ರೈತರಿಗೆ ಅನುಕೂಲವಾಗುವಂತೆ ಶಾಶ್ವತ ಪರಿಹಾರ ಒದಗಿಸಲಾಗುವುದು – ಮುನಿರತ್ನ

Source: SO News | By Laxmi Tanaya | Published on 26th August 2021, 9:37 PM | State News | Don't Miss |

ಕೋಲಾರ : ರೈತರು ಬೆಳೆದ ಬೆಳೆಗಳಿಗೆ  ಉತ್ತಮ ಬೆಲೆ ಹಾಗೂ ಸಾಗಾಣಿಕೆಗೆ ಕಡಿಮೆ ವೆಚ್ಚದಲ್ಲಿ ಸಾರಿಗೆ ವ್ಯವಸ್ಥೆ ಮಾಡುವ ಮೂಲಕ ರೈತರಿಗೆ ಅನುಕೂಲವಾಗುವಂತೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ತಿಳಿಸಿದರು.

ಗುರುವಾರ ಶ್ರೀನಿವಾಸಪುರ ನಗರದ ಪುರಸಭಾ ಕಾರ್ಯಾಲಯ ಉದ್ಘಾಟನೆ ನೆರೆವೇರಿಸಿ ಅವರು ಮಾತನಾಡಿ, ಕೋಲಾರ ಬೆಂಗಳೂರಿಗೆ ಸಮೀಪದ ಜಿಲ್ಲೆಯಾಗಿರುವುದರಿಂದ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಪಡಿಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಜಿಲ್ಲೆಗೆ ಹೆಚ್ಚಿನ ಕೊಡುಗೆಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅತಿ ಹೆಚ್ಚು ವಿದ್ಯಾವಂತರು ಇದ್ದಾರೆ. ವಿದ್ಯಾಭ್ಯಾಸಕ್ಕೆ ಜಿಲ್ಲೆಯಲ್ಲಿ ಹೆಚ್ಚಿನ ಮಹತ್ವವಿದೆ. ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಇಬ್ಬರು ವಿದ್ಯಾರ್ಥಿನಿಯರಾದ ಪೂರ್ವಿ.ಕೆ ಬೈರೇಶ್ವರ ವಿದ್ಯಾನಿಕೇತನ ಶಾಲೆ ಮತ್ತು ವರ್ಷಿಣಿ. ಸೆಂಟ್ ತೇರಿಸಾ ಶಾಲೆ ರಾಬರ್ಟ್‍ಸನ್ ಪೇಟೆ ಅವರಿಗೆ ಸಚಿವರು ಲ್ಯಾಬ್ ಟ್ಯಾಪ್‍ಗಳನ್ನು ನೀಡಿದರು.

ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆಯನ್ನು ಎದುರಿಸಲು ಆಸ್ಪತ್ರೆಗಳಿಗೆ ವೈದ್ಯಕೀಯ ಸಲಕರಣೆಗಳು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಮೂಲಕ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಮ್ಲಜನಕದ ಕೊರತೆಯನ್ನು ನೀಗಿಸಲು ನಗರ ಪ್ರದೇಶದಲ್ಲಿ  ಹೆಚ್ಚಿನ ಮರಗಳನ್ನು ಬೆಳಸಬೇಕು. ಕನಿಷ್ಠ ಮನೆಗೆ 2 ಮರ ಬೆಳಸಬೇಕು. ರಸ್ತೆ, ಚರಂಡಿಗಳನ್ನು ನಿರ್ಮಾಣವಾಗಬೇಕು  ಎಂದು ಅವರು ಹೇಳಿದರು.  

