ಕವಿ ಚೆನ್ನವೀರ ಕಣವಿ ಅವರಿಗೆ ಕೇಂದ್ರಿಯ ವಿವಿ ಗೌರವ ಡಾಕ್ಟರೇಟ್ ಪ್ರದಾನ.

Source: SO News | By Laxmi Tanaya | Published on 29th September 2020, 7:08 AM | State News | Don't Miss |

ಕಣವಿಯವರ ಏಳು ದಶಕಗಳ ಸಾಹಿತ್ಯ ಕೃಷಿ ಜಾಗತಿಕ ಮನ್ನಣೆಗೆ ಅರ್ಹ- ಪ್ರೊ.ಎಚ್.ಎಮ್. ಮಹೇಶ್ವರಯ್ಯ

ಧಾರವಾಡ :  ಕನ್ನಡದ ಹೆಸರಾಂತ ಕವಿ ಚೆನ್ನವೀರ ಕಣವಿ ಅವರು ನಾಡಿನ ಶ್ರೇಷ್ಠ ಕವಿಗಳಲ್ಲಿ ಒಬ್ಬರಾಗಿದ್ದಾರೆ. ಕಳೆದ ಏಳು ದಶಕಗಳಿಂದ ಕನ್ನಡ ಕಾವ್ಯದ ವಿವಿಧ ಘಟ್ಟಗಳ ಮೂಲಕ ಚಲಿಸಿ ಅನನ್ಯವಾದ ಕಾವ್ಯ ಶೈಲಿಯ ಮೂಲಕ ಕಾವ್ಯಾಸಕ್ತರ ಪ್ರೀತಿಗೆ ಪಾತ್ರರಾಗಿದ್ದಾರೆ. ಇವರ ಸಮಗ್ರ ಸಾಹಿತ್ಯವು ಇಂಗ್ಲೀಷಿಗೆ ಅನುವಾದವಾದರೆ ನೋಬೆಲ್ ಪುರಸ್ಕಾರಕ್ಕೆ ಯೋಗ್ಯವಾದ ಎಲ್ಲ ಅರ್ಹತೆಗಳನ್ನು ಹೊಂದಿದೆ ಎಂದು ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಚ್.ಎಮ್.ಮಹೇಶ್ವರಯ್ಯ ಹೇಳಿದರು.

  ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವದ ಅಂಗವಾಗಿ ಘೋಷಿಸಲ್ಪಟ್ಟಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ನಗರದ ಕಣವಿ ಅವರ ನಿವಾಸದಲ್ಲಿ ಪ್ರದಾನಮಾಡಿ ಮಾತನಾಡಿದರು,

ನವಿರಾದ ಭಾಷೆ, ರೂಪಕಗಳ ಮೂಲಕ ಕಣವಿ ಅವರ  ಕಾವ್ಯಸತ್ವ, ಸೌಂದರ್ಯ ಹಾಗೂ ಸದುವಿನಯದ ಹಲವು ಬಣ್ಣಗಳಲ್ಲಿ ಅರಳಿಕೊಂಡು ಕನ್ನಡ ಕಾವ್ಯ ಲೋಕದ ಶ್ರೀಮಂತಿಕೆ ಕಾರಣವಾಗಿದೆ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಇದುವರೆಗೆ ದೇಶದ 13 ಜನ ಸಾಧಕರಿಗೆ ಗೌರವ ಡಾಕ್ಟರೇಟ್ ಪುರಸ್ಕಾರ ನೀಡಿ ಗೌರವಿಸಿದೆ. ಈ ರಾಷ್ಟ್ರಮಟ್ಟದ ವಿಶ್ವವಿದ್ಯಾಲಯವು ಈ ಬಾರಿ ನೀಡಿರುವ 5 ಜನ ಗೌರವ ಡಾಕ್ಟರೇಟ್ ಪುರಸ್ಕೃತರಲ್ಲಿ ಕನ್ನಡಿಗರಿಗೆ ಹೆಚ್ಚು ಮನ್ನಣೆಯನ್ನು ಗೌರವಾನ್ವಿತ ರಾಷ್ಟ್ರಪತಿಗಳು ನೀಡಿರುವುದು ಅಭಿಮಾನದ ಸಂಗತಿಯಾಗಿದೆ ಎಂದರು.

ಪದವಿ ಸ್ವೀಕರಿಸಿ ಮಾತನಾಡಿದ ನಾಡೋಜ ಡಾ.ಚೆನ್ನವೀರ ಕಣವಿ, ಕೇಂದ್ರೀಯ ವಿಶ್ವವಿದ್ಯಾಲಯ ನೀಡಿರುವ ಗೌರವ ಡಾಕ್ಟರೇಟ್ ಪದವಿಯನ್ನು ಸಮಸ್ತ ಸಹೃದಯಿ ಕನ್ನಡಿಗರಿಗೆ ಸಮರ್ಪಣೆ ಮಾಡಿದ್ದೇನೆ. ಈ ಪದವಿಯು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವದಷ್ಟೇ ಸಮಾನವಾಗಿದೆ ಎಂದು ವಿನಯ ಪೂರ್ವಕವಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿ, ‘ಅಭಿವಂದನೆ’ ಎಂದರೆ ಗೌರವ ಪೂರ್ವಕ ನಮಸ್ಕಾರ ಎಂಬ ಕವಿತೆ ವಾಚಿಸಿದರು.

ಸಮಾರಂಭದ ಪ್ರಾರಂಭದಲ್ಲಿ  ಹಿರಿಯ ಸಾಹಿತಿ, ವಿದ್ವಾಂಸ ದಿ. ಪ್ರೊ. ಜಿ.ಎಸ್.ಅಮೂರ ಅವರಿಗೆ ನುಡಿನಮನ ಸಲ್ಲಿಸಿ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.

ವಿಶ್ವವಿದ್ಯಾಲಯದ ಪರೀಕ್ಷಾ ನಿಯಂತ್ರಕ ಡಾ.ಬಿ.ಆರ್.ಕೆರೂರ ಸ್ವಾಗತಿಸಿದರು, ಮಾನವಿಕ ಮತ್ತು ಭಾಷಾನಿಕಾಯದ ಡೀನ್ ಪ್ರೊ.ಬಸವರಾಜ ಡೋಣೂರ ಬಿನ್ನವತ್ತಳೆ ಮಂಡಿಸಿದರು. ಕುಲಸಚಿವ ಪ್ರೊ. ಮುಷ್ತಾಕ್ ಅಹ್ಮದ್ ಪಟೇಲ್ ವಂದಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ, ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಮ್. ಹಿರೇಮಠ, ಪ್ರೊ. ಎಸ್.ಎಮ್.ಶಿವಪ್ರಸಾದ, ರಾಜೇಶ್ವರಿ ಮಹೇಶ್ವರಯ್ಯ, ನಿಂಗಣ್ಣ ಕುಂಟಿ, ಬಿ.ಎಸ್. ಶಿರೋಳ, ವಿಜಯಕುಮಾರ್ ಗಿಡ್ನವರ  ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...