲ್ಲಿನ ಅರಮನೆಮೈದಾನದಲ್ಲಿ 'ಪಂಚಮಸಾಲಿಮಹಾಸಮಾವೇಶ' ದಲ್ಲಿ ಪಾಲ್ಗೊಂಡಿದ್ದ ಸಚಿವರಾದ ಸಿ.ಸಿ. ಪಾಟೀಲ್ ಮತ್ತು ಮುರುಗೇಶ್ ಆರ್.ನಿರಾಣಿ ಅವರು ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮಿ ನೇತೃತ್ವದಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಧರಣಿ ಸತ್ಯಾಗ್ರಹವನ್ನು ಕೈಬಿಡಿ. 2ಎ ಪ್ರವರ್ಗದಡಿ ಮೀಸಲಾತಿ ನೀಡುವ ಪ್ರಸ್ತಾವ ರಾಜ್ಯ ಸರಕಾರದ ಪರಿಶೀಲನೆಯಲ್ಲಿದೆ. ಶೀಘ್ರದಲ್ಲೇ ಈ ಕುರಿತು ಸರಕಾರ ತನ್ನ ನಿರ್ಧಾರ ಪ್ರಕಟಿಸಲಿದ್ದೆ ಎಂದು ಮನವಿ ಮಾಡಿದರು.

ಆದರೆ, ಇದಕ್ಕೆ ಒಪ್ಪದ ಸ್ವಾಮೀಜಿ ಮತ್ತು ಸಮುದಾಯದ ಪದಾಧಿಕಾರಿಗಳು ಅರಮನೆ

ಕಣ್ಣೀರಿಟ್ಟ  ವಿನಯ್ ಕುಲಕರ್ಣಿ ಪತ್ನಿ 
2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ಆಯೋಜಿಸಿದ್ದ ಸಮಾ ವೇಶದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಕಣ್ಣೀರಿಟ್ಟ ಘಟನೆ ನಡೆಯಿತು.

ಮೈದಾನದಿಂದ ವಿಧಾನಸೌಧಕ್ಕೆ ಮುತ್ತಿಗೆ ಯತ್ನ ನಡೆಸಿದರು. ಆದರೆ, ಮಾರ್ಗಮಧ್ಯೆ ಕಾವೇರಿ ಜಂಕ್ಷನ್ ಬಳಿ ಪೊಲೀಸರು ಹೋರಾಟ ನಿರತರನ್ನು ತಡೆದರು. ಇದರಿಂದ ಆಕ್ರೋಶಿತರಾದ ಕೆಲ ಯುವಕರು ಬ್ಯಾರಿಕೇಡ್ ತಳ್ಳಿದರು. ಈ ವೇಳೆ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಕೂಡಲೇ ಮಧ್ಯಪ್ರವೇಶಿಸಿದ ಜಯಮೃತ್ಯುಂಜಯ ಸ್ವಾಮಿ ಉದ್ರಿಕ್ತರನ್ನು ಸಮಾಧಾನಪಡಿಸಿ, ಶಾಂತಿಯುತ ಪ್ರತಿಭಟನೆ ಮೂಲಕ ಮೀಸಲಾತಿ ಪಡೆದುಕೊಳ್ಳಲು ಬಂದಿದ್ದೇವೆ. 'ಮೌರ್ಯ ವೃತ್ತದಲ್ಲಿನ ಗಾಂಧಿ ಪ್ರತಿಮೆಯ ಬಳಿ ಮಾ.4ರ ವರೆಗೆ ಬೆಳಗ್ಗೆ 9ಗಂಟೆಯಿಂದ ಸಂಜೆ 6ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದು, ಸಿಎಂ ಯಡಿಯೂರಪ್ಪ ಮೀಸಲಾತಿ ಕುರಿತು ವಿಧಾನಸಭೆ ಅಧಿವೇಶನದಲ್ಲೇ ಸ್ಪಷ್ಟ ಭರವಸೆ ನೀಡುವವರೆಗೂ ಹಿಂದಿರುಗುವ ಪ್ರಶ್ನೆಯೇ ಇಲ್ಲ' ಎಂದು ಎಚ್ಚರಿಕೆ ನೀಡಿದರು.

ಮೀಸಲಾತಿ ನೀಡಬೇಕೆ ನ್ನುವುದರಲ್ಲಿ ನನ್ನ ಸಂಪೂರ್ಣ ಬೆಂಬಲ ಇದೆ. ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದಿರುವ, ಕಡುಬಡವರಾಗಿರುವ ವೀರಶೈವ, ಲಿಂಗಾಯತ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗಲೇಬೇಕು. ಇದಕ್ಕೆ ನಮ್ಮ ಅಭ್ಯಂತರ ಏನೂ ಇಲ್ಲ.

