ಬಾಲಕಾರ್ಮಿಕ ಪದ್ಧತಿ ನಿಷೇದಕ್ಕೆ ಜನರ ಸಹಕಾರ ಅಗತ್ಯ : ನ್ಯಾ. ಟಿ ಗೋವಿಂದಯ್ಯ

Source: so news | By MV Bhatkal | Published on 12th June 2019, 9:13 PM | Coastal News | Don't Miss |

ಕಾರವಾರ: ಸರ್ಕಾರ ಬಾಲಕಾರ್ಮಿಕ ಪದ್ಧತಿ ತೋಡೆದು ಹಾಕಲು ಅನೇಕ ಸವಲತ್ತುಗಳನ್ನು ನೀಡುತ್ತಿದ್ದರು ಸಹ ಬಾಲಕಾರ್ಮಿಕ ಪದ್ಧತಿ ಜಿವಂತವಾಗಿರುತ್ತದೆ. ಬಾಲಕಾರ್ಮಿಕ ಪದ್ಧತಿ ತೋಡೆದು ಹಾಕಲು ವಿವಿಧ ಇಲಾಖೆಗಳ ಜೋತೆಗೆ ಸಾರ್ವಜನಿಕರ ಸಹಕಾರ ಕೂಡ ಅತಿ ಅವಶ್ಯವಾಗಿರುತ್ತದೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಹೇಳಿದರು. 
ಜಿಲ್ಲಾಡಳಿತ, ಕಾರ್ಮಿಕ  ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ,  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಕ್ಕಳ ಸಹಾಯವಾಣಿ ಇವರುಗಳ ಸಂಯುಕ್ತಾಶ್ರಯದಲ್ಲಿ ಬುಧವಾರ  ನಗರದ ಸೆಂಟ್ ಕಾನ್ವೆಂಟ್ ಹೈಸ್ಕೂಲ್‍ನಲ್ಲಿ ಆಯೋಜಿಸಲಾದ  ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 
ಮಾನವ ಸಾಗಾಣಿಕೆಯಂತೆ  ಮಕ್ಕಳ ಸಾಗಾಣಿಕೆಯಾಗಿ ಮುಗ್ದ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿದು ಶೋಷಣೆಗೊಳಗಾಗುತ್ತಾರೆ. ಸಮಾಜದಲ್ಲಿ ಶೇ.30 ರಷ್ಟು ಮಕ್ಕಳು ತಮ್ಮ ಬಾಲ್ಯಾವಸ್ಥೆಯಿಂದ ವಂಚಿತರಾಗುತ್ತಾರೆ.  ಶಿಕ್ಷಿತರಾದವರು ಬಾಲ ಕಾರ್ಮಿಕ ಪದ್ಧತಿಯನ್ನು ವಿರೋಧಿಸಬೇಕು. ಬಾಲ ಕಾರ್ಮಿಕರನ್ನು ಕಂಡಾಗ ಸಂಬಂಧಪಟ್ವವರ ಗಮನಕ್ಕೆ ತರಬೇಕು. ಆರೋಗ್ಯಕರ ಸಮಾಜ ಮಾಡಲು ಶ್ರಮಿಸಬೇಕು. ಪ್ರತಿಯೊಬ್ಬ ವ್ಯಕ್ತಿಯು ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ತನ್ನ ಪ್ರಯತ್ನ ಪಡಬೇಕು ಎಂದರು. 
ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಜಗತ್ತಿನ ಅತ್ಯಂತ ಸುಂದರವಾದ ಸೃಷ್ಠಿಯೆ ಮಕ್ಕಳು, ಮಕ್ಕಳಿಗೆ ದುಡಿಮೆ ಬೇಡ, ಶಿಕ್ಷಣ ಬೇಕು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೊಳಿಸುವ ಸಲುವಾಗಿ ಸರಕಾರ ಸಹಕಾರ ನೀಡುತ್ತಿದೆ. ಕಲ್ಯಾಣ ರಾಷ್ಟ್ರವಾಗಬೇಕೆಂದು ಸಂವಿಧಾನ ಹೇಳುತ್ತದೆ. ಎಲ್ಲಾ ಮಕ್ಕಳು ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕಂದರು. 
ಕಾರ್ಯಕ್ರಮದಲ್ಲಿ  ಜಿಲ್ಲಾ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ ಎಸ್ ಜೋಗೂರ ಅವರು  ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದ ಹಿನ್ನಲೆ ಹಾಗೂ ಆಚರಣೆ ಕುರಿತು ವಿಸ್ತøತವಾಗಿ ವಿವರಿಸಿ,  ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಪ್ರಮಾಣ ವಚನ ಭೋದಿಸಿದರು. ನ್ಯಾಯವಾಧಿ ವರದಾ ನಾಯ್ಕ ಅವರು ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇದ ಹಾಗೂ ನಿಯಂತ್ರ) ತಿದ್ದುಪಡಿ ಕಾಯ್ದೆ 2016 ರ ಕುರಿತು ಉಪನ್ಯಾಸ ನೀಡಿದರು. ಸೆಂಟ್ ಕಾನ್ವೆಂಟ್ ಹೈಸ್ಕೂಲ್ ವಿದ್ಯಾರ್ಥಿಗಳಿಂದ ಬಾಲ ಕಾರ್ಮಿಕ ಕುರಿತು  ಕಿರು ನಾಟಕ ನಡೆಯಿತು. 
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಎನ್ ಅಶೋಕ ಕುಮಾರ, ಸರ್ವಶಿಕ್ಷಣ ಅಭಿಯಾನದ ಜಿಲ್ಲಾ ಸಂಯೋಜಕ ಶ್ರೀಕಾಂತ ಹೆಗಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...