ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣವಾಗುವ ಸಾಧ್ಯತೆ: ಆರ್.ಗಿರೀಶ್

Source: SO News | By Laxmi Tanaya | Published on 20th September 2021, 8:32 PM | State News |

ಹಾಸನ : ಜಿಲ್ಲೆಯ ಹಲವು ದಶಕಗಳ ವಿಮಾನ ನಿಲ್ದಾಣ ಪ್ರಾರಂಭದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ಶೀಘ್ರವೇ ಕಾಮಗಾರಿ ಚಾಲನೆ ಯಾಗಲಿದೆ.
ನಾಳೆಯಿಂದಲೇ ಮಾರ್ಕಿಂಗ್ ಕಾರ್ಯ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್  ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿವಿಧ ಇಲಾಖೆ ಅಧಿಕಾರಿಗಳು, ಹಾಗೂ  ವಿಮಾನ  ಕಾಮಗಾರಿ ಗುತ್ತಿಗೆ ಪಡೆದಿರುವ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಇದೊಂದು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಕಾಲಮಿತಿಯೊಳಗೆ ಗುಣಮಟ್ಟ ಕಾಯ್ದುಕೊಂಡು ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. 

ನಗರದ ಹೊರವಲಯದ ಬೂವನಹಳ್ಳಿ ಬಳಿ ಸ್ಥಾಪಿಸಲು ಉದ್ದೇಶಿತವಾದ ವಿಮಾನ ನಿಲ್ದಾಣದ ಬಗ್ಗೆ ಜನರ ನಿರೀಕ್ಷೆ ಹೆಚ್ಚಿದ್ದು, ಯಾವುದೇ ರೀತಿಯ ವಿಳಂಬವಾಗದಂತೆ ಕೆಲಸಪ್ರಾರಂಬಿಸುವಂತೆ ನಿರ್ದೇಶನ ನೀಡಿದರು. 

ವಿಮಾನ ನಿಲ್ದಾಣ ಕಾಮಗಾರಿಗೆ ಅನುಕೂಲವಾಗುವಂತೆ ತ್ವರಿತವಾಗಿ ವಿದ್ಯುತ್ ಟವರ್‍ಗಳ ಸ್ಥಳಾಂತರ ಕಾರ್ಯ ಪೂರ್ಣಗೊಳಿಸಿ ಈ ಸಂದರ್ಭದಲ್ಲಿ ರೈತರ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ಅವರು ಕೆ.ಪಿ.ಟಿಸಿ.ಎಲ್., ಚೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಮಗಾರಿ ಶಿಲಾನ್ಯಾಸಕ್ಕೆ ಶಿಷ್ಠಾಚಾರದ ಪ್ರಕಾರ ಅತಿಥಿ ಗಣ್ಯರನ್ನು ಅಹ್ವಾನಿಸಬೇಕಾಗುತ್ತದೆ. ಪ್ರಾಥಮಿಕ ಹಂತದ ನಿಧಿ ಕಾರ್ಯವನ್ನು ಆದಷ್ಟು ಬೇಗ ಚುರುಕುಗೊಳಿಸಿ ಎಂದು ಆರ್.ಗಿರೀಶ್ ಹೇಳಿದರು.