ಮುರುಗೇಶ್ ನಿರಾಣಿ,
ಗಣಿ ಮತ್ತು ಭೂ ವಿಜ್ಞಾನ ಸಚಿವ

ಮೊಳಗಿದ ರಣಕಹಳೆ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ 38 ದಿನಗಳ ಪಾದ ಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಸಾವಿರಾರು ಮಂದಿ ಲಿಂಗಾಯತ ಪಂಚಮ ಸಾಲಿಗಳು ಬೆಂಗಳೂರಿನ ಅರ ಮನೆ ಮೈದಾನಕ್ಕೆ ಹರಿದು ಬಂದಿದ್ದು, ಮೀಸಲಾತಿ ರಣಕಹಳೆ ಮೊಳಗಿಸಿ ಬೇಡಿಕೆ ಈಡೇರಿಕೆಗೆ ಹಕ್ಕೊತ್ತಾಯವನ್ನು ಮಂಡಿಸಿದರು.

ಲಿಂಗಾಯತ ಪಂಚಮಸಾಲಿನ ಮುದಾಯದ ಸ್ವಾಮೀಜಿಗಳಾದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆದಿರುವ ಈ ಬೃಹತ್ ಸಮಾವೇಶದ ವೇದಿಕೆ ಲಿಂಗಾಯತ ಪಂಚಮಸಾಲಿ ಸಮುದಾಯದ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.

ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಲಿಂಗಾಯತ ಪಂಚಮ ಸಾಲಿಗಳು 2ಎ ಮೀಸಲಾತಿಯ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು. ಬೇಡಿಕೆ ಈಡೇರು ವವರೆಗೂ ಬೆಂಗಳೂರು ಬಿಟ್ಟು ಕದಲುವುದಿಲ್ಲ ಎಂಬ ಸಂಕಲ್ಪವನ್ನು ತೊಟ್ಟರು.

ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಜ.14ರಂದು ಆರಂಭವಾಗಿದ್ದ “ಪಂಚಮಸಾಲಿಗಳ ನಡಿಗೆ ವಿಧಾನಸೌಧದ ಕಡೆಗೆ ಪಾದಯಾತ್ರೆ' ಶನಿವಾರ ಬೆಂಗಳೂರಿನಲ್ಲಿ ಸಂಪನ್ನಗೊಂಡಿತ್ತು.

ಧರಣಿ ಸತ್ಯಾಗ್ರಹ
ಮಾ.4ರೊಳಗೆ ಸರಕಾರ ಸೂಕ್ತವಾಗಿ ಸ್ಪಂದಿಸದಿದ್ದರೆ, ಮಾ.5ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹವನ್ನು ನಡೆಸುವುದು ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದ್ದು, ಪೊಲೀಸರು ಮೌರ್ಯ ಸರ್ಕಲ್ ಬಳಿ ಧರಣಿ ನಡೆಸಲು ಅವಕಾಶ ನೀಡಿದ್ದಾರೆ.

ಹೀಗಾಗಿ ಪಾದಯಾತ್ರೆಯನ್ನು  ಮೌರ್ಯ ವೃತ್ತದಲ್ಲಿ ಅಂತ್ಯಗೊಳಿಸಿದ್ದು, ನಾಳೆಯಿಂದ ಮಾ.4ರ ವರೆಗೆ ಸತ್ಯಾಗ್ರಹ ನಡೆಯಲಿದೆ. ಮೀಸಲಾತಿ ಘೋಷಣೆ ಆಗುವವರೆಗೂ ನಮ್ಮ ಹೋರಾಟ ನಿಲ್ಲದು ಎಂದು ಶ್ರೀಗಳು ತಿಳಿಸಿದರು.

ಪಾದಯಾತ್ರೆಯ ಅಂತಿಮ ಹಂತವಾಗಿ ರವಿವಾರ ಅರಮನೆ ಮೈದಾನದಲ್ಲಿ ನಡೆದಿರುವ ಬೃಹತ್ ಸಮಾವೇಶದಲ್ಲಿ ಪಂಚಮಸಾಲಿಗಳ ಬೃಹತ್ ಶಕ್ತಿಪ್ರದರ್ಶನವೂ ಅನಾವರಣಗೊಂಡಿತು.

ಸಮಾವೇಶದಲ್ಲಿ ಸಾವಿರಾರು ಜನರು ಪಾಲ್ಗೊಂಡು ತಮ್ಮ ಒಗ್ಗಟ್ಟು ತೋರಿದರು. ಈ n ಸಮಾವೇಶದಲ್ಲಿ ರಾಜ್ಯದ ಹಲವು ಭಾಗಗಳಿಂದ బందిరువా** ಲಕ್ಷಾಂತರ ಪಂಚಮಸಾಲಿ ಲಿಂಗಾಯತರು ಪಾಲ್ಗೊಂಡು ಪಂಚಮಸಾಲಿಗಳ 2ಎ ಮೀಸಲಾತಿಗೆ ಬಲ ತುಂಬಿ, ಪಂಚಮಸಾಲಿ ಸ್ವಾಮೀಜಿಗಳ ಬೆನ್ನಿಗೆ ನಿಂತರು.

ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ ಈ ಸಮುದಾಯವನ್ನು ಪ್ರವರ್ಗ 2ಎಗೆ ಸೇರ್ಪಡೆ ಮಾಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂಬ ಒಕ್ಕೊರಲಿನ ಬೇಡಿಕೆಯನ್ನು ಕೂಡಲೇ ಈಡೇರಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸಮಾವೇಶದಲ್ಲಿ ಕೈಗೊಳ್ಳಲಾಯಿತು.

