ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ವ್ಯಕ್ತಿತ್ವ ವಿಕಸನ ಹಾಗೂ ಶೈಕ್ಷಣಿಕ ಕಾರ್ಯಾಗಾರ

Source: SOnews | By Staff Correspondent | Published on 6th February 2024, 5:49 PM | Coastal News |

ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸ ಇವು ಗೆಲುವಿನ ಸುಗಮ ಹಾದಿ

ಭಟ್ಕಳ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ , ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ  ಭಟ್ಕಳ ಶಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ವ್ಯಕ್ತಿತ್ವ ವಿಕಸನ ಮತ್ತು ಶೈಕ್ಷಣಿಕ ಕಾರ್ಯಾಗಾರ ಇಲ್ಲಿನ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಸೋಮವಾರ ಜರುಗಿತು.

ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರಾಧಕೃಷ್ಣ ಭಟ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಶಿಕ್ಷಕರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರತರುವ ಕಾರ್ಯವನ್ನು ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದ ಸಂಪನ್ಮೂಲ ವ್ಯಕ್ತಿ ನ್ಯೂ ಇಂಗ್ಲಿಷ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿರೇಂದ್ರ ಶಾನುಭಾಗ, ಶಿಕ್ಷಕರು ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳಬೇಕು, ಬೇರೆ ಬೇರೆ ಸ್ಪರ್ಧಾತ್ಮ ಪರೀಕ್ಷೆಗಳನ್ನು ಎದುರಿಸುವುದರ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು. ಆತ್ಮವಿಶ್ವಾಸ ಇದ್ದರೆ ಎಲ್ಲವನ್ನೂ ಸಾಧಿಸಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ. ಮೊಗೇರ ಮಾತನಾಡಿ, ನಮ್ಮಲ್ಲಿ ಹಲವಾರು ಪ್ರತಿಭಾವಂತ ಶಿಕ್ಷಕರಿದ್ದಾರೆ ಆದರೆ, ಉನ್ನತ ವ್ಯಾಸಂಗ ಮಾಡಲು ನಿರಾಸಕ್ತಿ ತೋರುತ್ತಿದ್ದಾರೆ. ಜೀವನದಲ್ಲಿ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಾಗ ಮಾತ್ರ ಯಶಸ್ವಿನ ಹಾದಿ ಸುಲಭವಾಗಬಹುದು. ಪರಿಶ್ರಮ ಮತ್ತು ಆತ್ಮ ವಿಶ್ವಾಸಗಳಿಂದ ಜಯ ಖಂಡಿತವಾಗಿ ಸಿಗುತ್ತದೆ ಎಂದರು.

ತರಬೇತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಭಟ್ಕಳ ಶಾಖೆಯ ಅಧ್ಯಕ್ಷ ಉಲ್ಲಾಸ ನಾಯ್ಕ, ಕುಮಟಾ ಡಯಟ್ ಸಂತೋಶ ಶ್ರೇಷ್ಟಿ, ಆನಂದ ಆಶ್ರಮ ಕಾನ್ವೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ವಿನುತಾ, ಸೈಂಟ್ ಥಾಮಸ್ ಪ್ರೌಢ ಶಾಲೆ ಶಿರಾಲಿಯ ಶಿಕ್ಷಕಿ ನೇಹಾ ಸಿಜೊ, ಕ್ಷೇತ್ರ ಸಮನ್ವಯಾಧಿಕಾರಿ ಪೂರ್ಣಿಮಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಎಂ.ಡಿ.ರಫೀಕ್ ಮುಂತಾದವರು ಉಪಸ್ಥಿತರಿದ್ದರು

Read These Next