ಭಟ್ಕಳ : ಪೆಟ್ರೋಲ್ ತುಟ್ಟಿ, ಏಳು ವರ್ಷಗಳಿಂದ ಜನವಿರೋಧಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರ.

Source: S O News | By Laxmi Tanaya | Published on 12th June 2021, 5:36 PM | Coastal News |

ಭಟ್ಕಳ : ದೇಶದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 7ವರ್ಷಗಳಿಂದ ಜನ ವಿರೋಧಿ ಆಡಳಿತ ನಡೆಸುತ್ತಿದ್ದು ಜನರ ಮೇಲೆ ಬೆಲೆ ಏರಿಕೆಯ ಬರೆಯನ್ನು ಹಾಕುತ್ತಿದೆ ಎಂದು ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ನಾಯ್ಕ ಆರೋಪಿಸಿದ್ದಾರೆ.

ಅವರು ಶನಿವಾರ ಇಲ್ಲಿನ ಶಮ್ಸುದ್ದೀನ್ ವೃತ್ತದ ಬಳಿ ಇರುವ ಪೆಟ್ರೋಲ್ ಬಂಕ್ ಎದುರು ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಮಾಜಿ ಶಾಸಕ ಮಾಂಕಾಳ್ ವೈದ್ಯ ಮಾತನಾಡಿ, ದೇಶವನ್ನು ಆಳುತ್ತಿರುವವರು ಜನರಪರ ಯೋಜನೆಗಳು ರೂಪಿಸಬೇಕು ಹೊರತು ಜನರಿಗೆ ಹೊರೆಯನ್ನು ಹೊರಿಸುವುದಲ್ಲ. ಆದ್ದರಿಂದ ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾನ್ಯ ಜನರು ಬದುಕು ರೀತಿಯಲ್ಲಿ ಏರುತ್ತಿರುವ ಬೆಲೆ ಏರಿಕೆಗೆ ಕಡಿವಾಣ ಹಾಕಿ ಅಗತ್ಯವಸ್ತುಗಳ ಬೆಲೆಗಳನ್ನು ಇಳಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸುತ್ತ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಕೂಡಲೇ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯನ್ನು ಇಳಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕರುಗಳಾದ ಮಾಂಕಾಳ್ ವೈದ್ಯ, ಜೆ ಡಿ ನಾಯ್ಕ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯಶ್ರೀ ಮೊಗೇರ್, ಜಿಲ್ಲಾ ಅಲ್ಪ ಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ ಮಜೀದ್ ಶೇಖ್, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ರಾಧಾ ವೈಧ್ಯ, ಸದಸ್ಯ ವಿಷ್ಣು ದೇವಾಡಿಗ, ಮೀನಾಕ್ಷಿ ನಾಯ್ಕ, ನಾರಾಯಣ ನಾಯ್ಕ ಮುಖಂಡ ರಾದ ಭಾಸ್ಕರ್ ನಾಯ್, ಎ ಪಿ ಎಂ ಸಿ ಅಧ್ಯಕ್ಷ ಗೋಪಾಲ ನಾಯ್ಕ, ಸತೀಶ್ ಆಚಾರಿ, ದೇವಿದಾಸ್ ಆಚಾರಿ, ಜಟ್ಟಪ್ಪ ನಾಯ್ಕ, ಗಣಪತಿ ನಾಯ್ಕ್ ತಲಾನ್, ವೆಂಕಟರಮನ್ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...