26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಚಾಲನೆ; ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿಸುವ ಸಂಕಲ್ಪ; ನರೇಂದ್ರ ಮೋದಿ

Source: Vb | By I.G. Bhatkali | Published on 13th January 2023, 11:25 AM | State News | National News |

ಹುಬ್ಬಳ್ಳಿ: ಡಿಜಿಟಲ್ ಇಂಡಿಯಾದ ಪ್ರಸಕ್ತ ಕಾಲಘಟ್ಟದಲ್ಲಿ ಕೌಶಲ್ಯಭರಿತ ಯುವಜನತೆಗೆ ಅವಕಾಶಗಳ ಬಾಗಿಲು ತೆರೆದಿದೆ. 'ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ' ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ದೇಶವನ್ನು ಕೊಂಡೊಯ್ಯಲು ಯುವ ಸಮುದಾಯ ಕೈಜೋಡಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಗುರುವಾರ 'ವಿಕಸಿತ ಯುವ-ವಿಕಸಿತ ಭಾರತ ಎಂಬ ಘೋಷವಾಕ್ಯದೊಂದಿಗೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೇಶ್ವಾಪುರದ ರೈಲ್ವೆ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ಕರ್ನಾಟಕದ ಜತೆ ಅವಿನಾಭಾವ ಸಂಬಂಧ ಹೊಂದಿದ್ದರು. ಬೆಂಗಳೂರು, ಹುಬ್ಬಳ್ಳಿ-ಧಾರವಾಡದಲ್ಲಿ ಸಂಚರಿಸಿದ್ದರು. ಮೈಸೂರು ಮಹಾರಾಜರು ವಿವೇಕಾನಂದ ಅವರಿಗೆ ಶಿಕಾಗೊ ಸಮ್ಮೇಳನಕ್ಕೆ ಹೋಗಲು ನೆರವು ನೀಡಿದ್ದರು ಎಂದು ನರೇಂದ್ರ ಮೋದಿ ಸ್ಮರಿಸಿದರು. ಯುವಶಕ್ತಿ ಸದೃಢವಾಗಿದ್ದರೆ ಸದೃಢ ದೇಶ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಸ್ವಾಮಿ ವಿವೇಕಾನಂದರ ನಂಬಿಕೆಯಾಗಿತ್ತು. ಚೆನ್ನಮ್ಮ ಎಂತಹ ಸಂಕಷ್ಟದ ಕಾಲದಲ್ಲೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಸಂಗೊಳ್ಳಿ ರಾಯಣ್ಣನ ಶೌರ್ಯವು ಬ್ರಿಟಿಷರ ಎದೆ ನಡುಗಿಸಿತ್ತು. ಇಂತಹ ಮಹನೀಯರ ದೇಶಭಕ್ತಿ ನಮಗೆ ಆದರ್ಶವಾಗಬೇಕಿದೆ. ವಿಶ್ವೇಶ್ವರಯ್ಯ ತಮ್ಮ ಪ್ರತಿಭೆಯ ಮೂಲಕ ಯುವ ಸಮುದಾಯವು ಹೇಗೆ ಎಲ್ಲೆಡೆ ಪಸರಿದೆ ಎಂಬುದಕ್ಕೆ ಉದಾಹರಣೆಯಾಗಿದ್ದಾರೆ ಎಂದು ಅವರು ಹೇಳಿದರು. ಜಾಗತಿಕ ಮಟ್ಟದಲ್ಲಿ ಗಣಿತದಿಂದ ವಿಜ್ಞಾನದ ಯಾವುದೇ ಸ್ಪರ್ಧೆ ನಡೆದರೂ ಭಾರತೀಯರ ಸಾಧನೆ ಅದ್ವಿತೀಯ. ಇದು ಭಾರತದ ಯುವಶಕ್ತಿಯ ಸಂಕೇತವಾಗಿದೆ. ಯುವಶಕ್ತಿ ದೇಶವನ್ನು ನಡೆಸುವ ಶಕ್ತಿಯಾಗಿದೆ. ಮುಂದಿನ 25 ವರ್ಷಗಳಲ್ಲಿ ಭಾರತಕ್ಕೆ ಯುವಶಕ್ತಿ ದಿಕ್ಕೂಚಿಯಾಗಲಿದೆ ಎಂದು ಪ್ರಧಾನಿ ಹೇಳಿದರು.

