ಪಿಎಂಜಿಎಸ್ ವೈ ರಸ್ತೆಗಳುದ್ದಕ್ಕೂ ಗುತ್ತಿಗೆದಾರರ ಹೆಸರು ವಿಳಾಸದ ಫಲಕ ಹಾಕಿ ನಿರ್ವಹಣೆ ಕುರಿತು ಜನರಿಗೆ ಮಾಹಿತಿ ನೀಡಿ-ಕೇಂದ್ರ ಸಚಿವ ಪ್ರಲ್ಹಾದ ಜೋಷಿ

Source: SO News | By Laxmi Tanaya | Published on 23rd January 2021, 10:28 PM | State News | Don't Miss |

ಧಾರವಾಡ : ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಿಸಿದ ಗ್ರಾಮೀಣ ಭಾಗದ ರಸ್ತೆಗಳುದ್ದಕ್ಕೂ ಜನದಟ್ಟಣೆ ಇರುವ 3-4 ಸ್ಥಳಗಳಲ್ಲಿ ರಸ್ತೆ ನಿರ್ಮಿಸಿದ ಗುತ್ತಿಗೆದಾರರ ಹೆಸರು,ವಿಳಾಸ ಹಾಗೂ ನಿರ್ವಹಿಣೆ ಅವಧಿಯ ಮಾಹಿತಿಯನ್ನು ಸ್ಥಳೀಯರಿಗೆ ನೀಡಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಷಿ ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಸಿದ್ಧಪಡಿಸಿರುವ ಕ್ಯಾಲೆಂಡರು ಹಾಗೂ ದಿನಚರಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕಾಮಗಾರಿ ಗುತ್ತಿಗೆ ಪಡೆಯಲು ನಿಗದಿಗಿಂತಲೂ ಕಡಿಮೆ ಅಂದಾಜು ವೆಚ್ಚದ ಪಟ್ಟಿ ಸಲ್ಲಿಸಿ ಟೆಂಡರ್ ನಲ್ಲಿ ಗುತ್ತಿಗೆ ಪಡೆದು , ನಂತರ ಕಾರ್ಯಾದೇಶವನ್ನೂ ಪಡೆಯಲೂ ಬಾರದ ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತೆಗೆ ಸೂಚನಾ ಫಲಕಗಳನ್ನು , ಮೂರು ಲೇಯರುಗಳ ವಿಭಜಕ (ಡಿವೈಡರ್ ) ಗಳನ್ನು ಅಳವಡಿಸಬೇಕು . ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಹಾಗೂ ಇಂದಿನ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯ ನಡವಳಿಕೆಗಳ ಉಲ್ಲೇಖದೊಂದಿಗೆ ಗುತ್ತಿಗೆ ಸಂಸ್ಥೆಗೆ ಕೂಡಲೇ ಸೂಚನೆ ನೀಡಬೇಕು ಎಂದರು.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...