ಕೆ.ಪಿ.ಟಿ.ಸಿ.ಎಲ್. ಸುಪ್ರಿಡೆಂಟ್ ಇಂಜಿನಿಯರ್ ಉಮೇಶ್, ಅವರು ಮಾತನಾಡಿ  ವಿಮಾನ ನಿಲ್ದಾಣಕ್ಕೆ ಗುರುತಿಸಿರುವ ಪ್ರದೇಶದಲ್ಲಿ 9 ಕಿ.ಮೀ. ಮಾರ್ಗದಲ್ಲಿ 35 ಮೀಟರ್ ವಿಸ್ತೀರ್ಣದ ಹೈಟೆನ್ಷನ್  ತಂತಿಗಳನ್ನು ಹಾಗೂ ಟವರ್‍ಗಳನ್ನು ತೆಗೆದು 17 ಕಿ.ಮೀ.  ದೂರದಿಂದ ವಿದ್ಯುತ್ ಸಂಪರ್ಕ ವಿಸ್ತರಿಸಬೇಕಾಗಿದೆ ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದ್ದು 68 ಟವರ್ ಗಳ ಪೈಕಿ 66 ಟವರ್‍ಗಳನ್ನು ಹಾಕಲಾಗಿದ್ದು 9 ಕಿ.ಮೀ ತಂತಿಗಳನ್ನು ಎಳೆಯಲಾಗಿದೆ ಇನ್ನೂ 2ಟವರ್ ಹಾಗೂ 8 ಕಿ.ಮೀ ತಂತಿಗಳನ್ನು ಅಳವಡಿಸುವ ಕಾರ್ಯ ಬಾಕಿ ಇದ್ದು 19 ಕೋಟಿ ರೂ ವೆಚ್ಚವನ್ನು ಮೂಲಭೂತ ಸೌಕರ್ಯ ಇಲಾಖೆಯಿಂದ ಒದಗಿಸಿ ಕೊಡಬೇಕಾಗಿದ್ದು, ಭೂ ಪರಿಹಾರಧನವನ್ನು ಆದಷ್ಟು ಬೇಗ ಬಿಡುಗಡೆ ಮಾಡಲಾಗುವುದು ಎಂದರು.

ಉದ್ದೇಶಿತ ಪ್ರದೇಶದ ವಿದ್ಯುತ್ ಲೈನ್‍ಅನ್ನು ಸ್ಥಳಾಂತರಿಸಲು 7.3ಕೋಟಿ ಭೂ ಪರಿಹಾರ ಧನ ಸೇರಿ 19.7 ಕೋಟಿ ರೂ ಬಿಡುಗಡೆ ಮಾಡಿಕೊಡುವಂತೆ ಕೋರಲಾಗಿದ್ದು, ಒಟ್ಟಾರೆಯಾಗಿ 34 ಎಕರೆ ಭೂ ಪ್ರದೇಶ ಇದ್ದು ಪರಿಹಾರ ನೀಡಬೇಕು ಎಂದು ತಿಳಿಸಿದರು. 

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ. ಉಪ ವಿಭಾಗಾಧಿಕಾರಿ ಬಿ.ಎ ಜಗದೀಶ್, ಚೆಸ್ಕಾಮ ಅಧಿಕ್ಷಕ ಇಂಜಿನೀಯರ್ ಅಣ್ಣೇಗೌಡ, ಕಾರ್ಯವಾಹಕ ಅಭಿಯಂತರರಾದ ಅರ್ಜುನ್, ಕೆ.ಪಿ.ಟಿ.ಸಿ.ಎಲ್ ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ನಾಗಾರ್ಜುನ್, ಕಾರ್ಯನಿರ್ವಾಹಕ  ಇಂಜಿನಿಯರ್ ಲೋಕೆಶ್, ತಹಶೀಲ್ದಾರ್ ನಟೇಶ್, ಕೆ.ಪಿ.ಟಿ.ಸಿ.ಎಲ್ ಸಹಾಯಕ ಅಭಿಯಂತರರಾದ ಕರುಣಾಕರ್ ಹಾಗೂ ಮತ್ತಿತರರು ಹಾಜರಿದ್ದರು. 
ಸಭೆಯ ನಂತರ ಉಪವಿಭಾಗಾಧಿಕಾರಿ ಬಿ.ಎ ಜಗದೀಶ್, ತಹಶೀಲ್ದಾರ್ ನಟೇಶ್, ಕಂದಾಯ ಇಲಾಖೆಯ ಚೆಸ್ಕಾಂ ಹಾಗೂ ಕೆ.ಪಿ.ಟಿ.ಸಿ.ಎಲ್ ಅಧಿಕಾರಿಗಳು, ಹಾಗೂ ವಿಮಾನ  ಕಾಮಗಾರಿ ಗುತ್ತಿಗೆ ಪಡೆದಿರುವ ಸಂಸ್ಥೆಯ ಪ್ರತಿನಿಧಿಗಳು ಭೂವನಹಳ್ಳಿ ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...