ಕುಸ್ತಿಪಟುಗಳ ವಿರುದ್ಧ ಪೊಲೀಸ್‌ ದೌರ್ಜನ್ಯ; ಜಾಗತಿಕ ಕುಸ್ತಿ ಸಂಘಟನೆ ಖಂಡನೆ; ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹ

Source: Vb | By I.G. Bhatkali | Published on 1st June 2023, 2:26 PM | National News |

ಹೊಸದಿಲ್ಲಿ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ರವಿವಾರ ನೂತನ ಸಂಸತ್ ಭವನಕ್ಕೆ ಕಾಲ್ನಡಿಗೆ ಜಾಥಾ ನಡೆಸಿದ ಕುಸ್ತಿಪಟುಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಸಂಯುಕ್ತ ವಿಶ್ವ ಕುಸ್ತಿ ಕ್ರೀಡೆ ಸಂಘಟನೆ (ಯುಡಬ್ಲ್ಯುಡಬ್ಲ್ಯು) ಬುಧವಾರ ಖಂಡಿಸಿದೆ.

'ಭಾರತೀಯ ಕುಸ್ತಿ ಫೆಡರೇಶನ್‌ನ ವರಿಷ್ಠ ಬ್ರಿಜ್‌ ಭೂಷಣ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳ ಬಗ್ಗೆ ನಡೆಸಲಾಗುತ್ತಿರುವ ತನಿಖೆಯ ಬಗ್ಗೆಯೂ ಯುಡಬ್ಲ್ಯುಡಬ್ಲ್ಯು ಅಸಮಾಧಾನ ವ್ಯಕ್ತಪಡಿಸಿದೆ. ಒಂದು ವೇಳೆ ಭಾರತೀಯ ಕುಸ್ತಿ ಫೆಡರೇಶನ್‌ನ ಆಡಳಿತ ಮಂಡಳಿಗೆ 45 ದಿನಗಳೊಳಗೆ ಚುನಾವಣೆಗಳು ನಡೆಯದಿದ್ದಲ್ಲಿ ಫೆಡರೇಶನ್‌ನನ್ನು ಅಮಾನ ತಿನಲ್ಲಿರಿಸುವುದಾಗಿಯೂ ಎಚ್ಚರಿಕೆ ನೀಡಿದೆ.

“ಕುಸ್ತಿಪಟುಗಳ ಬಂಧನವನ್ನು ಹಾಗೂ ಅವರನ್ನು ನಡೆಸಿಕೊಂಡ ರೀತಿಯನ್ನು ಯುಡಬ್ಲ್ಯುಡಬ್ಲ್ಯು ಬಲವಾಗಿ ಖಂಡಿಸಿದೆ. ಬ್ರಿಜ್‌ ಭೂಷಣ್ ವಿರುದ್ಧ ನಡೆಯುತ್ತಿರುವ ತನಿಖೆಯಲ್ಲಿ ಫಲಿತಾಂಶಗಳ ಕೊರತೆಯಿರುವ ಬಗ್ಗೆ ಅದು ಅಸಮಾಧಾನ ವ್ಯಕ್ತಪಡಿಸಿದೆ. ಬ್ರಿಜ್‌ ಭೂಷಣ್ ವಿರುದ್ಧದ ಆರೋಪಗಳ ಬಗ್ಗೆ ಸಮಗ್ರ ಹಾಗೂ ಪಕ್ಷಪಾತ ರಹಿತ ತನಿಖೆಯಾಗಬೇಕೆಂದು” ಯುಡಬ್ಲ್ಯುಡಬ್ಲ್ಯು ಹೇಳಿಕೆಯೊಂದರಲ್ಲಿ ತಿಳಿಸಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...