‘ಧನಾತ್ಮಕ ಚಿಂತನೆಯಿಂದ ಸಾಧನೆ ಸಾಧ್ಯ’

Source: S.O. News Service | By MV Bhatkal | Published on 7th July 2019, 6:53 PM | Coastal News | Don't Miss |

ಭಟ್ಕಳ: ಧನಾತ್ಮಕ ಚಿಂತನೆಯಿಂದ ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಜಾಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಶಾರದಾ ನಾಯ್ಕ ಹೇಳಿದರು.
ಇಲ್ಲಿನ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನಲ್ಲಿ ಈಚೆಗೆ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸುವ 'ಸಮಾಗಮ-2019' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಭಟ್ಕಳ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುರೇಶ ನಾಯಕ ಮಾತನಾಡಿ, ನಾವೆಲ್ಲರೂ ಒಂದು ಎಂಬ ಭಾವನೆಯನ್ನು ಬೆಳೆಸಿಕೊಂಡಾಗ ವಿದ್ಯಾರ್ಥಿಗಳು ತಮ್ಮ ಗುರಿ ಮುಟ್ಟಲು ಸಾಧ್ಯ ಎಂದರು.
ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನರಸಿಂಹಮೂರ್ತಿ, ಪಿಯು ಕಾಲೇಜಿನ ಪ್ರಾಂಶುಪಾಲ ವೀರೇಂದ್ರ ಶಾನುಭಾಗ್, ವಿದ್ಯಾಂಜಲಿ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಮಮತಾ ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳಾದ ಚೈತ್ರಾ ಮಹಾಲೆ, ಈರಣ್ಣ ದೊಶಗೆರ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಾದ ಶಾಯಿಲ್ ಮತ್ತು ಸಂಗಡಿಗರು ಪ್ರಾರ್ಥಿಸಿದರು.ಅನ್ಪಾಲ್ ಸ್ವಾಗತಿಸಿದರು.
ನಾಗರತ್ನಾ ವಂದಿಸಿದರು.ವಿಶಾಲ್ ನಿರೂಪಿಸಿದರು.ನಂತರ ವಿದ್ಯಾರ್ಥಿಗಳಿಂದ ಮನರಂಜನೆ ಕಾರ್ಯಕ್ರಮ ನಡೆಯಿತು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...