ನೇಜಾರಿನಲ್ಲಿ ಭೀಕರ ಹತ್ಯೆ ಪ್ರಕರಣ. ಕುಟುಂಬದವರನ್ನ ಭೇಟಿಯಾಗಿ ಸಾಂತ್ವನ ಹೇಳಿದ ಸಚಿವೆ.

Source: SO News | By Laxmi Tanaya | Published on 18th November 2023, 7:26 PM | Coastal News |

ಉಡುಪಿ:  ತಾಲೂಕಿನ  ನೇಜಾರಿನಲ್ಲಿ ಭೀಕರ ಹತ್ಯೆ ಪ್ರಕರಣ ನಡೆದ ಮನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಮೃತ ಹಸೀನಾ ಪತಿ ನೂರ್ ಮೊಹಮದ್ ಹಾಗೂ ಅವರ ಮಗ ಆಸಾದ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಭೇಟಿಯಾದ ಸಚಿವರು ಅವರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಮಾತನಾಡಿದ  ಸಚಿವರು, ಉಡುಪಿಯಲ್ಲಿ ಬೆಚ್ಚಿ ಬೀಳುವ ಘಟನೆಯಾಗಿದೆ. ಪ್ರಕರಣದ  ಆರೋಪಿಯನ್ನು  ಕ್ಷಿಪ್ರವಾಗಿ ಬಂಧಿಸುವ ಮೂಲಕ ಪೊಲೀಸ್ ಇಲಾಖೆ ಉತ್ತಮ ಕೆಲಸ ಮಾಡಿದೆ ಎಂದರು.

ಶಾಂತಿ ಪ್ರಿಯರ ಜಿಲ್ಲೆಯಲ್ಲಿ ಇಂತಹ ಘಟನೆ ನಡೆಯಬಾರದಿತ್ತು.  ಮುಂದೆ ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಖುತ್ತೇವೆ, ಕಾನೂನು ಸುವ್ಯವಸ್ಥಿತೆ ಕಾಪಾಡುತ್ತೇವೆ. ಕೊಲೆ  ಆರೋಪಿ ಸೈಕೋ ರೀತಿಯಲ್ಲಿ ವರ್ತಿಸಿದ್ದಾನೆ. ಈಗಾಗಲೇ ಆತ ಮೊದಲ ಮದುವೆ ಆಗಿದ್ದಾನೆ. 20 ನಿಮಿಷದಲ್ಲಿ ಕೃತ್ಯ ನಡೆಸಿದ್ದು ಆತನ ಮೆಂಟಲ್ ಸ್ಟೆಟಸ್ ಯಾವ ರೀತಿ ಇರಬಹುದು ಎಂದು ಊಹಿಸಲು ಸಾಧ್ಯವಿಲ್ಲವೆಂದು ಹೆಬ್ಬಾಳ್ಕರ್ ಹೇಳಿದರು.

ಕುಟುಂಬದ ಸದಸ್ಯರು ಫಾಸ್ಟ್ ಟ್ರಾಕ್ ನ್ಯಾಯಾಲಯದ ಮೂಲಕ ತನಿಖೆಗೆ ಒತ್ತಾಯಿಸಿದ್ದಾರೆ. ಮನೆಯವರು ಒಬ್ಬರ ಹೆಸರು ಕೊಟ್ಟಿದ್ದಾರೆ ಅವರ ಮೂಲಕ ತನಿಖೆ ಮಾಡುತ್ತೇವೆ. ತಾನು ಬೆಳಗಾವಿಯಲ್ಲಿ ಇದ್ದ ಕಾರಣ ಉಡುಪಿಗೆ ಬರುವುದಕ್ಕೆ ವಿಳಂಬವಾಗಿದೆ ಆದರೂ ಅಲ್ಲಿಂದಲೇ ನಾನು ಕುಟುಂಬದ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೆ ಎಂದು ಅವರು ಮಾಹಿತಿ ನೀಡಿದರು.

Read These Next

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ; ದೇಶ ಬಿಜೆಪಿ ಆಡಳಿತದಲ್ಲಿ 25 ವರ್ಷದಷ್ಟು ಹಿಂದೆ ಹೋಗಿದೆ; ದೇಶಪಾಂಡೆ ಆರೋಪ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...