ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಯೋಜನೆ ರೂಪಿಸಿ- ರಘುಪತಿ ಭಟ್

Source: so news | By MV Bhatkal | Published on 15th June 2019, 9:35 PM | Coastal News | Don't Miss |

ಉಡುಪಿ: ಉಡುಪಿ ಕ್ಷೇತ್ರದಲ್ಲಿ ಸಾಕಷ್ಟು ನೀರಿನ ಮೂಲಗಳಿದ್ದು, ಈ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳುವ ಯೋಜನೆ ರೂಪಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ , ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಶನ್‍ನ ಸಮಿತಿ ಸಭೆಯಲ್ಲಿ ಮಾತನಾಡಿದರು. 
ಪ್ರಸ್ತುತ ಉಡುಪಿಗೆ ಬಜೆ ಡ್ಯಾಮ್ ನಲ್ಲಿನ ನೀರನ್ನು ಶುದ್ದೀಕರಿಸಿ ಪೂರೈಸಲಾಗುತ್ತಿದ್ದು, ಮುಂದೆ ಭರತ್ಕಲ್ ನಲ್ಲಿ ನೀರನ್ನು ಟ್ರೀಟೆಡ್ ಮಾಡಿ , ಉಡುಪಿ ಕ್ಷೇತ್ರಕ್ಕೆ ಪೂರೈಸುವ ಯೋಜನೆ ಇದ್ದು, ಇದರಿಂದ ಉಡುಪಿ ಕ್ಷೇತ್ರದ ಎಲ್ಲಾ ಪಂಚಾಯತ್‍ಗಳಿಗೆ ಪೂರೈಸಲು ಅಗತ್ಯವಿರುವ ನೀರನ್ನು 24 ಗಂಟೆಗಳೂ ಪೂರೈಕೆ ಮಾಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕರು ಹೇಳಿದರು. 
ಗ್ರಾಮೀಣ ಕುಡಿಯುವ ನೀರು ಪೂರೈಕೆಯ ಕ್ರಿಯಾ ಯೋಜನೆಯಡಿಯಲ್ಲಿ 2019-20 ನೇ ಸಾಲಿನ ಪ್ರತೀ ತಾಲೂಕಿಗೆ ಸೂಚಿಸಲಾಗಿರುವ ಮೊತ್ತಕ್ಕೆ ಅನುಗುಣವಾಗಿ ಯೋಜನೆಗಳ ಪ್ರsಸ್ತಾವನೆಯನ್ನು ತಯಾರಿಸಿ ಈ ತಿಂಗಳ 18 ರೊಳಗೆ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧೂ ಬಿ ರೂಪೇಶ್ ಅಧಿಕಾರಿಗಳಿಗೆ ಸೂಚಿಸಿದರು.
ನೈರ್ಮಲ್ಯ ಮಿಶನ್‍ನ ಯೋಜನೆಯಡಿಯಲ್ಲಿ ಶೌಚಾಲಯ ನಿಮಾಣಕ್ಕೆ 640 ಗುರಿ ನೀಡಿಲಾಗಿದ್ದು ಈ ಪೈಕಿ 403 ಪೂರ್ಣಗೊಂಡಿದ್ದು 169 ಕಾಮಗಾರಿ ಬಾಕಿ ಉಳಿದಿದೆ. ಘನ ದ್ರವ ತ್ಯಾಜ್ಯ ನಿರ್ವಹಣೆಗೆ ಪಂಚಾಯತ್‍ವಾರು ಒಟ್ಟು 40 ಗ್ರಾಮ ಪಂಚಾಯತ್‍ಗಳಿಗೆ ಅನುಮೋದನೆ ನೀಡಲಾಗಿದ್ದು ಈ ಪೈಕಿ 14 ಘಟಕಗಳು ಪೂರ್ಣಗೊಂಡಿದೆ 17 ಘಟಕಗಳು ಪ್ರಗತಿಯ ಹಂತದಲ್ಲಿದೆ. 9 ಗ್ರಾಮ ಪಂಚಾಯತ್‍ನಲ್ಲಿ ಹಲವಾರು ಕಾರಣಗಳಿಂದ ಇನ್ನೂ ಕಾರ್ಯಾರಂಭ ವಾಗಬೇಕಿದೆ. ಬಾಕಿ ಇರುವ ಯೋಜನೆಗಳಿಗೆ ಸರಿಯಾದ ಪ್ರಸ್ತಾವಣೆ ಸಲ್ಲಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು. 
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ , ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...