ಕೋವಿಡ್‌ನಿಂದ ಅನಾಥರಾದ ಮಕ್ಕಳ ನೆರವಿಗೆ 'ಪಿಎಂ ಕೇರ್ಸ್

Source: Agencies | Published on 29th May 2021, 7:48 PM | National News |

ನವದೆಹಲಿ: ಕೋವಿಡ್‌ನಿಂದ ತಂದೆ-ತಾಯಿಯರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ 'ಪಿಎಂ ಕೇರ್ಸ್‌' ಅಡಿಯಲ್ಲಿ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

ಅನಾಥರಾದ ಮಕ್ಕಳಿಗೆ 18 ವರ್ಷ ತುಂಬುತ್ತಲೇ ಪ್ರತಿ ತಿಂಗಳು ಸ್ಟೈಫಂಡ್ ನೀಡಲಾಗುವುದು. 23 ವರ್ಷ ತುಂಬಿದ ನಂತರ ಪಿಎಂ ಕೇರ್ಸ್‌ನಿಂದ ₹10 ಲಕ್ಷ ನಗದು ನೀಡಲಾಗುವುದು ಎಂದು ಕೇಂದ್ರ ತಿಳಿಸಿದೆ.

ಉನ್ನತ ಶಿಕ್ಷಣ ಪಡೆಯುಲು ಮುಂದಾಗುವ ಮಕ್ಕಳಿಗೆ ಶಿಕ್ಷಣ ಸಾಲದ ವ್ಯವಸ್ಥೆ ಮಾಡಲಾಗುವುದು. ಆದರೆ, ಬಡ್ಡಿಯನ್ನು ಕೇಂದ್ರ ಸರ್ಕಾರ ಪಾವತಿ ಮಾಡಲಿದೆ.

ಕೋವಿಡ್‌ನಿಂದ ಅನಾಥರಾದ ಮಕ್ಕಳು 18 ವರ್ಷದವರಾಗುವವರೆಗೆ ಅವರಿಗೆ ₹5ಲಕ್ಷ ಮೊತ್ತದ ಆರೋಗ್ಯ ವಿಮೆ ಸೌಲಭ್ಯ ಒದಗಿಸಲಾಗುವುದು. ಅದರ ಪ್ರೀಮಿಯಮ್‌ ಮೊತ್ತವನ್ನು ಪಿಎಂ ಕೇರ್ಸ್‌ನಿಂದ ನೀಡಲಾಗುತ್ತದೆ ಎಂದು ಕೇಂದ್ರ ಹೇಳಿದೆ.

'ಸಾಂಕ್ರಾಮಿಕ ರೋಗ ಕೋವಿಡ್‌ ದೇಶದಲ್ಲಿ 577 ಮಕ್ಕಳ ಅನಾಥರನ್ನಾಗಿಸಿದೆ. ತಂದೆ ತಾಯಿರನ್ನು ಕಳೆದುಕೊಂಡ ಆ ಮಕ್ಕಳು ತಮ್ಮ ಹತ್ತಿರದ ಸಂಬಂಧಿಗಳ ಆರೈಕೆಯಲ್ಲಿದ್ದಾರೆ,' ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿವೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...