ಪ್ಯಾರಾಲಿಂಪಿಕ್ಸ್ ಅಥ್ಲೀಟ್‌ ಗಳಿಗೆ ಆತಿಥ್ಯ: ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

Source: UNI | By MV Bhatkal | Published on 12th September 2021, 7:41 PM | National News | Don't Miss |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಗುರುವಾರ ತಮ್ಮ ಅಧಿಕೃತ ನಿವಾಸದಲ್ಲಿ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಗೆದ್ದು ತಂದ ಕ್ರೀಡಾಪಟುಗಳನ್ನು ಭೇಟಿ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಮೋದಿ ಭಾನುವಾರ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.  

ಪ್ರಧಾನಿ ಮೋದಿ ಪ್ಯಾರಾಲಿಂಪಿಕ್ ಕ್ರೀಡಾಪಟುಗಳು ಹಾಗೂ ಅವರ ತರಬೇತುದಾರರಿಗೆ ತಮ್ಮ ನಿವಾಸದಲ್ಲಿ ಆತಿಥ್ಯ ಆಯೋಜಿಸಿದ್ದರು. ಈ ಸಂದರ್ಭದಲ್ಲಿ, ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ವಿಜೇತ ಭಾರತೀಯ ಕ್ರೀಡಾಪಟುಗಳನ್ನು ಮೋದಿ ಅಭಿನಂದಿಸಿದ್ದರು. 

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಸಾಧನೆ, ದೇಶಾದ್ಯಂತ ಕ್ರೀಡಾ ಸಮುದಾಯದ ಧೈರ್ಯವನ್ನು ಹೆಚ್ಚಿಸುತ್ತಿದೆ. ನಿಮ್ಮ  ಯಶಸ್ಸು ಭಾರತದಿಂದ ಇನ್ನೂ ಹೆಚ್ಚಿನ ಆಟಗಾರರನ್ನು ಅಭಿವೃದ್ಧಿಪಡಿಸುತ್ತದೆ. ಅಂತರಾಷ್ಟ್ರೀಯ ವೇದಿಕೆಯಲ್ಲಿ ಮನ್ನಣೆ ಪಡೆಯಲು ಪ್ರೋತ್ಸಾಹಿಸುತ್ತದೆ ಎಂದು ಮೋದಿ ಹೇಳಿದ್ದರು.
ನೀವು ಪಟ್ಟ ಕಷ್ಟದಿಂದಾಗಿ  ಇಂದು ಖ್ಯಾತಿ ಗಳಿಸಿದ್ದೀರಿ. ನೀವೆಲ್ಲರೂ ಜನರನ್ನು ಪ್ರೇರೇಪಿಸಬಹುದು. ದೊಡ್ಡ ಬದಲಾವಣೆ ತರಲು ಸಹಾಯ ಮಾಡಬಹುದು ... ನಾನು ನಿಮ್ಮೆಲ್ಲರೊಂದಿಗೆ ಸದಾ ಇರುತ್ತೇನೆ ಎಂದು ಮೋದಿ ಕ್ರೀಡಾಪಟುಗಳಿಗೆ ಹೇಳಿದ್ದರು.

ಪ್ರಧಾನಿ ತಮ್ಮೊಂದಿಗೆ ಕುಳಿತು ಮಾತನಾಡಿದ್ದು, ತಮ್ಮನ್ನು ಆಹ್ವಾನಿಸಿ ಅಭಿನಂದಿಸಿರುವುದು ಅತ್ಯಂತ ಗೌರವ ಎಂದು ಭಾವಿಸುವುದಾಗಿ ಕ್ರೀಡಾಪಟುಗಳು ಹೇಳಿದರು. ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆದ್ದ ಕ್ರೀಡಾಪಟುಗಳು ಅವರ ಆಟೋಗ್ರಾಫ್‌ನೊಂದಿಗಿನ ಉಪಕರಣಗಳನ್ನು ಕೊಡಿಗೆಯಾಗಿ ನೀಡಿದರು. ಈ  ಕೊಡಿಗೆಗಳನ್ನು ನಂತರ ಹರಾಜು ಹಾಕಲಾಗುವುದು ಎಂಬ ಮೋದಿ ಅವರ ಹೇಳಿಕೆಯನ್ನು ಕ್ರೀಡಾಪಟುಗಳು ಸ್ವಾಗತಿಸಿದರು.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...