ಪಂಚಾಯತ್ ಸೇವೆಗಳನ್ನು ಪಡೆಯಲು ಬಂದಿದೆ ಪಂಚಮಿತ್ರ ವಾಟ್ಸಾಪ್

Source: SOnews | By Staff Correspondent | Published on 12th March 2024, 7:37 PM | Coastal News | Special Report |

ಸರ್ಕಾರದ ಹಲವು ಇಲಾಖೆಗಳು ಆನ್ಲೈನ್ ಮೂಲಕ ಸಾರ್ವಜನಿಕರಿಗೆ ತಮ್ಮ ಕೈ ಬೆರಳಿನಲ್ಲಿಯೇ ತಮಗೆ ಅಗತ್ಯವಿರುವ ಸೇವೆಗಳನ್ನು ಪಡೆಯಲು ಅವಕಾಶಗಳನ್ನು ನೀಡಿದ್ದು, ರಾಜ್ಯದಲ್ಲಿ ಬಹು ಸಂಖ್ಯೆಯಲ್ಲಿರುವ ಗ್ರಾಮೀಣ ಪ್ರದೇಶದ ಸಾರ್ವಜನಿಕರು ತಮಗೆ ಅವಶ್ಯವಿರುವ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಮತ್ತು ಗ್ರಾಮ ಪಂಚಾಯತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್ಸೈಟ್ ಮತ್ತು ಪೋರ್ಟಲ್ಗಳಲ್ಲಿ ಭೇಟಿ ನೀಡಬೇಕಾಗಿತ್ತು. ಅಲ್ಲದೇ, ಗ್ರಾಮ ಪಂಚಾಯತಿಗಳಿಗೆ ಸಂಬAಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್ ಸೈಟ್ ಅಥವಾ ಪೋರ್ಟಲ್ಗಳು ಇಲ್ಲವಾಗಿತ್ತು..

ಸಮಸ್ಯೆಗೆ ಪರಿಹಾರ ನಿಡುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬAಧಿಸಿದ ಸೇವೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಗ್ರಾಮ ಪಂಚಾಯತಿಗಳಿಗೆ ಸಂಬAಧಿಸಿದ ಕುಂದುಕೊರತೆಗಳನ್ನು ದಾಖಲಿಸಲು, “ಪಂಚಮಿತ್ರಎಂಬ ಒಂದೇ ವೇದಿಕೆಯನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಭಿವೃದ್ದಿಪಡಿಸಿ, ಅನುಷ್ಠಾನಗೊಳಿಸಲಾಗಿದೆ.

ಅಲ್ಲದೇ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ದೇಶದಲ್ಲೇ ಪ್ರಪ್ರಥಮ ಬಾರಿಗೆ ವಾಟ್ಸಾಪ್ Whatsapp Chat ಅನ್ನು ಅಭಿವೃದ್ದಿ ಪಡಿಸಿ, ಅನುಷ್ಠಾನಗೊಳಿಸಲಾಗಿದ್ದು, ಪಂಚಮಿತ್ರ ವಾಟ್ಸಾಪ್ ಸಂಖ್ಯೆ 8277506000 ಮೂಲಕ ಇನ್ನೂ ಮುಂದೆ ಗ್ರಾಮ ಪಂಚಾಯತಿಗಳ ಮಾಹಿತಿ ಮತ್ತು ವಿವರಗಳನ್ನು, ಸೇವೆಗಳಿಗೆ ಅರ್ಜಿ ಮತ್ತು ಕುಂದುಕೊರತೆಗಳನ್ನು Whatsapp ಮೂಲಕ ದಾಖಲಿಸಬಹುದಾಗಿದೆ.

ಪಂಚಮಿತ್ರವಾಟ್ಸಾಪ್ ಮೂಲಕ ಗ್ರಾಮ ಪಂಚಾಯತಿಗಳ, ಚುನಾಯಿತ ಪ್ರತಿನಿಧಿಗಳ ವಿವರಗಳು, ಸಿಬ್ಬಂದಿಗಳ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯತ್ ಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಸೇವೆಗಳ ವಿವರಗಳು, ಸ್ವ ಸಹಾಯ ಗುಂಪಿನ ವಿವರಗಳು ಗ್ರಾಮ ಪಂಚಾಯತ್ ಗಳ ಕಾರ್ಯಕ್ರಮಗಳು ಮತ್ತು ಉಪಕ್ರಮಗಳು, 4 (1) (a) & 4 (1) (b) RTI ದಾಖಲೆಗಳು ಮತ್ತು ಮಾಹಿತಿಗಳ ವಿವರಗಳನ್ನು ಪಡೆಯಬಹುದು.