ಸಮಾವೇಶದಲ್ಲಿ ಸಚಿವರುಗಳಾದ ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್, ಶಾಸಕರುಗಳಾದ ಬಸನಗೌಡ ಪಾಟೀಲ್ ಯತ್ನಾಳ್, ಶಂಕರಮುನೇನಕೊಪ್ಪ, ಅರವಿಂದ ಬೆಲ್ಲದ್, ಲಕ್ಷ್ಮೀ ಹೆಬ್ಬಾಳ್‌, ಮಾಜಿ ಶಾಸಕ ವಿ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಸಮುದಾಯದ ಹಲವು ಮುಖಂಡರು ಪಾಲ್ಗೊಂಡಿದ್ದರು.

ಇಂದು ಸಚಿವರ ಸುದ್ದಿಗೋಷ್ಠಿ: ಲಿಂಗಾಯತ ಪಂಚಮಸಾಲಿ ಮೀಸಲಾತಿಗೆಸಂಬಂಧಿಸಿದಂತೆಸಿಎಂ ಯಡಿಯೂರಪ್ಪ ಸಂಪುಟದ ಹಿರಿಯ ಸಹೋದ್ಯೋಗಿಗಳೊಂದಿಗೆ ಸಮಾಲೋಚನೆ ನಡೆಸಿದರು. ವಾರ್ತಾ ಸಚಿವ ಸಿ.ಸಿ.ಪಾಟೀಲ್, ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಪಂಚಮಸಾಲಿ ಸಮುದಾಯದ ಬಿಜೆಪಿ ಶಾಸಕರು ಸೋಮವಾರ ಮಧ್ಯಾಹ್ನ 1 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಸರಕಾರ ಮತ್ತು ಬಿಎಸ್‌ವೈ ಅವರು ಮೀಸಲಾತಿ ಕಲ್ಪಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

Read These Next

ಕೋವಿಡ್ ನಿಯಂತ್ರಣಕ್ಕೆ ಪ್ರಥಮ ಆದ್ಯತೆ. ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಬಾರದು : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ : ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೋವಿಡ್ ನಿಯಂತ್ರಣದ ಕರ್ತವ್ಯಕ್ಕೆ ಪ್ರಥಮ ಆದ್ಯತೆ ನೀಡಬೇಕು. ...

ಜಿಲ್ಲೆಯ ಮದುವೆ ಹಾಗೂ ಇತರೆ ಸಮಾರಂಭಗಳ ಆಯೋಜನೆಗೆ ಪಾಸ್ ಕಡ್ಡಾಯ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ್

ಧಾರವಾಡ : ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆ ಉಲ್ಬಣವಾಗಿದ್ದು, ನಿಯಂತ್ರಣ ಕಾರ್ಯ ಅತ್ಯವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ...

ಖಾಸಗಿ ಆಸ್ಪತ್ರೆಗಳು ಶೇ.50 ಹಾಸಿಗೆ ಸರ್ಕಾರಿ ಕೋಟಾ ಮೀಸಲಿಡಬೇಕು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ...

ಧಾರವಾಡ ಮಾರುಕಟ್ಟೆ ಪ್ರದೇಶ, ಜನನಿಬಿಡ ಪ್ರದೇಶಗಳಲ್ಲಿ ಸಂಚರಿಸಿ, ಉಚಿತ ಮಾಸ್ಕ್ ವಿತರಿಸಿ, ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರು.

ಧಾರವಾಡ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದ ಸಾರ್ವಜನಿಕರು ಸುರಕ್ಷಿತವಾಗಿರಲು, ಆರೋಗ್ಯ ...

ಗೋಕರ್ಣ ಮಹಾಬಲೇಶ್ವರ ದೇವಾಲಯದ ಹೊಣೆ ಇನ್ಮುಂದೆ ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿಗೆ. ರಾಮಚಂದ್ರಪುರ ಮಠಕ್ಕೆ ಹಿನ್ನಡೆ.

ನವದೆಹಲಿ : ‌ಉತ್ತರಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣದ ಪುರಾಣ ಪ್ರಸಿದ್ದ ಶ್ರೀ ಮಹಾಬಲೇಶ್ವರ ದೇವಾಲಯವನ್ನ ಸುಪ್ರೀಂಕೋರ್ಟ್ ನಿವೃತ್ತ ...

ಪಶ್ಚಿಮಬಂಗಾಳ: ರೋಡ್‌ ಶೋನಲ್ಲಿ ಸೇರಿದ ಭಾರೀ ಜನಸ್ತೋಮ; ಇಷ್ಟೊಂದು ಜನ ಸೇರಿದ್ದು ನೋಡಿರಲೇ ಇಲ್ಲ; ಮೋದಿ

ಪಶ್ಚಿಮಬಂಗಾಳದ ಅಸ್ಸನ್‌ಸೋಲ್‌ನಲ್ಲಿ ಶನಿವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಜನಸಂದಣಿಗೆ ಶ್ಲಾಘನೆ ...