ಮುಂಬೈ: ಭೀಮಾ ಕೋರೆಗಾಂವ್‌ ಪ್ರಕರಣ, ವರವರ ರಾವ್‌ಗೆ ಜಾಮೀನು

Source: VB | By S O News | Published on 23rd February 2021, 8:17 PM | National News |

ಮುಂಬೈ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಎರಡು ವರ್ಷಗಳ ಹಿಂದೆ ಜೈಲು ಶಿಕ್ಷೆಗೆ ಒಳಗಾಗಿದ್ದ 81 ವರ್ಷದ ಸಾಮಾಜಿಕ ಹೋರಾಟಗಾರ ವರವರ ರಾವ್ ಅವರಿಗೆ ವೈದ್ಯಕೀಯ ನೆಲೆಯಲ್ಲಿ ಬಾಂಬೆ ಉಚ್ಚ ನ್ಯಾಯಾಲಯ 6 ತಿಂಗಳ ಜಾಮೀನು ನೀಡಿದೆ.

ವರವರರಾವ್ ಅವರು ಪ್ರಸ್ತುತ ಮುಂಬೈಯ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಚ್ಚ ನ್ಯಾಯಾಲಯದ ಮಧ್ಯಪ್ರವೇಶದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತು. ಮುಂಬೈಯಲ್ಲಿ ಉಳಿದುಕೊಳ್ಳಲು ಹಾಗೂ ಅಗತ್ಯವಿರುವಾಗ ತನಿಖೆಗೆ.

ಹಾಜರಾಗುವಂತೆ ನ್ಯಾಯಾಲಯ ವರವರ ರಾವ್ ಅವರಿಗೆ ಸೂಚಿಸಿದೆ. ವರವರ ರಾವ್ ಅವರು ತಮ್ಮಪಾಸ್‌ಪೋರ್ಟ್ ಅನ್ನು ಎನ್‌ಐಎ ನ್ಯಾಯಾಲ ಯಕ್ಕೆ ಸಲ್ಲಿಸಬೇಕು. ಪ್ರಕರಣದ ಸಹ ಆರೋಪಿಗಳೊಂದಿಗೆ ಯಾವುದೇ ರೀತಿಯ ಸಂಪರ್ಕ ಸಾಧಿಸಲು ಪ್ರಯತ್ನಿಸಬಾರದು

ಅವರು 50 ಸಾವಿರ ರೂಪಾಯಿ ವೈಯುಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಶೊೈರಿಟಿಯನ್ನು ಸಲ್ಲಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಪ್ರಕರಣದ ವಿಚಾರಣೆಗೆ ಕಾಯುತ್ತಿರುವ ಅವರು 2018 ಆಗಸ್ಟ್ 28ರಿಂದ ಜೈಲಿನಲ್ಲಿದ್ದಾರೆ. ಒಂದು ವೇಳೆ ವರವರ ರಾವ್ ಅವರಿಗೆ ವೈದ್ಯಕೀಯ ನೆಲೆಯಲ್ಲಿ ಜಾಮೀನು ನೀಡದೇ ಇದ್ದರೆ, ಮಾನವ ಹಕ್ಕುಗಳ ನೀತಿಗಳು ಹಾಗೂ ಬದುಕು, ಆರೋಗ್ಯದ ನಾಗರಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸುವ ಕರ್ತವ್ಯದಿಂದ ದೂರ ಸರಿದಂತೆ ಆಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...