ಕೋವಿಡ್‌ ವಾರಿಯರ್‌ ಕೌಶಲ ಅಭಿವೃದ್ಧಿ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ

Source: PTI | By MV Bhatkal | Published on 20th June 2021, 11:35 AM | National News |

ನವದೆಹಲಿ: ದೇಶದ ಒಂದು ಲಕ್ಷ ‘ಮುಂಚೂಣಿ ಕೊರೊನಾ ಯೋಧರ (ಫ್ರಂಟ್‌ಲೈನ್ ಕೋವಿಡ್‌ ವಾರಿಯರ್‌) ಕೌಶಲ ವೃದ್ಧಿಸುವ ಉದ್ದೇಶದಿಂದ ವಿನ್ಯಾಸಗೊಳಿಸಿರುವ ‘ತ್ವರಿತಗತಿಯ ತರಬೇತಿ ಕಾರ್ಯಕ್ರಮ‘ (ಕಸ್ಟಮೈಸ್ಡ್‌ ಕ್ರ್ಯಾಶ್ ಕೋರ್ಸ್‌ ಪ್ರೋಗ್ರಾಮ್) ಅನ್ನು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ  ಅವರು, ‘ಕೊರೊನಾ ಎರಡನೇ ಅಲೆ ಸಾಕಷ್ಟು ಸವಾಲುಗಳನ್ನು ಸೃಷ್ಟಿಸಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದಲ್ಲಿರುವ ಸುಮಾರು 1 ಲಕ್ಷ ಮುಂಚೂಣಿ ಕೊರೊನಾ ಯೋಧರಿಗೆ,  ಈ ರೀತಿ ಕೌಶಲ ಅಭಿವೃದ್ಧಿ ತರಬೇತಿ ನೀಡುವ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ‘ ಎಂದು ಹೇಳಿದರು.
ಆರೋಗ್ಯ ಕ್ಷೇತ್ರದಲ್ಲಿ ಮಾನವಶಕ್ತಿಯ ಪ್ರಸ್ತುತ ಮತ್ತು ಭವಿಷ್ಯದ ಅಗತ್ಯಗಳನ್ನು ಪೂರೈಸಲು ನುರಿತ ವೈದ್ಯಕೀಯೇತರ ಆರೋಗ್ಯ ಕಾರ್ಯಕರ್ತರನ್ನು ಅಣಿಗೊಳಿಸುವ ಹಿನ್ನೆಲೆಯಲ್ಲಿ ಈ ವಿಶೇಷ ಕೋರ್ಸ್‌ (ಕಾರ್ಯಕ್ರಮ) ರೂಪಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.
ಕೋವಿಡ್‌–19 ಮುಂಚೂಣಿ ಕಾರ್ಯಕರ್ತರಿಗೆ ತ್ವರಿತಗತಿಯಲ್ಲಿ ತರಬೇತಿ ನೀಡುವುದಕ್ಕಾಗಿ ವಿಶೇಷ ಈ ಕೋರ್ಸ್ ಆರಂಭಿಸಲಾಗುತ್ತಿದೆ. ಈ ಕೋರ್ಸ್‌ನಲ್ಲಿ ಆರು ವಿವಿಧ ಉದ್ಯೋಗಗಳಿಗೆ ನೆರವಾಗುವ ರೀತಿಯಲ್ಲಿ ತರಬೇತಿ ನೀಡಲಾಗುತ್ತದೆ. ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಉದ್ಯೋಗಗಳು ಈ ರೀತಿ ಇವೆ; ಮನೆಯಲ್ಲಿ ಆರೈಕೆ, ಪ್ರಾಥಮಿಕ ಹಂತದ ಆರೈಕೆ, ಆರೋಗ್ಯ ಸುಧಾರಿಸಿದ ನಂತರ ಆರೈಕೆ, ಪರೀಕ್ಷೆಗಾಗಿ ಮಾದರಿ ಸಂಗ್ರಹಿಸುವುದು ಮತ್ತು ವೈದ್ಯಕೀಯ ಉಪಕರಣಗಳ ಬಳಕೆ ಮಾಡುವುದು. ಈ ಎಲ್ಲ ಉದ್ಯೋಗಗಳನ್ನು ಮಾಡುವವರಿಗಾಗಿ ಈ ಕೋರ್ಸ್‌ನಲ್ಲಿ ತರಬೇತಿ ನೀಡಲಾಗುತ್ತದೆ.
‘ಪ್ರಧಾನ ಮಂತ್ರಿ ಕೌಶಲ ವಿಕಾಸ್ ಯೋಜನೆ 3.0ರ ಕೇಂದ್ರ ಘಟಕದ ಅಡಿಯಲ್ಲಿ ಈ ಕೋರ್ಸ್ ಅನ್ನು ವಿಶೇಷ ಕಾರ್ಯಕ್ರಮವಾಗಿ ವಿನ್ಯಾಸಗೊಳಿಸಲಾಗಿದೆ. ಇದಕ್ಕಾಗಿ ₹270 ಕೋಟಿ ವಿನಿಯೋಗಿಸಲಾಗಿದೆ‘ ಎಂದು ಪ್ರಧಾನ ಮಂತ್ರಿ ಕಚೇರಿ  ತಿಳಿಸಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...