ಪರೇಶ್ ಮೇಸ್ತಾ ಹತ್ಯೆಯಲ್ಲ, ಆಕಸ್ಮಿಕ ಸಾವು; ಬಿ ರಿಪೋರ್ಟ್ ಸಲ್ಲಿಸಿದ ಸಿಬಿಐ

Source: Vb | By I.G. Bhatkali | Published on 4th October 2022, 11:18 AM | Coastal News | State News |

ಕಾರವಾರ: ಹೊನ್ನಾವರ ಪರೇಶ್‌ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖಾ ವರದಿಯನ್ನು ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ವರದಿಯಲ್ಲಿ ಪರೇಶ್‌ ಮೇಸ್ತಾ ಹತ್ಯೆಯಲ್ಲ, ಆಕಸ್ಮಿಕ ಸಾವು ಎಂದು ಉಲ್ಲೇಖಿಸಲಾಗಿದೆ. ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ನ.16ಕ್ಕೆ ತೀರ್ಪು ಕಾಯ್ದಿರಿಸಿದೆ.

2017ರ ಡಿ.6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದರು. ಬಳಿಕ ಡಿ.8ರಂದು ಅವರ ಮೃತದೇಹ ಪತ್ತೆಯಾಗಿತ್ತು.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿದ್ದ ಬಿಜೆಪಿ ನಾಯಕರು ಹಾಗೂ ಸಂಘಪರಿವಾರ ಕಾರ್ಯಕರ್ತರು ಕೋಮು ದ್ವೇಷದಿಂದಲೇ ಹತ್ಯೆ ಮಾಡಿರುವುದಾಗಿ ವ್ಯಾಪಕವಾಗಿ ಆರೋಪಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು ಹಾಗೂ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದ್ದರಿಂದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರವು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.

ಬಳಿಕ ಈ ಪ್ರಕರಣದಲ್ಲಿ 5 ಮಂದಿ ಆರೋಪಿಗಳನ್ನೂ ಬಂಧಿಸಲಾಗಿತ್ತು. ಇದೀಗ ಈ ಬಗ್ಗೆ ವಿವರವಾದ ತನಿಖೆ ನಡೆಸಿದ ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.

ಈ ವರದಿಯಲ್ಲಿ ಪರೇಶ್ ಮೇಸ್ತಾ ಸಾವು ಆಕಸ್ಮಿಕವಾಗಿದ್ದು, ಇದು ಹತ್ಯೆಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಸೋಮವಾರ ಸಿಬಿಐ ಸಲ್ಲಿಸಿದ ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯವು ನವೆಂಬರ್ 16ಕ್ಕೆ ತೀರ್ಪು ಮುಂದೂಡಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...