ಶ್ರೀನಿವಾಸಪುರ ತಾಲ್ಲೂಕು ಮಾವಿನ ಹಣ್ಣಿಗೆ ವಿಶ್ವ ಪ್ರಸಿದ್ದಿಯಾಗಿದೆ. ರೈತರಿಗೆ ಅನುಕೂಲವಾಗಲಿ ಎಂದು ಸರ್ಕಾರ 10 ಸಾವಿರ ಎಫ್.ಇ.ಓ ಸ್ಥಾಪಿಸುವ ಉದ್ದೇಶ ಹೊಂದಿದೆ. ರೈತರು ಬೆಳೆದ ಟೊಮೊಟೊ ಮತ್ತು ಮಾವಿನ ಹಣ್ಣುಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲಾಗುವುದು ಎಂದು ತಿಳಿಸಿದರು. 

ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಆರ್.ರಮೇಶ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮುಂದಾಲೋಚನೆಯಿಂದ ನಗರದಲ್ಲಿ ಆಸ್ಪತ್ರೆ. ಶಾಲೆ, ಕಾಲೇಜು, ಬಸ್ ನಿಲ್ದಾಣ, ಮಾರುಕಟ್ಟೆ, ಒಳಚರಂಡಿ ವ್ಯವಸ್ಥೆ, ಕಟ್ಟಡಗಳು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಕ್ರೀಡಾಂಗಣದಲ್ಲಿ ಈಜುಕೊಳ, ಅಥ್ಲೆಟಿಕ್ ಹಾಗೂ ವಿವಿಧ ಕ್ರೀಡೆಗೆ ಅನುಕೂಲವಾಗುವಂತೆ ನಿರ್ಮಿಸಲಾಗುತ್ತಿದೆ. ಮಾಂಸದ ಮಾರುಕಟ್ಟೆ ವಿದೇಶದ ಮಾದರಿಯಲ್ಲಿ ಏರ್ ಕಂಡೀಷನ್ ಮಾರುಕಟ್ಟೆ ನಿರ್ಮಿಸಲಾಗುತ್ತದೆ. ದೇವಸ್ಥಾನ, ಸ್ಮಶಾನ, ಪ್ರಾರ್ಥನಾ ಮಂದಿರಗಳು ಹಾಗೂ ಬಡವರಿಗೆ ಮನೆಗಳನ್ನು ನಿರ್ಮಿಸಲಾಗಿದೆ. ಇಂದಿರಾ ನಗರದ ಲೇಔಟ್‍ನಲ್ಲಿ ಒಂದು ಸಾವಿರ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ನಗರ ಪ್ರದೇಶದಲ್ಲಿ ಉನ್ನತ ಮಟ್ಟದ ರಸ್ತೆಗಳನ್ನು ನಿರ್ಮಿಸಲು ಅನುದಾನ ನೀಡುವಂತೆ ಸಚಿವರಲ್ಲಿ ಶಾಸಕರು ಮನವಿ ಮಾಡಿದರು. ಪೌರಕಾರ್ಮಿಕರಿಗೆ ಹಾಗೂ ನಿವೃತ್ತಿ ಹೊಂದಿದ ಪೌರಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೋಲಾರ ನಗರಸಭೆ ಅಧ್ಯಕ್ಷರಾದ ಶ್ವೇತಾ ಶಬರೀಶ್, ಸ್ಥಾಯಿ ಸಮಿತಿ ಸದಸ್ಯರಾದ ಮಂಜುನಾಥ್, ಶ್ರೀನಿವಾಸಪುರ ಪುರಸಭೆ ಅಧ್ಯಕ್ಷರಾದ ಲಲಿತ.ಆರ್.ಶ್ರೀನಿವಾಸ್, ಉಪಾಧ್ಯಕ್ಷರಾದ ಅಯಿಷ ನಾಯಜ್, ಸದಸ್ಯರಾದ ಬಿ.ವೆಂಕಟರೆಡ್ಡಿ, ಮುನಿರಾಜು, ಭಾಸ್ಕರ್, ಜಿಲ್ಲಾಧಿಕಾರಿಗಳಾದ ಡಾ|| ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕಾ ಕಿಶೋರ್ ಬಾಬು, ಕೆ.ಜಿ.ಎಫ್ ನಗರಸಭೆ ಆಯುಕ್ತರಾದ ನವೀನ್‍ಚಂದ್ರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ನಾಗೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...