ಅಲ್ಲದೇ ವಾಟ್ಸಾಪ್ ಮೂಲಕ ಗ್ರಾಮ ಪಂಚಾಯತಿಗಳಿಗೆ ಸಂಬAಧಿಸಿದ, ಕಟ್ಟಡ ನಿರ್ಮಾಣ ಲೈಸೆನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪದ ನಿರ್ವಹಣೆ, ಗ್ರಾಮ ನೈರ್ಮಲ್ಯದ ನಿರ್ವಹಣೆ, ವ್ಯಾಪಾರ ಪರವಾನಗಿ, ಸ್ವಾಧೀನ ಪ್ರಮಾಣಪತ್ರ, ರಸ್ತೆ ಅಗೆವುದಾಕ್ಕಾಗಿ ಅನುಮತಿ, ಕೈಗಾರಿಕಾ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣಾ ಪತ್ರ, MGNREGA ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ನಿಯಮಿತಗೊಳಿಸುವಿಕೆ, ಹೊಸ/ಅಸ್ತಿತ್ವದಲ್ಲಿರುವ ಓವರ್ಗ್ರೌಂಡ್ ಕೇಬಲ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲಸೌಕರ್ಯಕ್ಕಾಗಿ ಅನುಮತಿ/ನಿಯಮಿತಗೊಳಿಸುವಿಕೆ, ನಮೂನೆ 9/11, ನಮೂನೆ 11ಬಿ ಸೇವೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ, ಸೇವೆಗಳನ್ನು ಪಡೆಯುವುದರ ಜೊತೆಗೆ ಅರ್ಜಿಗಳ ಸ್ಥಿತಿಗತಿಯನ್ನು ಸಹ ಪರಿಶೀಲಿಸಬಹುದಾಗಿದೆ.

ಪಂಚಮಿತ್ರ ವಾಟ್ಸಾಪ್ ಚಾಟ್ ಸಂಖ್ಯೆಗೆ ಮೆಸೆಜ್ ಮಾಡುವ ಮೂಲಕ ಗ್ರಾಮೀಣ ಪ್ರದೇಶದ ಜನತೆ ತಮಗೆ ಸಂವಹನ ನಡೆಸಲು ಅನುಕೂಲವಾಗುವ ಭಾಷೆಯನ್ನು ಆಯ್ಕೆ ಮಾಡಿಕೊಂಡು, ನಂತರದಲ್ಲಿ ವಾಟ್ಸಾಪ್ ಕೇಳುವ ಮಾಹಿತಿಗಳ ಮೂಲಕವೇ ತಮ್ಮ ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯತ್ ಗಳನ್ನು ಆಯ್ಕೆ ಮಾಡಿಕೊಂಡು ತಮ್ಮ ಗ್ರಾಮ ಪಂಚಾಯತ್ಗೆ ಸಂಬAದಿಸಿದ ಎಲ್ಲಾ ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ಗ್ರಾಮೀಣ ಜನತೆ ಅತ್ಯಂತ ಸುಲಭವಾಗಿ ಕಾರ್ಯನಿರ್ವಹಿಸುವಂತೆ ವಾಟ್ಸಾಪ್ ನ್ನು ಅಭಿವೃಧ್ದಿಪಡಿಸಿದ್ದು, ಅತ್ಯಂತ ತ್ವರಿತವಾಗಿ ಮತ್ತು ಸುಲಭವಾಗಿ ಗ್ರಾಮೀಣ ಜನತೆ ಮಾಹಿತಿಯನ್ನು ಪಡೆದುಕೊಳ್ಳಲು ಇದರಿಂದ ಸಾಧ್ಯವಾಗಲಿದೆ. : ಈಶ್ವರ ಕಾಂದೂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್, ಉತ್ತರ ಕನ್ನಡ ಜಿಲ್ಲೆ.

Read These Next

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...