ಸೆ.14 ರಿಂದ ಸಂಸತ್ ಅಧಿವೇಶನ: ಬೆಳಗ್ಗೆ ಲೋಕಸಭೆ, ಮಧ್ಯಾಹ್ನ ರಾಜ್ಯಸಭೆ ಕಲಾಪ

Source: PTI | Published on 1st September 2020, 10:16 PM | National News | Don't Miss |

 

 

 
ನವದೆಹಲಿ: ಸಂಸತ್ತಿನ ಮುಂಗಾರು ಅದಿವೇಶನ, ಇದೇ ಸೆಪ್ಟೆಂಬರ್ 14 ರಿಂದ ಆರಂಭವಾಗಲಿದ್ದು, ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ.
ಅಕ್ಟೋಬರ್ 1 ರವರೆಗೆ ಕಲಾಪ ನಡೆಯಲಿದ್ದು, ಬೆಳಗ್ಗೆ ಲೋಕಸಭೆ, ಮಧ್ಯಾಹ್ನ ರಾಜ್ಯಸಭೆ ಕಲಾಪ ನಡೆಸಲು ತೀರ್ಮಾನಿಸಲಾಗಿದೆ. ಕೋವಿಡ್-19 ಮಾರ್ಗಸೂಚಿಯಂತೆ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ಬೇರೆ ಬೇರೆ ಸಮಯಗಳಲ್ಲಿ ನಿಗದಿಪಡಿಸಲಾಗಿದೆ.
ಸೋಂಕು ನಿಯಂತ್ರಣ ಉದ್ದೇಶದಿಂದ ವ್ಯಾಪಕ ಬಿಗಿ ಕ್ರಮಗಳನ್ನು ಕೈಗೊಂಡಿದ್ದು, ಸಂಸದರಿಗೆ ಪ್ರತ್ಯೇಕ ಮಾರ್ಗ ಸೂಚಿ ನಿಗದಿಪಡಿಸಲಾಗಿದೆ. ಸಂಸತ್ತಿನ ಸಿಬ್ಬಂದಿಗೂ ಸಹ ಇದೇ ರೀತಿಯಲ್ಲಿ ನಿಯಮಾಳಿಗಳನ್ನು ರೂಪಿಸಲಾಗಿದೆ.
ಸೋಂಕು ನಿಯಂತ್ರಣಕ್ಕೆ ವಿಶೇಷ ಗಮನಹರಿಸಲಾಗಿದೆ. ಎಲ್ಲಾ ಸಂಸದರ ವೈದ್ಯಕೀಯ ತಪಾಸಣೆ, ದೈಹಿಕ ಅಂತರ ಪಾಲನೆ ಅನುಸಾರ ಸದನಗಳಲ್ಲಿ ಆಸನ ವ್ಯವಸ್ಥೆಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಕೊರೊನಾ ಪರಿಸ್ಥಿತಿಯ ಕಾರಣ ಉಭಯ ಸದನಗಳಲ್ಲಿ ಹಿಂದೆಂದೂ ಇಲ್ಲದಷ್ಟು ಸುರಕ್ಷತಾ ಕ್ರಮಗಳಿಗೆ ಒತ್ತು  ನೀಡಲಾಗಿದೆ

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...