ತಾಯಿ, ಶಿಶು ಮರಣ ನಿಯಂತ್ರಣಕ್ಕೆ ಹೆಚ್ಚಿನ ನಿಗಾವಹಿಸಿ : ಜಿಲ್ಲಾಧಿಕಾರಿ

Source: so news | Published on 12th November 2019, 12:27 AM | State News | Don't Miss |

ಹಾಸನ: ಜಿಲ್ಲೆಯಾದ್ಯಂತ ಪ್ರಸವ ಪೂರ್ವ ಹಾಗೂ ನಂತರದ ತಾಯಿ ಹಾಗೂ ಶಿಶು ಮರಣವನ್ನು ಸಂಪೂರ್ಣವಾಗಿ ನಿಯಂತ್ರಿಸಲು ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಪ್ರತಿಯೊಬ್ಬರೂ ಹೆಚ್ಚಿನ ನಿಗಾವಹಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಅಭಿಯಾನದ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ತಾಯಿ ಮರಣ ಸಂಭವಿಸಿಲ್ಲವಾದರೂ ಮುಂದೆಯೂ ಇದೇ ರೀತಿ ಸುಧಾರಿಸುವಂತೆ ಹಾಗೂ ನವಜಾತ ಶಿಶುಗಳ ಬೆಳವಣಿಗೆಗೆ ಆರೋಗ್ಯ ಇಲಾಖೆ ಎಲ್ಲಾ ವಿಧದಲ್ಲಿಯೂ ಸಹಕಾರ ನೀಡುವಂತೆ ತಿಳಿಸಿದರು.
ಗರ್ಭೀಣಿ ಸ್ತ್ರೀಯರಿಗೆ ಪ್ರಸವ ಪೂರ್ವ ಹಾಗೂ ನಂತರದಲ್ಲಿ ಶುಶ್ರೂಷಕಿಯರು ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡಬೇಕು ಅಲ್ಲದೇ, ಆಶಾಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತೆಯರಿಂದ ಗರ್ಭೀಣಿ ಸ್ತ್ರೀ ಮತ್ತು ಬಾಣಂತಿಯರು ಅನುಸರಿಸಬೇಕಾದ ಮುನ್ನೇಚ್ಚರಿಕಾ ಕ್ರಮಗಳು ಹಾಗೂ ವಿಶೇಷ ಆರೋಗ್ಯ ಕಾಳಜಿಯ ಬಗ್ಗೆ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ತುರ್ತು ಸೇವೆ ಒದಗಿಸುವ ಆಂಬುಲೆನ್ಸ್ ವಾಹನಗಳು ಸರಿಯಾದ ಸಮಯಕ್ಕೆ ತಲುಪಬೇಕು ಇದರಲ್ಲಿ ಯಾವುದಾದರೂ ಲೋಪವಿದ್ದಲ್ಲಿ ಆ ವಾಹನವನ್ನು ಪರಿಶೀಲಿಸಿ ವಾಹನವಿದ್ದ ಸ್ಥಳ ಮತ್ತು ಸಮಯದ ಬಗ್ಗೆ ಮಾಹಿತಿ ಪಡೆಯಬೇಕೆಂದರು.
ಮನೆಹೆರಿಗೆಗಳ ಬಗ್ಗೆ ಹೆಚ್ಚಿನ ಗಮನಹರಿಸಿ ಗರ್ಭೀಣಿ ಸ್ತ್ರೀಯರಿಗೆ ಮನೆಹೆರಿಗೆಯಿಂದಾಗುವ ಅನಾನುಕೂಲಗಳ ಬಗ್ಗೆ ಮನವರಿಕೆ ಮಾಡಬೇಕು. ವೈದ್ಯರ ಅಥವಾ ಶುಶ್ರೂಷಕಿಯರ ಸಲಹೆ ಮೇರೆಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗುವಂತೆ ಗರ್ಭೀಣಿ ಸ್ತ್ರೀಯರಿಗೆ ತಿಳುವಳಿಕೆ ಮೂಡಿಸಬೇಕೆಂದು ಆರ್ ಗಿರೀಶ್ ನಿರ್ದೇಶನ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ಜಿಲ್ಲೆಯಲ್ಲಿ ನಡೆದಿರುವ ಶಿಶು ಮರಣಗಳಿಗೆ ಕಾರಣ, ಆಸ್ಪತ್ರೆಗಳಲ್ಲಿ ದೊರೆಯುವ ವೈದ್ಯಕೀಯ ಸೌಲಭ್ಯಗಳ ಬಗ್ಗೆ ವಿವರಣೆ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ|| ನವೀನ್ ಭಟ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ|| ರಾಜ್ ಗೋಪಾಲ್, ಜಿಲ್ಲಾ ಕ್ಷಯ ಹಾಗೂ ಏಡ್ಸ್ ರೋಗ ನಿಯಂತ್ರಣಾಧಿಕಾರಿ ಡಾ|| ನಾಗೇಶ್ ಆರಾಧ್ಯ ಮತ್ತಿತರ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...