ಕಾರವಾರ: ಜಿಲ್ಲಾ ಉಸ್ತುವಾರಿ ಸಚಿವರಿಂದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿ ಪ್ರಧಾನ

Source: S O News | By I.G. Bhatkali | Published on 4th November 2023, 7:26 PM | Coastal News |

ಕಾರವಾರ: ಜಿಲ್ಲಾ ಪಂಚಾಯತ್‌ನಿAದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಅಕ್ಟೋಬರ್ ತಿಂಗಳ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಭಾಜನರಾದ ಹಳಿಯಾಳ ತಾಲ್ಲೂಕಿನ ಭಾಗವತಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಗದೀಶ್ ಕೆ. ದೇಸಾಯಿ ಅವರಿಗೆ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ರವರು ಇಂದು ಜಿಲ್ಲಾ ಪಂಚಾಯತ್ನ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.

ಪ್ರಶಸ್ತಿ ಪುರಸ್ಕೃತ ಪಿಡಿಒ ಜಗದೀಶ್ ದೇಸಾಯಿ ಅವರು ಎಂ.ಎ., ಬಿ.ಎಡ್. ಪದವಿದರರಾಗಿದ್ದು, 2014ರಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಪ್ರಾರಂಭಿಸಿದ್ದಾರೆ. ಜಗದೀಶ ದೇಸಾಯಿ ಅವರು ಹಳಿಯಾಳ ತಾಲ್ಲೂಕಿನ ಭಗವತಿ ಗ್ರಾಮ ಪಂಚಾಯತಿ ಕಾರ್ಯಾವಧಿಯ 2014 ರಿಂದ ಮಹಾತ್ಮಗಾಂಧಿ ನರೇಗಾದಲ್ಲಿ ನಿಗದಿತ ಗುರಿ ಮೀರಿದ ಸಾಧನೆಗೈದಿದ್ದು, ಗ್ರಾಪಂ ವ್ಯಾಪ್ತಿಯ 10 ಶಾಲೆಗಳಿಗೆ ಕಾಂಪೌAಡ್ ಹಾಗೂ ಆಟದ ಮೈದಾನ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ನೆರೆ ಪ್ರವಾಹ ಸಮಯದಲ್ಲಿ 2014 ರಿಂದ ಯಾವುದೇ ಸಾವು-ನೋವುಗಳು ಸಂಭವಿಸದAತೆ ಮತ್ತು 2019-20ನೇ ಸಾಲಿನ ಕೋವಿಡ್ ಸಂದರ್ಭದಲ್ಲಿ ಗ್ರಾಪಂ ವ್ಯಾಪ್ತಿಯ 6 ಗ್ರಾಮಗಳಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ಬಾರದಿರುವ ಹಾಗೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಸ್ಥಳೀಯ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. 

 ಶಾಸಕ ಸತೀಶ ಸೈಲ್, ಭೀಮಣ್ಣ ನಾಯ್ಕ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಸೇರಿದಂತೆ ಜಿಲ್ಲಾ ಪಂಚಾಯತ್‌ನ ಎಲ್ಲ ಶಾಖೆಗಳ ಮುಖ್ಯಸ್ಥರು, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
 

Read These Next