ಭಾರತವು ಜಗತ್ತಿನ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿದೆ. ಇದನ್ನು ಅಗ್ರ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ನಮ್ಮದಾಗಿದೆ. ಕೃಷಿ ಕ್ಷೇತ್ರದಲ್ಲಿ ಭಾರತವು ಜಗತ್ತಿನ ಮುಂಚೂಣಿಯಲ್ಲಿದ್ದು, ಈ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆಯಿಂದ ಯುವ ಜನತೆಗೆ ಇನ್ನಷ್ಟು ಅವಕಾಶಗಳು ಲಭಿಸಲಿವೆ ಎಂದು ಅವರು ಹೇಳಿದರು.

ದೇಶದ ಆರ್ಥಿಕತೆ ಸುಧಾರಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ಕಳೆದ ಒಂಭತ್ತು ವರ್ಷಗಳಲ್ಲಿ ಸಾಕಷ್ಟು ಕೆಲಸ ಮಾಡಲಾಗಿದೆ. ಇದೀಗ ರನ್ ವೇ ಸಿದ್ಧವಾಗಿದೆ. ಯುವ ಸಮಯದಾಯ ಇದನ್ನು ಬಳಸಿಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ಹಾರಲು ಮುಂದಾಗಬೇಕಿದೆ. ಸ್ತ್ರೀಶಕ್ತಿಯು ರಾಷ್ಟ್ರಶಕ್ತಿಯನ್ನು ಮುನ್ನಡೆಸುವಲ್ಲಿ ಸಫಲವಾಗಿವೆ ಎಂದು ನರೇಂದ್ರ ಮೋದಿ ಹೇಳಿದರು.

ಫೈಟರ್ ಜೆಟ್ ಹಾರಿಸುತ್ತಿರುವ ಮಹಿಳೆಯರು ವಿಜ್ಞಾನ, ತಂತ್ರಜ್ಞಾನ, ಕ್ರೀಡೆ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿದ್ದಾರೆ. ಯುವಜನತೆ ವರ್ತಮಾನದಲ್ಲಿದ್ದುಕೊಂಡು ಭವಿಷ್ಯದ ಕಡೆ ಸಕಾರಾತ್ಮಕವಾಗಿ ಯೋಚಿಸುವ ಮೂಲಕ ಹೊಸ ಹೊಸ ಆವಿಷ್ಠಾರಗಳತ್ತ ಚಿತ್ತವನ್ನು ಹರಿಸಬೇಕು. ಯುವ ಸಮುದಾಯವು ತಂತ್ರಜ್ಞಾನದ ಈ ಬದಲಾವಣೆಯಿಂದ ಪಾಠ ಕಲಿತು ಹೊಸ ಕೌಶಲಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ದೇಶದ ಬೇರೆ ಬೇರೆ ಭೌಗೋಳಿಕ ಪ್ರದೇಶಗಳ ಯುವಕರ ತಂಡಗಳು ಇಲ್ಲಿಗೆ ಬಂದಿವೆ. ಇಲ್ಲಿನ ಸರ್ಧೆಯಲ್ಲಿ ಯಾರೇ ಗೆದ್ದರೂ ಅಂತಿಮವಾಗಿ ಭಾರತವೇ ಗೆಲ್ಲುತ್ತದೆ. ಆದುದರಿಂದ, ಯುವಜನೋತ್ಸವದಲ್ಲಿ ಭಾಗವಹಿಸುವ ತಂಡಗಳು 'ವಿಕಸಿತ ಭಾರತ ಸಮರ್ಥ ಭಾರತ'ವನ್ನು ಗಮನದಲ್ಲಿಟ್ಟುಕೊಂಡು ದೇಶವನ್ನು ಮುನ್ನಡೆಸಬೇಕು ಎಂದು ಅವರು ಹೇಳಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...