ಕಾರವಾರ: ಮಾತೃ ವಂದನಾ ಮೊತ್ತವನ್ನು ಸಕಾಲದಲ್ಲಿ ಪಾವತಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ

Source: S O News | By I.G. Bhatkali | Published on 29th October 2024, 8:07 PM | Coastal News |

ಕಾರವಾರ: ಜಿಲ್ಲೆಯಲ್ಲಿ ಮಾತೃವಂದನಾ ಯೋಜನೆಯಡಿ ನೊಂದಣಿಯಾಗಿರುವ ಗರ್ಭಿಣಿ ಮಹಿಳೆಯರಿಗೆ ನೀಡುವ ಸಹಾಯಧನದ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಸೂಚನೆ ನೀಡಿದರು.

ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆಯ ಮಿಶನ್ ಶಕ್ತಿ ಯೋಜನೆ ಹಾಗೂ ಇಲಾಖೆಯ ಇತರೆ ಯೋಜನೆಗಳ ಪ್ರಗತಿ ಕುರಿತ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾತೃವಂದನಾ ಯೋಜನಯಡಿ ನಿಡುವ ಸಹಾಯಧನವು ಗರ್ಭಿಣಿ ಮಹಿಳೆಗೆ ಆಕೆಯ ಆರೋಗ್ಯವರ್ಧನೆಗಾಗಿ ಪೂರಕ ಆಹಾರ ಪಡೆಯಲು ಮತ್ತು ಮಗುವಿನ ಪಾಲನೆಗೆ ಸಹಕಾರಿಯಾಗಲಿದ್ದು ಈ ಮೊತ್ತವನ್ನು ನಿಗಧಿತ ಅವಧಿಯೊಳಗೆ ನೀಡುವಲ್ಲಿ ತಾಂತ್ರಿಕ ಕಾರಣಗಳಿದ್ದಲ್ಲಿ ಅವುಗಳನ್ನು ಸರಿಪಡಿಸಿ, ಸಕಾಲದಲ್ಲಿ ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡುವಂತೆ ತಿಳಿಸಿದರು.

 ಮಾತೃವಂದನಾ ಯೋಜನೆಯಡಿ ಸೈಬರ್ ವಂಚಕರ ಪೋನ್ ಕಾಲ್‌ಗಳು ಬರುತ್ತಿರುವ ಬಗ್ಗೆ ವರದಿಯಾಗುತ್ತಿದ್ದು, ಮಾತೃ ವಂದನಾ ಯೋಜನೆಯ ಹೆಸರಲ್ಲಿ ಕರೆ ಮಾಡಿ, ಓಟಿಪಿ ಕೇಳಿದ್ದಲ್ಲಿ ಯಾವುದೇ ಕಾರಣಕ್ಕೂ ನೀಡದಂತೆ ಗರ್ಭಿಣಿ ಮಹಿಳೆಯರಿಗೆ ಜಾಗೃತಿ ಮೂಡಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗೆ 2701 ಗಂಡು ಮತ್ತು 2537 ಹೆಣ್ಣು ಮಕ್ಕಳು ಜನಿಸಿದ್ದು, ಕೆಲವು ತಾಲೂಕುಕುಗಳಲ್ಲಿ ಗಂಡು ಮತ್ತು ಮತ್ತು ಹೆಣ್ಣು ಮಕ್ಕಳ ಲಿಂಗಾನುಪಾತದಲ್ಲಿ ವ್ಯತ್ಯಾಸಗಳು ಕಂಡು ಬರುತ್ತಿದ್ದು ಈ ಬಗ್ಗೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸುವಂತೆ ಹಾಗೂ ಜಿಲ್ಲೆಯಲ್ಲಿ ಮಕ್ಕಳ ಲಿಂಗಾನುಪಾತದಲ್ಲಿ ವ್ಯತ್ಯಾಸ ಕಂಡು ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಕೌಟುಂಬಿಕ ದೌರ್ಜನ್ಯಗಳಿಗೆ ಒಳಪಡುವ ಮಹಿಳೆಯರಿಗೆ ಅಗತ್ಯ ನೆರವು ಒದಗಿಸುವುದರ ಜೊತೆಗೆ ಅವರ ಹಕ್ಕುಗಳನ್ನು ರಕ್ಷಣೆ ಮಾಡಿ, ಈ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸುವ ಮೂಲಕ ನೊಂದ ಮಹಿಳೆಯರಿಗೆ ತ್ವರಿತಗತಿಯಲ್ಲಿ ಸೂಕ್ತ ನ್ಯಾಯ ಒದಗಿಸುವಂತೆ ತಿಳಿಸಿದರು.

ಸಖಿ ಒನ್ ಸ್ಟಾಪ್ ಸೆಂಟರ್, ಅಂಗನವಾಡಿ ಕಟ್ಟಡಗಳು ಮತ್ತು ಮೂಲಭೂತ ಸೌಕರ್ಯಗಳು ಹಾಗು ಗೃಹ  ಲಕ್ಷ್ಮಿ ಯೋಜನೆಯ ಪ್ರಗತಿಯ ಕುರಿತಂತೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ದಿವ್ಯಶ್ರೀ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿರೂಪಾಕ್ಷ ಪಾಟೀಲ್ ಹಾಗೂ ಎಲ್ಲಾ ತಾಲೂಕುಗಳು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

Read These Next

ಫೆಂಗಲ್ ಚಂಡಮಾರುತದ ಪರಿಣಾಮ ಮೀನುಗಾರರಿಗೆ ಎಚ್ಚರಿಕೆ; ಕರಾವಳಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಪರಿಣಾಮ ದ.ಕ.ಜಿಲ್ಲೆಯ ಮೇಲಾಗಿದೆ. ಸೋಮವಾರ ...