ಪುರಸಭೆ ಅಧಿಕಾರಿಗಳ ಮತ್ತು ಚುನಾಯಿತ ಪ್ರತಿನಿಧಿಗಳ ಬೇಜವಾಬ್ದಾರಿತನಕ್ಕೆ ಜನರ ಆಕ್ರೋಶ

Source: sonews | By Staff Correspondent | Published on 4th April 2020, 12:45 PM | State News |

ಶ್ರೀನಿವಾಸಪುರ : ಪಟ್ಟಣದ ಅರ್ ಕೆ ಪಿ ರಸ್ತೆ ಜಾಕೀರ್ ಹುಸೇನ್‌ ಮೋಹ್ಹಲದ ಚರಂಡಿಯಲ್ಲಿ ಕಸ-ಕಡ್ಡಿಯಿಂದ ತುಂಬಿ ಸ್ವಚ್ಛತೆ ಮರಚೀಕೆಯಾಗಿದ್ದರಿಂದ ನೀರು ಸರಾಗವಾಗಿ ಹರಿಯಲು ತೊಂದರೆಯಾಗುತ್ತಿದೆ.ಚರಂಡಿಯಲ್ಲಿ ಕಸ, ಕಡ್ಡಿ ತುಂಬಿಕೊಂಡಿದ್ದರಿಂದ ನೀರು ಸುಗಮವಾಗಿ ಗಬ್ಬು ನಾರುತ್ತಿದೆ. ಇದರಿಂದ ಸೊಳ್ಳೆಗಳ ಕಾಟ  ವಿಪರೀತವಾಗಿದೆ.

ಪುರಸಭೆ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳ ನಿಷ್ಕಾಳಜಿ ಹಾಗೂ ಬೇಜವಾಬ್ದಾರಿ ವರ್ತನೆಯಿಂದಾಗಿ ಬಡಾವಣೆಯಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗಿದೆ ಎಂದು ಜನರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಕಷ್ಟು ಸಲ ಪುರಸಭೆ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಬಡಾವಣೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟವರು ಎಚ್ಚತ್ತು ಬಡಾವಣೆಯಲ್ಲಿ ಸ್ವಚ್ಛತೆ ಕಾಪಾಡಲು ಮುಂದಾಗಬೇಕು ಹಾಗೂ ಕೋವಿಡ್-19 ಕರೋನ ಬರದಂತೆ ನಿಯಂತ್ರಿಸಲು  ಸೋಡಿಯಂ ಹೈಪೋಕ್ಲೋರೈಡ್ ದ್ರಾವಣವನ್ನು  ಸಿಂಪಡಿಸಬೇಕು. ಇನ್ನೂ ವಿಳಂಬ ಮಡದೆ ಅಧಿಕಾರಿಗಳು ಕ್ರಮಕೈಗೊಳ್ಳಲು ಅಗ್ರಹಿಸಿದರೆ.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...