ಮಾಸ್ಕ್ ಬಳಕೆ ನಿಯಮ ಉಲ್ಲಂಘಿಸುವವರಿಗೆ ದಂಡ: ನಾಳೆ ಸೆ.25 ರಿಂದ ವಿಶೇಷ ಕಾರ್ಯಾಚರಣೆ: ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ

Source: SO News | By Laxmi Tanaya | Published on 25th September 2020, 7:50 AM | State News | Don't Miss |

ಧಾರವಾಡ : ಕೊರೊನಾ ವೈರಾಣು ನಿಯಂತ್ರಣಕ್ಕೆ ಮಾಸ್ಕ್ ಬಳಕೆ ಕಡ್ಡಾಯವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಈ ನಿಯಮ ಪಾಲಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಮಾಸ್ಕ್ ಬಳಕೆ ಮಾಡದವರಿಂದ ಜಿಲ್ಲೆಯಲ್ಲಿ ಈಗಾಗಲೇ 30 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ದಂಡ ವಿಧಿಸುವ ಕಾರ್ಯ ಇನ್ನಷ್ಟು ಚುರುಕುಗೊಳಿಸಲು  ಸೆ.25 ರಿಂದ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಪ್ರಾರಂಭಿಸಲಾಗುವುದು. ಪ್ರತಿಯೊಬ್ಬ ನಾಗರಿಕರು ಮಾಸ್ಕ್ ಬಳಕೆ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ಮಾಸ್ಕ್ ಬಳಕೆಯಿಂದ ಕೊರೊನಾ ವೈರಾಣು ಹರಡುವಿಕೆ ನಿಯಂತ್ರಿಸಬಹುದು ಎಂಬುದು ಈಗಾಗಲೇ ವೈದ್ಯಕೀಯವಾಗಿ ದೃಢಪಟ್ಟಿದೆ. ಮಾರುಕಟ್ಟೆ, ಹೋಟೆಲ್, ಪಾನ್‍ಶಾಪ್ ಮತ್ತಿತರ ಅಂಗಡಿ-ಮುಂಗಟ್ಟು ಸಾರ್ವಜನಿಕ ಸ್ಥಳಗಳಲ್ಲಿ ಜನರು ಮಾಸ್ಕ್ ಬಳಕೆ ಮಾಡುವುದು ಕಡ್ಡಾಯವಾಗಿದೆ. ಈ ನಿಯಮ ಉಲ್ಲಂಘಿಸಿದರೆ ನಗರ ಪ್ರದೇಶಗಳಲ್ಲಿ 200/- ರೂ.ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 100/- ರೂ.ದಂಡ ವಿಧಿಸಲು ಸರ್ಕಾರ ಸೂಚಿಸಿದೆ. ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ದಂಡ ವಿಧಿಸಲು ಪೊಲೀಸ್, ಮಹಾನಗರಪಾಲಿಕೆ, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ಕಂದಾಯ ಸೇರಿದಂತೆ ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡಗಳು ಹುಬ್ಬಳ್ಳಿ-ಧಾರವಾಡ ಅವಳಿನಗರ, ಎಲ್ಲಾ ತಾಲೂಕು ಕೇಂದ್ರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ಆಕರಿಸಲಿವೆ. ಪ್ರತಿಯೊಬ್ಬರೂ ಮಾಸ್ಕ್ ಧರಿಸುವ ಮೂಲಕ ಕೊರೊನಾ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಬೇಕು ಎಂಬುದು ಇದರ ಉದ್ದೇಶವಾಗಿದೆ. ಸಂಗ್ರಹವಾದ ದಂಡ ಶುಲ್ಕದ ಮಾಹಿತಿಯನ್ನು ಗೂಗಲ್ ಸ್ಪ್ರೆಡ್ ಶೀಟ್‍ನಲ್ಲಿ ಕಾಲಕಾಲಕ್ಕೆ ನವೀಕರಿಸಲಾಗುವುದು. ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ದಂಡ ಶುಲ್ಕ ರಸೀದಿಗಳ ಪುಸ್ತಕಗಳನ್ನು ಒದಗಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಚಿಕಿತ್ಸೆಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಪಾಲಿಸಲಾಗುತ್ತಿದೆ. ಆಕ್ಸಿಜನ್ ಪೂರೈಕೆ, ವೆಂಟಿಲೇಟರುಗಳ ವ್ಯವಸ್ಥೆ ಬಗ್ಗೆ ಸರ್ಕಾರ ನೀಡುವ ನಿರ್ದೇಶನಗಳನ್ನು ಅನುಸರಿಸಲಾಗುತ್ತಿದೆ. ಬೇರೆ ಜಿಲ್ಲೆಯ ಸೋಂಕಿತರು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಕೂಡ ಅವರ ಸರಿಯಾದ ವಿಳಾಸ, ತಾಲೂಕು, ಜಿಲ್ಲೆಯ ಮಾಹಿತಿಯನ್ನು ಎಸ್‍ಆರ್‍ಎಫ್ ಗುರುತಿನ ಸಂಖ್ಯೆ ಸೃಜಿಸುವ ಸಂದರ್ಭದಲ್ಲಿ ಸರಿಯಾಗಿ ದಾಖಲಿಸಬೇಕು. ಈ ಕುರಿತು ಆ ಹಂತದ ಸಿಬ್ಬಂದಿಗೆ ಅರಿವು ಮೂಡಿಸಬೇಕು.

