ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯಿಂದ ಜನರು ರೋಸಿ ಹೋಗಿದ್ದಾರೆ:ಮಂಕಾಳ ವೈದ್ಯ

Source: S.O. News Service | By MV Bhatkal | Published on 19th October 2021, 12:03 PM | Coastal News | Don't Miss |

ಭಟ್ಕಳ: ಇಲ್ಲಿನ ಬ್ಲಾಕ್ ಕಾಂಗ್ರೆಸ್‌ನಿಂದ ಮುಟ್ಟಳ್ಳಿಯಲ್ಲಿ ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಮಂಕಾಳ ವೈದ್ಯ  ಉದ್ಘಾಟಿಸಿದರು. 
ನಂತರ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯಿಂದ ಜನರು ರೋಸಿ ಹೋಗಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಸುಳ್ಳೇ ಸಾಧನೆಯಾಗಿದೆ. ತೈಲ, ಅಗತ್ಯವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದರೂ ಸರ್ಕಾರ ಏನೂ ಮಾಡದೇ ಸುಮ್ಮನೇ ಕುಳಿತಿದೆ. ಬೆಲೆ ಏರಿಕೆ ನಿಯಂತ್ರಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜನರು ಸರಿಯಾದ ಉದ್ಯೋಗವಿಲ್ಲದೆ ತೊಂದರೆಯಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ತಾಪಂ, ಜಿಪಂ ಅವಧಿ ಮುಗಿದಿದ್ದರೂ ಸರ್ಕಾರಕ್ಕೆ ಚುನಾವಣೆ ನಡೆಸಲು ಮನಸ್ಸಿಲ್ಲ. ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆ ಮತ್ತು ಸಾಧನೆ ಕುರಿತು ಕಾರ್ಯಕರ್ತರು ಜನರಿಗೆ ತಿಳುವಳಿಕೆ ಮೂಡಿಸುವ ಕೆಲಸ ಮಾಡಬೇಕು ಎಂದರು.
ಉಪಸ್ಥಿತರಿದ್ದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಬ್ದುಲ್ ಮಜೀದ್ ಶೇಖ್‌ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಆದರೆ ಬಿಜೆಪಿ ಸರ್ಕಾರದಲ್ಲಿ ಬೆಲೆ ಏರಿಕೆ ಮತ್ತಿತರ ಕಾರಣಗಳಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಭಟ್ಕಳ ಕ್ಷೇತ್ರದಲ್ಲಿ ಮಂಕಾಳ ವೈದ್ಯರು ಶಾಸಕರಾಗಿದ್ದಾಗ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಿದ್ದರು. ಕ್ಷೇತ್ರದ ಮೂಲೆ ಮೂಲೆಗಳಲ್ಲಿ ಸೇತುವೆ, ರಸ್ತೆ ಕಾಮಗಾರಿ, ಮಿನಿವಿಧಾನಸೌಧ, ಹೈಟೆಕ್ ಬಸ್ ನಿಲ್ದಾಣ, ಡಿವೋ ಸೇರಿದಂತೆ ಅನೇಕ ಕಾಮಗಾರಿಗಳನ್ನು ಮಂಜೂರು ಮಾಡಿಸಿದ್ದಾರೆ. ಕಾಂಗ್ರೆಸ್ ಸರಕಾರವಿದ್ದರೆ ಮಾತ್ರ ಜನಪರ ಯೋಜನೆ ಮತ್ತು ಅಭಿವೃದ್ಧಿ ಸಾಧ್ಯ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ ಮಾತನಾಡಿ, ಮಹಾತ್ಮಾ ಗಾಂಧಿ ಸ್ವರಾಜ್ಯ ಕಾರ್ಯಕ್ರಮ ಪ್ರತಿ ಗ್ರಾಪಂ ಮಟ್ಟದಲ್ಲಿ ನಡೆಸಲಾಗುತ್ತಿದ್ದು, ಇದರಿಂದ ಪಕ್ಷದ ಸಂಘಟನೆಗೆ ಮತ್ತು ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಬಗ್ಗೆ ಕಾರ್ಯಕರ್ತರು ಮತ್ತು ಜನರಿಗೆ ಮನವರಿಕೆ ಮಾಡಿಕೊಡಲು ಅನುಕೂಲವಾಗಿದೆ ಎಂದರು. ವೇದಿಕೆಯಲ್ಲಿ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ನಯನಾ ನಾಯ್ಕ, ಮುಖಂಡರಾದ ಗಣಪತಿ ನಾಯ್ಕ ವೆಂಕಟೇಶ ದೇವಡಿಗ, ಮೀನಾಕ್ಷಿ ಜಟ್ಟಪ್ಪ ನಾಯ್ಕ, ಜಟ್ಟಪ್ಪ ನಾಯ್ಕ ಇದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...