ಖಾಸಗಿ ಆಸ್ಪತ್ರೆಗಳಿಗೂ ಸರ್ಕಾರದಿಂದ ವೆಂಟಿಲೇಟರ್: ಸರ್ಕಾರದ ವೈದ್ಯಕೀಯ ಸಂಸ್ಥೆಗಳಲ್ಲಿ ಲಭ್ಯವಿರುವ ವೆಂಟಿಲೇಟರ್, ಹೈ ಫ್ಲೊಆಕ್ಸಿಜನ್ ಸರಬರಾಜು ಉಪಕರಣಗಳನ್ನು ಖಾಸಗಿ ಆಸ್ಪತ್ರೆಗಳಿಗೂ ಸಹ ಅವರ ಕೋರಿಕೆ ಮೇರೆಗೆ ಒದಗಿಸಿ, ನೆರವು ನೀಡಲು ಸರ್ಕಾರ ಅವಕಾಶ ನೀಡಿದೆ. ಖಾಸಗಿ ಆಸ್ಪತ್ರೆಗಳು ಈ ಕುರಿತು ಮನವಿ ಸಲ್ಲಿಸಿದರೆ ಕ್ರಮವಹಿಸಲಾಗುವುದು. ಜೀವ ರಕ್ಷಣೆಯೇ ಮೊದಲ ಆದ್ಯತೆಯಾಗಿರುವುದರಿಂದ ಸಮರೋಪಾದಿಯಲ್ಲಿ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಬೇಕು. ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ತಲಾ 80 ಜಂಬೋ ವೈದ್ಯಕೀಯ ಆಕ್ಸಿಜನ್ ಸಿಲಿಂಡರ್‍ಗಳು ಲಭ್ಯ ಇದ್ದು ಸದಾಕಾಲ ಅವು ಭರ್ತಿಯಾಗಿರುವಂತೆ ನೋಡಿಕೊಳ್ಳಬೇಕು ಹಾಗೂ ಖಾಸಗಿ ಆಸ್ಪತ್ರೆಗಳು ಕೋರಿದರೆ ತಾತ್ಕಾಲಿಕವಾಗಿ ಅವರಿಗೆ ನೆರವು ನೀಡಲು ಸಿದ್ಧವಾಗಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವರ್ತಿಕಾ ಕಟಿಯಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಇಬ್ರಾಹಿಂ ಮೈಗೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ್ ಮಾನಕರ್, ಡಾ.ಎಸ್.ಎಂ.ಹೊನಕೇರಿ, ಡಾ.ಲಕ್ಷ್ಮೀಕಾಂತ ಲೋಕರೆ, ಡಾ.ಶೈಲೇಂದ್ರ, ಡಾ.ಸುಜಾತಾ ಹಸವಿಮಠ, ಡಾ.ಶಶಿ ಪಾಟೀಲ, ಡಾ.ಆಶಾ ಪಾಟೀಲ, ಡಾ.ರಾಘವೇಂದ್ರ ನಾಯಕ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...